LATEST NEWS
ಕೋಳಿ ತಿಂದ ಹುಲಿ, ಚಿರತೆ ಸಾ*ವು; ಹಕ್ಕಿ ಜ್ವರಕ್ಕೆ ಬ*ಲಿಯಾದ ಶಂಕೆ..!
Published
9 hours agoon
By
NEWS DESK4ಮಂಗಳೂರು/ ನವದೆಹಲಿ : ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ರಕ್ಷಣಾ ಕೇಂದ್ರದಲ್ಲಿ ಸಾ*ವನ್ನಪ್ಪಿದ ಮೂರು ಹುಲಿಗಳು ಮತ್ತು ಚಿರತೆ ಹಕ್ಕಿ ಜ್ವರದ ಸೋಂಕಿಗೊಳಗಾಗಿದ್ದ ಕೋಳಿ ತಿಂದ ಬಳಿಕ ಸಾ*ವನ್ನಪ್ಪಿರಬಹುದು ಎಂದು ರಾಜ್ಯ ಅರಣ್ಯ ಸಚಿವ ಗಣೇಶ್ ನಾಯಕ್ ಗುರುವಾರ (ಜನವರಿ 9) ತಿಳಿಸಿದ್ದಾರೆ.
ಚಂದ್ರಾಪುರಕ್ಕೆ ಭೇಟಿ ನೀಡುವ ಮೊದಲು ನಾಗ್ಪುರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ಲ್ಯಾಬ್ ಪರೀಕ್ಷಾ ವರದಿ ಇನ್ನೂ ಕೈಸೇರದ ಕಾರಣ ಇದನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದರು.
ಇದನ್ನೂ ಓದಿ : 9/11 ದಾಳಿ: ಆರೋಪಿಗಳಿಗೆ ಗಲ್ಲು ಶಿಕ್ಷೆಯಿಂದ ಪಾರಾಗುವ ಅವಕಾಶ ?
ಪ್ರಾಣಿಗಳಿಗೆ ಆಹಾರ ನೀಡುವ ಮೊದಲು ಆಹಾರವನ್ನು ಪರಿಶೀಲಿಸಲು ಸಂಬಂಧಪಟ್ಟ ಮೃಗಾಲಯಗಳ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ಸಾ*ವಿಗೆ ಸ್ಪಷ್ಟ ಕಾರಣ ತಿಳಿದು ಬರಲಿದೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದು, ಬಳಿಕ ಮಾಹಿತಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ಸಾ*ವನ್ನಪ್ಪಿದ್ದ ಹುಲಿಗಳು ಮತ್ತು ಚಿರತೆಯನ್ನು ಪ್ರಾಣಿ – ಮಾನವ ಸಂಘ*ರ್ಷದಿಂದ ರಕ್ಷಿಸಿ ಇಲ್ಲಿನ ಗೊರೆವಡಾ ರಕ್ಷಣಾ ಕೇಂದ್ರಕ್ಕೆ ತಂದು ಬಿಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
LATEST NEWS
ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್
Published
6 hours agoon
09/01/2025By
NEWS DESK4ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
LATEST NEWS
ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!
Published
6 hours agoon
09/01/2025By
NEWS DESK2ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
LATEST NEWS
ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Published
6 hours agoon
09/01/2025By
NEWS DESK4ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
ಇದನ್ನೂ ಓದಿ : ಫ್ರಿಡ್ಜ್‌ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ಗೊತ್ತಾ..?
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.