Wednesday, February 1, 2023

ಪಿ.ಯು.ಸಿ ಪೂರಕ ಪರೀಕ್ಷೆ: ಆ.12ರಿಂದ ಆ.25ರವರೆಗೆ ನಿಷೇಧಾಜ್ಞೆ

ಮಂಗಳೂರು: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಹಿನ್ನೆಲೆ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಆ.12ರಿಂದ ಆ.25ರ ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ.


ಪರೀಕ್ಷೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಿಆರ್‌ಪಿ ಕಲಂ 144ರ ಪ್ರಕಾರ ಆ.12 ರಿಂದ 25 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸುವುದು, ಚೀಟಿ ಅಥವಾ ಇನ್ನೀತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ, ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದು ಅಥವಾ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಅಥವಾ ಮಾಹಿತಿಯನ್ನು ರವಾನಿಸುವ,ತಿಳಿಸುವ ಅಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರೀಯೆಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ, ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸದಂತೆ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಆಸಾರಾಂ ಬಾಪುಗೆ 2ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ..

2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.ಅಹಮದಾಬಾದ್:‌ 2013ರಲ್ಲಿ ತನ್ನ...

ರಾಜ್ಯದಲ್ಲಿ ಚುನಾವಣಾ ಕಾವು :ಪಶ್ಚಿಮ ವಲಯ ವ್ಯಾಪ್ತಿಯ ಎಸ್ಸೈಗಳ ವರ್ಗಾವಣೆ..!

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ ಎಸ್ಸೈಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ...

ಮಂಗಳೂರು ನ್ಯಾಯಾಲಯದ ಆವರಣದಲ್ಲೇ ವಕೀಲೆಗೆ ಕೊಲೆ ಬೆದರಿಕೆ ಹಾಕಿದ ಆರೋಪಿ..!

ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ‌ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು...