Monday, July 4, 2022

ಪ್ರವಾಸಕ್ಕೆ ಬಂದಿದ್ದ ಕೇರಳದ 3 ಯುವಕರು ಮಲ್ಪೆಯ ಸೈಂಟ್ ಮೇರಿಸ್ ಐಲ್ಯಾಂಡ್‌ನಲ್ಲಿ ನೀರುಪಾಲು

ಉಡುಪಿ: ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಈಜಾಡಲು ಹೋಗಿ ನೀರುಪಾಲಾದ ಘಟನೆ ಉಡುಪಿಯ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಬೀಚ್‌ನಲ್ಲಿ ನಡೆದಿದೆ.


ಮೃತಪಟ್ಟ ಯುವಕರನ್ನು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಅಲೆನ್ ರೇಜಿ, ಅಮಲ್ ಸಿ ಅನಿಲ್, ಅಂಟೋನಿ ಶೆಣೈ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಕೇರಳದಿಂದ ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದರು.

ಆದರೆ ದ್ವೀಪ ಪ್ರದೇಶದ ಅಪಾಯಕಾರಿ ಸಮುದ್ರ ಭಾಗದಲ್ಲಿ ಇಳಿದ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಡೆಯಾಗಿ ಸಾವನ್ನಪ್ಪಿದ್ದಾರೆ.

ಈಗಾಗಲೇ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದ್ದು ಮುಳುಗಡೆಯಾದ ಮತ್ತೋರ್ವ ವಿದ್ಯಾರ್ಥಿ ಅಂಟೋನಿ ಶೆಣೈಗೆ ಶೋಧ ಕಾರ್ಯ ನಡೆಯುತ್ತಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...

ಕಣಿವೆಗೆ ಉರುಳಿದ ಶಾಲಾ ಬಸ್‌: 16 ವಿದ್ಯಾರ್ಥಿಗಳು ಕೊನೆಯುಸಿರು

ಕುಲು: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ ಕಣಿವೆಗೆ ಉರುಳಿ ಬಿದ್ದ ಪರಿಣಾಮ 16 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ...

“ನ್ಯಾಯಮೂರ್ತಿಗಳ ವೈಯುಕ್ತಿಕ ದಾಳಿ ನಡೆಸುವ ಸೋಷಿಯಲ್‌ ಮೀಡಿಯಾ ಅಪಾಯಕಾರಿ”

ನವದೆಹಲಿ: ನ್ಯಾಯಧೀಶರ ಕುರಿತು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ.ಸಂವಿಧಾನದಡಿ ಕಾನೂನು ಸುವ್ಯವಸ್ಥೆ ಕಾಪಾಡಲು ದೇಶದಲ್ಲಿ ಇವುಗಳ ಕಡ್ಡಾಯವಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್...