ನವದೆಹಲಿ: ಇಂದಿಗೆ ಮೂರು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಪಾಪಿ ಪಾಕಿಸ್ತಾನದ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದರು. 2019ರ ಫೆಬ್ರವರಿ 14ರಂದು ಈ ಉಗ್ರರ ದಾಳಿ ನಡೆದಿತ್ತು.
ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸಿಆರ್ಪಿಎಫ್ ಸಿಬ್ಬಂದಿಯನ್ನು ಹೊತ್ತ ಬಸ್ಗೆ ಸ್ಫೋಟಕ ತುಂಬಿದ್ದ ವಾಹನವನ್ನು ಡಿಕ್ಕಿ ಹೊಡೆಸಿದ ಪರಿಣಾಮ, ಭಾರತೀಯ ಯೋಧರು ವೀರ ಮರಣವನ್ನಪ್ಪಿದ್ದರು.
ಪಾಕಿಸ್ತಾನಿ ಉಗ್ರರ ಅಟ್ಟಹಾಸಕ್ಕೆ ಸಿಲುಕಿ 39ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಅಲ್ಲದೆ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು.
ಜೈಷ್-ಎ-ಮೊಹಮ್ಮದ್ ಎಂಬ ಭಯೋತ್ಪಾದಕ ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿತ್ತು.
ಈ ದಾಳಿಯ ಬಳಿಕ ಭಾರತವು ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯ ಬಾಲಕೋಟ್ನಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಲಾಗಿತ್ತು.