Saturday, March 6, 2021

20.20 ಲಕ್ಷ ರೂ ವೆಚ್ಚದಲ್ಲಿ ಮುತ್ತೂರು ಗ್ರಾಮದಲ್ಲಿ 3 ರಸ್ತೆ ಅಭಿವೃದ್ಧಿ; ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ..!

20.20 ಲಕ್ಷ ರೂ ವೆಚ್ಚದಲ್ಲಿ ಮುತ್ತೂರು ಗ್ರಾಮದಲ್ಲಿ 3 ರಸ್ತೆ ಅಭಿವೃದ್ಧಿ; ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ..!

ಮಂಗಳೂರು:  ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು. ಕೊಳವೂರು ಗ್ರಾಮದ ಲಕ್ಷ್ಮಣ್ ಕುಮಾರ್ ರವರ ಮನೆಯ ಬಳಿ ಏಳು ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಅದೇ ಪರಿಸರದಲ್ಲಿ ಅಟ್ಟೆಪದವು ಪದ್ಮರವರ ಮನೆಯ ಬಳಿ ಏಳು ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಮಂಗಳೂರು ತಾಲೂಕಿನ ಮುತ್ತೂರು ಬಾಳಿಕೆ ರಸ್ತೆಯನ್ನು 6.20 ಲಕ್ಷ ರೂಪಾಯಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ 

ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್ ಶೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಬಳ್ಳಾಜೆ, ಉಪಾಧ್ಯಕ್ಷರಾದ ಮಾಲತಿ ಗಿರೀಶ, ಪಂಚಾಯತ್ ಸದಸ್ಯರುಗಳಾದ ಪ್ರವೀಣ ಆಳ್ವ,ಸುಷ್ಮ ಸಂತೋಷ್, ಶಶಿಕಲಾ ಗಿರೀಶ್, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಸಾದ್, ಕುಳವೂರು ಶಕ್ತಿಕೇಂದ್ರ ಅಧ್ಯಕ್ಷರಾದ ಮಹಾಬಲ ಕೆ, ಸಾಲ್ಯಾನ್, ಸಹ ಪ್ರಮುಖರಾದ ವಿಜಯಕುಮಾರ್ ಶೆಟ್ಟಿ, ಎಸ್ಸಿ ಮೋರ್ಚಾದ ಜಿಲ್ಲಾ ಸದಸ್ಯರಾದ ಹೊನ್ನಯ್ಯ ಅಟ್ಟೆಪದವು, ಮಂಡಲ ಎಸ್ ಸಿ ಮೋರ್ಚಾ ಸದಸ್ಯರಾದ ರಮೇಶ ಮತ್ತು ಸತೀಶ, ಕೊಳವೂರು ವಾರ್ಡ್ ಅಧ್ಯಕ್ಷರಾದ ಶೇಖರ್, ಹಾಗೂ ನಾಗರಿಕರು, ಪಕ್ಷದ ಹಿರಿಯರು ಕಾರ್ಯಕರ್ತರು ಉಪಸ್ಥಿತರಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...