Connect with us

    LATEST NEWS

    ಪ. ಬಂಗಾಳದಲ್ಲಿ ಮೂರು ದಿನಗಳ ಲಾಕ್‍ಡೌನ್: ದುರ್ಗಾ ಪೂಜೆ ಬಳಿಕ ಸೋಂಕು ಹೆಚ್ಚಳ

    Published

    on

    ಕೊಲ್ಕತ್ತಾ: ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾಪುರ ಪುರಸಭೆ ಪ್ರದೇಶದಲ್ಲಿ ಮೂರು ದಿನಗಳ ಲಾಕ್‍ಡೌನ್ ವಿಧಿಸಲಾಗಿದೆ.

    ಸೋನಾಪುರ್‌ನಿಂದ ಪಶ್ಚಿಮ ಬಂಗಾಳ ರಾಜಧಾನಿ ಕೊಲ್ಕತ್ತಾಗೆ ಕೇವಲ 20 ಕಿ.ಮೀ. ಅಂತರವಿದೆ.
    ಸೋಂಕು ವೇಗವಾಗಿ ಹರಡುವ ಭೀತಿಯಿಂದ ಲಾಕ್‍ಡೌನ್ ಕ್ರಮಕೈಗೊಳ್ಳಲಾಗಿದೆ.

    ಲಾಕ್‍ಡೌನ್ ಅವಧಿಯಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ಇರುತ್ತದೆ. ಸೋನಾಪುರ್ ಪ್ರದೇಶದಲ್ಲಿ ಒಟ್ಟು 19 ಕಂಟೇನ್‍ಮೆಂಟ್ ಜೋನ್‍ಗಳಿವೆ.
    ಐಸಿಎಂಆರ್‌ಯು ಬಂಗಾಳ ಸರ್ಕಾರಕ್ಕೆ ಪತ್ರ ಬರೆದಿದ್ದು, ದುರ್ಗಾ ಪೂಜೆ ಹಬ್ಬಗಳ ನಂತರ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಕಳವಳ ವ್ಯಕ್ತಪಡಿಸಿದೆ. ಹಬ್ಬದಿಂದಾಗಿ ಶೇ. 25ರಷ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ.

    ಕಳೆದ 24 ಗಂಟೆಗಳಲ್ಲಿ ಕೊಲ್ಕತ್ತಾದಲ್ಲೇ 248 ಹೊಸ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    “ಕೋವಿಡ್-19 ಲಸಿಕೆಯ ಎರಡೂ ಡೋಸ್ ಪಡೆದ ಹೆಚ್ಚಿನವರಲ್ಲೇ ಕೊರೊನಾ ಸೋಂಕು ದೃಢಪಟ್ಟಿದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

    LATEST NEWS

    ಮಳೆ ಆರ್ಭಟ; ಕೃಷ್ಣೆಗೆ ಭಾಗಿನ ಅರ್ಪಿಸಲು ಹೋಗಿ ಯುವಕ ನೀರು ಪಾ*ಲು

    Published

    on

    ಮಳೆ ಬಂದ್ರೆ ಇಳೆಗೆ ಜೀವ ಕಳೆ. ಅದೇ ಮಳೆ ರೌದ್ರನರ್ತನ ಮೆರೆದ್ರೆ ಸಾ*ವು-ನೋವಿನ ಸೆಲೆ. ರಾಜ್ಯದ ಅಷ್ಟ ದಿಕ್ಕುಗಳಲ್ಲೂ ಅಬ್ಬಿರಿಸಿ ಬೊಬ್ಬರಿಯುತ್ತಿರೋ ವರುಣ ಸಾ*ವು ನೋವಿನ ಸಂಕಷ್ಟಗಳ ಸರಮಾಲೆಗೆ ಸಾಕ್ಷಿಯಾಗಿದ್ದಾನೆ.

    ಕೃಷ್ಣಾ ನದಿಗೆ ಭಾಗಿನ ಅರ್ಪಿಸಲು ಹೋದ ಯುವಕ ಸಾ*ವು

    ಕೃಷ್ಣಾ ನದಿಯ ಹಿನ್ನೀರಿನಲ್ಲಿ ಭಾಗಿನ ಅರ್ಪಿಸಲು ಹೋದ ಯುವಕ ನೀರುಪಾ*ಲಾಗಿರೋ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

    ಈಜಲು ಬರದ ಹಿನ್ನಲೆ 28 ವರ್ಷದ ಯುವಕ ರೋಹಣ ಪಾಟೀಲ ಆಯತಪ್ಪಿ ನೀರಿಗೆ ಬಿದ್ದು ಸಾ*ವನ್ನಪ್ಪಿದ್ದಾನೆ. ಸ್ಥಳೀಯರ ಸಹಾಯದಿಂದ ಬೋಟ್ ಮೂಲಕ ರೋಹಣ ಪಾಟೀಲ ಮೃ*ತದೇಹ ಹೊರ ತೆಗೆಯಲಾಗಿದೆ.

    Continue Reading

    LATEST NEWS

    ಕೇಂದ್ರ ಬಜೆಟ್ 2024 : ಗಮನ ಸೆಳೆದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀರೆ

    Published

    on

    ಮಂಗಳೂರು / ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ.  ಪ್ರತೀ ವರ್ಷದಂತೆ ಈ ವರ್ಷವೂ ಅವರ ಸೀರೆ ಗಮನ ಸೆಳೆದಿದೆ. ಅವರು ಮೆಜೆಂಟಾ ಮತ್ತು ಗೋಲ್ಡ್ ಬಾರ್ಡರ್ ಹೊಂದಿರುವ ಬಿಳಿ ಚೆಕ್ ಸೀರೆಯನ್ನು ಉಟ್ಟಿದ್ದಾರೆ.


    ಸತತ ಏಳನೇ ಬಜೆಟ್ ಮಂಡಿಸುತ್ತಿರುವ ಮೊದಲ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಹೊರಹೊಮ್ಮಿದ್ದಾರೆ. ಇದು ಭಾರತದ ಇತಿಹಾಸದ ಪುಟ ಸೇರಿದೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಕೈಮಗ್ಗ ಸೀರೆ ಸಂಗ್ರಹ ಅಧಿಕ. ಹೀಗಾಗಿ ಇದು ಎಲ್ಲರ ಗಮನ ಸೆಳೆಯುತ್ತದೆ. ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲು ಸಂಸತ್ತಿಗೆ ತೆರಳುತ್ತಿದ್ದಾಗ,  ತಮ್ಮ ತಂಡದೊಂದಿಗೆ ಫೋಟೋಗೆ ಫೋಸ್ ನೀಡಿದರು. ಅವರು ಚೌಕಾಕಾರದ ಚೆಕ್ ಮತ್ತು ಚಿನ್ನದ ಕಸೂತಿಯೊಂದಿಗೆ ಅಗಲವಾದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಬೇಸ್ ಕೈಮಗ್ಗ ಸೀರೆಯಲ್ಲಿ ಕಂಗೊಳಿಸುತ್ತಿದ್ದರು.

    Continue Reading

    DAKSHINA KANNADA

    ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡಿ; ರಾಜ್ಯ ಸರಕಾರಕ್ಕೆ ದ.ಕ. ಹಾಲು ಒಕ್ಕೂಟ ಪ್ರಸ್ತಾವನೆ

    Published

    on

    ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಲು ಉತ್ಪಾದಕರಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸೂಚಿಸುವಂತೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ.

    ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪ್ರಸಕ್ತ ಹೈನುಗಾರರಿಗೆ ಲೀಟರ್‌ಗೆ ಕನಿಷ್ಠ 35 ರೂ. ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಮೊತ್ತ 5 ರೂ. ಸೇರಿ ಒಟ್ಟು 40 ರೂ. ನೀಡಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ದಿನಕ್ಕೆ ಸರಾಸರಿ 3,91,367 ಲೀ. ಹಾಲು ಉತ್ಪಾದನೆಯಾಗುತ್ತಿದ್ದು ಕೊರತೆ ಸರಿದೂಗಿಸಲು ಹೊರ ಜಿಲ್ಲೆಗಳಿಂದ 1 ಲಕ್ಷ ಲೀಟರ್‌ ಹಾಲು ಖರೀದಿಸಲಾಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿ ದರೆ ನಮ್ಮಲ್ಲಿ ಉತ್ಪಾದನ ವೆಚ್ಚವೂ ಅಧಿಕ. ಅದಕ್ಕಾಗಿ ಮತ್ತೆ 5 ರೂ. ಮೊತ್ತವನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಳ ನಿರೀಕ್ಷಿಸಬಹುದು ಎಂದರು.

    ನಂದಿನಿ ಪಶು ಆಹಾರ ಚೀಲಕ್ಕೆ 1,350 ರೂ. ದರವಿದ್ದು, ಆಗಸ್ಟ್‌ 1ರಿಂದ ಹೈನುಗಾರರಿಗೆ ಪ್ರತಿ ಚೀಲಕ್ಕೆ 25 ರೂ. ಸಬ್ಸಿಡಿ ನೀಡಲಾಗುವುದು. ಇದರಿಂದ ಒಕ್ಕೂಟಕ್ಕೆ 30 ಲಕ್ಷ ರೂ. ಹೊರೆಯಾಗಲಿದೆ. ಇದಲ್ಲದೆ ಪಶು ಸಾಕಣೆ, ಮೇವು ಮುಂತಾದವುಗಳಿಗೆ ಸಬ್ಸಿಡಿ ಯೋಜನೆ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಶೂನ್ಯಬಡ್ಡಿ ಸಾಲ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಸ್‌.ಬಿ.ಜಯರಾಮ ರೈ ಬಳಜ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್‌, ಪದ್ಮನಾಭ ಶೆಟ್ಟಿ, ಸುಧಾಕರ ರೈ, ಬೋಳ ಸದಾಶಿವ ಶೆಟ್ಟಿ, ನರಸಿಂಹ ಕಾಮತ್‌, ಕಮಲಾಕ್ಷ ಹೆಬ್ಟಾರ್‌, ಸವಿತಾ ಎನ್‌.ಶೆಟ್ಟಿ, ಸ್ಮಿತಾ ಆರ್‌.ಶೆಟ್ಟಿ, ಸುಭದ್ರಾ ರಾವ್‌, ವ್ಯವಸ್ಥಾಪಕ ನಿರ್ದೇಶಕ ವಿವೇಕ್‌, ಮಾರುಕಟ್ಟೆ ಮುಖ್ಯಸ್ಥ ರವಿರಾಜ್‌ ಉಡುಪ ಉಪಸ್ಥಿತರಿದ್ದರು.

    Continue Reading

    LATEST NEWS

    Trending