Connect with us

    DAKSHINA KANNADA

    30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಡಾ.ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ !!

    Published

    on

    ಮೂಡುಬಿದಿರೆ : 30 ನೇ ವರ್ಷಕ್ಕೆ ಕಾಲಿಟ್ಟಿರುವ ಮೂಡುಬಿದಿರೆಯ ಆಳ್ವಾಸ್ ವಿರಾಸತ್‌ ಕಲಾ ವೈಭಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಾ. ವೀರೇಂದ್ರ ಹೆಗ್ಗೆಡೆಯವರು ಚಾಲನೆ ನೀಡಿದ್ದಾರೆ. ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಗಿದ್ದು, ಕಾರ್ಯಕ್ರಮದಲ್ಲಿ ಅದ್ಧೂರಿ ಸಾಂಸ್ಕೃತಿಕ ಮೆರವಣಿಗೆ ಜನರ ಕಣ್ಮನ ಸೆಳೆದಿದೆ.

    ನಿನ್ನೆ (ಡಿ.10) ಸಂಜೆ 5.30ಕ್ಕೆ ಸರಿಯಾಗಿ ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ ಶ್ರೀಪತಿ ಭಟ್ ವೇದಿಕೆಯಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಗಿದೆ. ಎಂ ಆರ್ ಜಿ ಗ್ರೂಪ್ಸ್‌ ನ ಡಾ. ಪ್ರಕಾಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನೆರವೇರಿದೆ. ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಮೂಡುಬಿದಿರೆಯು ಕಲಾ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಉದ್ಘಾಟನೆಯ ಬಳಿಕ ಮಾತನಾಡಿದ ಡಾ. ವಿರೇಂದ್ರ ಹೆಗ್ಗಡೆಯವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಲಾ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಸಾಹಿತ್ಯದ ಜೊತೆಗೆ ಸಂಸ್ಕೃತಿಯನ್ನು ಜನರಿಗೆ ನೀಡುವ ಈ ಸಾಂಸ್ಕೃತಿಕ ಹಬ್ಬ ನಿಜಕ್ಕೂ ಅರ್ಥ ಪೂರ್ಣವಾಗಿದೆ. ಡಾ. ಮೋಹನ್ ಆಳ್ವಾ ಅವರಿಗೆ ಇದರಲ್ಲಿನ ಆಸಕ್ತಿಯಿಂದ ಜನರಲ್ಲೂ ಆಸಕ್ತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಹೀಗೇ ಎಲ್ಲಾ ವಿಭಾಗದಲ್ಲೂ ಕಾಳಜಿ ವಹಿಸಿ ಜನರಿಗೆ ತಲುಪಿಸಬೇಕು” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಬಳಿಕ ಅಧ್ಯಕ್ಷೀಯ ಭಾಷಣ ಮಾಡಿದ ಎಂ ಆರ್ ಜಿ ಗ್ರೂಪ್‌ ಅಧ್ಯಕ್ಷ ಡಾ. ಪ್ರಕಾಶ್ ಶೆಟ್ಟಿ “ಡಾ. ಮೋಹನ್ ಆಳ್ವಾ ಅವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಹುಟ್ಟು ಹಾಕುವುದರ ಜೊತೆ ಶಿಕ್ಷಣ ಕ್ರಾಂತಿ ಮಾಡಿದ್ದು ದೇಶದಲ್ಲೇ ಜಿಲ್ಲೆಯನ್ನು ಗುರುತಿಸುವಂತೆ ಮಾಡಿದ್ದಾರೆ. ಇದರ ಜೊತೆಗೆ ಕ್ರೀಡಾ ಕ್ಷೇತ್ರ ಹಾಗೂ ಸಾಹಿತ್ಯ ಮತ್ತು ಸಂಸ್ಕೃತಿಯನ್ನೂ ಬೆಳೆಸುವ ಕೆಲಸವನ್ನು ಮಾಡುತ್ತಿರುವುದು ಜಿಲ್ಲೆಗೆ ಹೆಮ್ಮೆ ತರುವಂತಹ ಕೆಲಸ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    DAKSHINA KANNADA

    ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್‌ ಚಲನಚಿತ್ರ ತೆರೆಗೆ !!

    Published

    on

    ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.

    ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.

    ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್‌ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್‌ ಶೆಟ್ಟಿ ಮೊದಲಾದವರಿದ್ದರು.

    Continue Reading

    DAKSHINA KANNADA

    ಅನುಪಮ್ ಅಗರ್ವಾಲ್ ವರ್ಗಾವಣೆಗೆ ಒತ್ತಾಯಿಸಿ ಕಾವೂರಿನಲ್ಲಿ ಪ್ರತಿಭಟನೆ !!

    Published

    on

    ಕಾವೂರು: ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.

    ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗರ್ವಾಲ್‌ಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ. ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಡನೀಯ ಕಮಿಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.

    ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ.ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

    ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು. ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಹೋರಾಟದ ಸಮಯ ಉಪಸ್ಥಿತರಿದ್ದರು.

     

    Continue Reading

    DAKSHINA KANNADA

    ಕಡಬ: ಪ್ಯಾಚ್‌ ವರ್ಕ್‌ ಮಾಡಿ ಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ

    Published

    on

    ಕಡಬ: ಬರೇ ಪ್ಯಾಚ್‌ ವರ್ಕ್‌ ಮಾಡಿ ಜನರ ಕಣ್ಣೀಗೆ ಮಣ್ಣೇರೆಚುತ್ತಿರುವ, ಹಲವಾರು ವರ್ಷಗಳಿಂದ ಕುಂಟು ನೆಪ ಹೇಳಿ ರಸ್ತೆ ದುರಸ್ತಿ ಮಾಡದಿರುವ ಲೋಕೋಪಯೋಗಿ ಇಲಾಖೆ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

    ಕಡಬ – ಕೋಡಿಂಬಾಳ ರಾಜ್ಯ ಹೆದ್ದಾರಿಗೆ ರಸ್ತೆ ತೇಪೆ ಹಚ್ಚುವ ಕಾಮಗಾರಿಯನ್ನು ಗ್ರಾಮಸ್ಥರು ತಡೆದಿದ್ದಾರೆ. ಕಳೆದ ವರ್ಷವೂ ಬರೇ ಪ್ಯಾಚ್‌ವರ್ಕ್ ಕಾಮಗಾರಿಯನ್ನು ನಡೆಸಲಾಗಿತ್ತು. ಆದರೆ ಆ ಕಾಮಗಾರಿ ಅದೇ ವರ್ಷ ಕಿತ್ತು ಹೋಗಿದೆ. ಈ ವರ್ಷವೂ ಮತ್ತೆ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ. ದಿನಂಪ್ರತಿ ಸುಳ್ಯ ಎಂಎಲ್‌ಎ ಸಂಚರಿಸುವ ಪ್ರಮುಖ ರಸ್ತೆ ಇದಾಗಿದ್ದು, ಕಡಬ ತಾಲೂಕಿನ ಕೋಡಿಂಬಾಳ ಕಲ್ಲಂತಡ್ಕ ಎಂಬಲ್ಲಿ ರಸ್ತೆಯನ್ನು ದುರಸ್ತಿ ಪಡಿಸಲಾಗಿದೆ.

    ಸ್ಥಳಕ್ಕೆ ಲೋಕೋಪಯೋಗಿ ಇಂಜಿನಿಯರ್, ಗುತ್ತಿಗೆದಾರರು ಬರಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.

     

    Continue Reading

    LATEST NEWS

    Trending