Wednesday, October 5, 2022

ಕಪ್ಪೆ ಚಿಪ್ಪು ಹೆಕ್ಕಲು ಹೋಗಿದ್ದ ಮೂವರು ನೀರುಪಾಲು

ಅಂಕೋಲಾ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿದ್ದ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ‌
ಅಂಕೋಲಾ ತಾಲೂಕಿನ ಕರಿಕಲ್ ಕಡಕಾರ ಬಳಿಯ ಗಂಗಾವಳಿ ನದಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.


ಅಂಕೋಲಾದ ಕಡಕಾರ ಮಜಿರೆ ನಿವಾಸಿ ಪೂಜಾ ಮಹೇಶ ನಾಯ್ಕ, ಕುಮಟಾ ತಾಲೂಕಿನ ಕೋನಳ್ಳಿಯ ದಿಲೀಪ ನಾಯ್ಕ, ಅಘನಾಶಿನಿ ಗ್ರಾಮದ ನಾಗೇಂದ್ರ ನಾಯ್ಕ ಮೃತ ದುರ್ದೈವಿಗಳಾಗಿದ್ದಾರೆ.
ಪೂಜಾ ನಾಯ್ಕ ಪಿ.ಯು.ಸಿ ಓದುತ್ತಿದ್ದು ದಿಲೀಪ ಮತ್ತು ನಾಗೇಂದ್ರ ಆಕೆಯ ಸಂಬಂಧಿಕರೆಂದು ತಿಳಿದುಬಂದಿದೆ.
ಮೂವರ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...