DAKSHINA KANNADA
ವಿವಾದಿತ ಸುರತ್ಕಲ್ ಟೋಲ್ಗೇಟ್ ಮುಚ್ಚಲು 3 ದಿನದ ಡೆಡ್ಲೈನ್..!
ಮಂಗಳೂರು: ಜೂ.22ರಿಂದ ಸುರತ್ಕಲ್ ಟೋಲ್ಗೇಟ್ನಲ್ಲಿ ಸುಂಕ ವಸೂಲಾತಿ ಮಾಡಬಾರದು. ಒಂದು ವೇಳೆ ಟೋಲ್ ಮುಂದುವರೆಸಿದ್ದೇ ಆದಲ್ಲಿ ಟೋಲ್ಗೇಟ್ ಮುತ್ತಿಗೆ ಚಳುವಳಿ ಮಾಡುತ್ತೇವೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ನಲ್ಲಿ ಇನ್ನು 90 ದಿನಗಳ ಒಳಗಾಗಿ ಅಕ್ರಮ ಟೋಲ್ ಅನ್ನು ತೆರವು ಮಾಡುತ್ತೇವೆಂದು ಸ್ವತಃ ಕೇಂದ್ರ ಹೆದ್ದಾರಿ ಸಚಿವರು ಹೇಳಿಕೆ ನೀಡಿದ್ದರು.
ಅದಕ್ಕೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಆದರೆ ಟೋಲ್ ತೆರವಿಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಜೊತೆಗೆ ಟೋಲ್ ಗುತ್ತಿಗೆ ನವೀಕರಣ ನಡೆದಿದೆ. ಇದು ನಮಗೆ ಅಘಾತ ತಂದಿದೆ ಎಂದರು.
ಈ ಬಗ್ಗೆ ಕೊಟ್ಟ ಮಾತನ್ನು ಉಳಿಸಬೇಕಾದ ಸಂಸದರು ಪ್ರತಿಕ್ರಿಯಿಸುತ್ತಿಲ್ಲ. ಟೋಲ್ ಗೇಟ್ ವಿಷಯ ಎತ್ತಿದರೆ ಸ್ಥಳೀಯ ಶಾಸಕ ಭರತ್ ಶೆಟ್ಟಿ ಸಿಡಿಮಿಡಿಗೊಳ್ಳುತ್ತಿದ್ದಾರೆ. ಜೊತೆಗೆ ಟೋಲ್ಗೇಟ್ ಹೋರಾಟಗಾರರು ದುಡ್ಡು ಪಡೆದಿದ್ದಾರೆ, ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅದನ್ನು ಅವರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ ಕ್ಷಮೆ ಕೇಳಿ ಎಂದು ಆಗ್ರಹಿಸಿದರು. ಇವರ ಹೇಳಿಕೆಯಿಂದ ಈ ಹೋರಾಟದಲ್ಲಿ ಮುಂದಾಳತ್ವ ವಹಿಸಿದ್ದ ಮಾಜಿ ಶಾಸಕರುಗಳಾದ ವಿಜಯ್ಕುಮಾರ್ ಶೆಟ್ಟಿ, ಅಮರನಾಥ ಶೆಟ್ಟಿ ಹಾಗೂ ಕಾರ್ಮಿಕ ಮುಂದಾಳು ಎಂ.ಎನ್ ಅಡ್ಯಂತಾಯ ಇವರಿಗೆ ಮಾಡಿದ ಅವಮಾನ ಮಾಡಿದ್ದಾರೆ. ಒಂದು ವೇಳೆ ಈ ಹೋರಾಟದ ನೇತೃತ್ವ ವಹಿಸುವುದಾದರೆ ಸಂಚಾಲಕ ಸ್ಥಾನವನ್ನು ಅವರಿಗೆ ಬಿಟ್ಟುಕೊಡುತ್ತೇವೆ ಬರಲಿ ಎಂದರು.
ನಿಮ್ಮ ಹಿತಾಸಕ್ತಿಗೋಸ್ಕರ ದಿನಕ್ಕೆ 16 ರಿಂದ 18 ಲಕ್ಷ ರೂಪಾಯಿ ಸಂಗ್ರಹವಾಗುವ ಖಜಾನೆ ಮೇಲೆ ಇವರು ಕಣ್ಣಿಟ್ಟಿದ್ದಾರೆ. ಟೋಲ್ ಗುತ್ತಿಗೆ ಮತ್ತು ಉಪಗುತ್ತಿಗೆಯವರ ಜೊತೆ ಯಾವುದೇ ಸಂಬಂಧವಿಲ್ಲ ಎಂದು ಶಾಸಕ-ಸಂಸದರು ಹೇಳಲಿ. ಇಲ್ಲವೇ ತೆರವು ಮಾಡಲಾಗುವುದಿಲ್ಲ ಎಂದು ಒಪ್ಪಿಕೊಂಡು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಸ್ಥಳೀಯ ಶಾಸಕರು ಯಾವುದೇ ಜನಪಯೋಗಿ ಕೆಲಸ ಮಾಡಿಲ್ಲ. ಜೊತೆಗೆ ಈ ಹಿಂದಿನ ಶಾಸಕರು ತಂದ ಯೋಜನೆಯನ್ನು ಪೂರ್ತಿಗೊಳಿಸಲೂ ಆಗಲಿಲ್ಲ.
ಸುರತ್ಕಲ್ ಮಾರ್ಕೆಟ್ ರೋಡ್, ಎಂಆರ್ಪಿಎಲ್ನಲ್ಲಿ ಉದ್ಯೋಗ ಕೊಡಲಾಗಲಿಲ್ಲ. ಒಂದು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆರಿಸಲಾಗಿಲ್ಲ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಚಿತ್ರಾಪುರ, ಎಂ.ದೇವದಾಸ್, ದಿನೇಶ್ ಹೆಗ್ಡೆ ಉಳೆಪಾಡಿ, ವೈ.ರಾಘವೇಂದ್ರ ರಾವ್, ರಮೇಶ್ ಕೋಟ್ಯಾನ್, ಬಿ.ಕೆ ಇಮ್ತಿಯಾಜ್, ಪ್ರತಿಭಾ ಕುಳಾಯಿ ಸೇರಿ ಹೋರಾಟಗಾರರು ಉಪಸ್ಥಿತರಿದ್ದರು.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ