Thursday, September 29, 2022

ಇನ್ನೂ 3-4 ದಿನ ಭಾರೀ ಮಳೆ: ಹಲವು ಕಡೆಗಳಲ್ಲಿ ಪ್ರವಾಹ ಭೀತಿ-ಹವಾಮಾನ ಇಲಾಖೆ ಎಚ್ಚರಿಕೆ

ಹೊಸದಿಲ್ಲಿ: ಕೇಂದ್ರ ಭಾರತ ಮತ್ತು ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಮುಂದಿನ 3-4 ದಿನಗಳವರೆಗೆ 200 ಮಿಲಿಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.


ಶನಿವಾರ ಸಂಜೆ ವಾಯವ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಇದು ವಾಯವ್ಯ ಮುಖವಾಗಿ ಒಡಿಶಾ ಹಾಗೂ ಛತ್ತೀಸ್‍ಗಢದತ್ತ ಬಲವಾದ ಗಾಳಿ ಬೀಸುವ ನಿರೀಕ್ಷೆ ಇದೆ ಎಂದು ಹೇಳಿದೆ.

ಇದರಿಂದಾಗಿ ಮುಂದಿನ 4-5 ದಿನಗಳ ಕಾಲ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಜೊತೆಗೆ ಕರ್ನಾಟಕ ರಾಜ್ಯದಲ್ಲೂ ಭಾರಿ ಮಳೆ ಮತ್ತು ಗಾಳಿಯ ಬಗ್ಗೆ ಕೂಡ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 65 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ.

ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳದಲ್ಲೂ ವ್ಯಾಪಕ ಮಳೆಯಾಗಲಿದ್ದು, ಚಂಡಮಾರುತ ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಗುಜರಾತ್ ಮೂಲಕ ಹಾದುಹೋಗುವ ನಿರೀಕ್ಷೆ ಇದೆ ಎಂದು ಹೇಳಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮೀನುಗಾರಿಕಾ ಜೆಟ್ಟಿ ಕುಸಿತ-ಅವೈಜ್ಞಾನಿಕ ಕಾಮಗಾರಿ ವಿರುದ್ಧ ಮೀನುಗಾರರ ಆರೋಪ

ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ.ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ....

ಉಡುಪಿ: PFIಗೆ ಸೇರಿದ ಹಲವು ಕಚೇರಿಗಳು ಸೀಝ್-SDPI ಕಚೇರಿಗೆ ಬೀಗ ಜಡಿದ ಪೊಲೀಸರು

ಉಡುಪಿ: ಪಿಎಫ್‌ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್‌...

ಮಂಗಳೂರು: ರಥಬೀದಿಯ ಶಾರದಾ ಮಹೋತ್ಸವದಲ್ಲಿ ಸಾಮೂಹಿಕ ಕುಂಕುಮಾರ್ಚನೆ

ಮಂಗಳೂರು: ನಗರದ ರಥಬೀದಿಯಲ್ಲಿ 100ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾಯಾಗವನ್ನು ಆಯೋಜಿಸಲಾಗಿದೆ.ಇದರ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕೂಡಾ ನೆರವೇರಿಸುತ್ತಿದ್ದು ನೂರಾರು ಮಾತೃವರ್ಗ...