Wednesday, December 1, 2021

ಪಾಕಿಸ್ಥಾನಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ : 30 ಸಾವು 50 ಕ್ಕೂ ಹೆಚ್ಚು ಜನ ಗಂಭೀರ ಗಾಯ..!

ಪಾಕಿಸ್ತಾನ : ದಕ್ಷಿಣ ಪಾಕಿಸ್ತಾನದಲ್ಲಿ ಇಂದು ಬೆಳಿಗ್ಗೆ ನಡೆದ ಎರಡು ಪ್ರಯಾಣಿಕ ರೈಲುಗಳು ಪರಸ್ಪರ ಡಿಕ್ಕಿಯಿಂದ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 50 ಮಂದಿಯನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ರೆಟಿ ಮತ್ತು ದಹರ್ಕಿ ರೈಲು ನಿಲ್ಧಾಣದ ಮಧ್ಯೆ ಈ ದುರಂತ ಸಂಭವಿಸಿದೆ.

ಪಾಕಿಸ್ಥಾನದ ದಕ್ಷಿಣ ಸಿಂಧ್ ನ ಗೋಟ್ಕಿ ಜಿಲ್ಲೆಯಲ್ಲಿ ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಮತ್ತು ಮಿಲ್ಲಟ್ ಎಕ್ಸ್ ಪ್ರೆಸ್ ಮಧ್ಯೆ ದುರಂತ ಸಂಭವಿಸಿದ್ದು, ರೈಲುಗಳ ಸಿಗ್ನಲ್ ವ್ಯವಸ್ಥೆಯಲ್ಲಿನ ದೋಷಗಳೇ ಈ ಭೀಕರ ಅಪಘಾತಕ್ಕೆ ಕಾರಣವಾಗಿದ್ದು ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ರೈಲು ಗಳ ಮುಖಾಮುಖಿ ಢಿಕ್ಕಿಯಿಂದ ಸುಮಾರು 13 ಬೋಗಿಗಳು ಹಳಿ ತಪ್ಪಿದ್ದು ಇದರಲ್ಲಿ ಆರು ಬೋಗಿಗಳು ಸಂಪೂರ್ಣ ಜಖಂ ಗೊಂಡಿವೆ.

ನುಜ್ಜು ಗುಜ್ಜಾದ ಬೋಗಿಗಳ ಮಧ್ಯೆಯಿಂದ ಗಾಯಾಳುಗಳನ್ನು ಮತ್ತು ಶವಗಳನ್ನು ಹೊರ ತೆಗೆಯಲು ರಕ್ಷಣಾ ಪಡೆಯವರು ಹರ ಸಾಹಸ ಪಡೆಯಬೇಕಾಯಿತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...