Home ಪ್ರಮುಖ ಸುದ್ದಿ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಹಾವಳಿ: ನಿನ್ನೆ 32 ಮಂದಿಯಲ್ಲಿ ಪಾಸಿಟಿವ್ ದೃಢ..!!

ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಹಾವಳಿ: ನಿನ್ನೆ 32 ಮಂದಿಯಲ್ಲಿ ಪಾಸಿಟಿವ್ ದೃಢ..!!

ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಹಾವಳಿ: ನಿನ್ನೆ 32 ಮಂದಿಯಲ್ಲಿ ಪಾಸಿಟಿವ್ ದೃಢ..!!

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ನಿನ್ನೆ (ಜೂನ್ 29) ಒಂದೇ ದಿನ 32 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 705ಕ್ಕೆ ಏರಿದೆ.

ನಿನ್ನೆ ಪತ್ತೆಯಾದ ಪ್ರಕರಣಗಳಲ್ಲಿ ಅಂತಾರಾಜ್ಯದಿಂದ ಆಗಮಿಸಿದ ಓರ್ವ, ಅನಾರೋಗ್ಯ ಮತ್ತು ಉಸಿರಾಟದಿಂದ ಸಮಸ್ಯೆಯಿಂದ ಬಳಲುತ್ತಿದ್ದ 15 ಮಂದಿ,

ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಿಂದ 10 ಮಂದಿ ಸೇರಿ ಒಟ್ಟು 32 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ಇನ್ನು ಅಧಿಕ ರಕ್ತದೊತ್ತಡ, ಡಯಾಬಿಟಿಸ್‌ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಉಳ್ಳಾಲದ 49 ವರ್ಷದ ಮಹಿಳೆ ವೆನ್‌ ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕೊರೊನಾ ಪಾಸಿಟಿವ್‌ ಎಂದು ವರದಿ ಬಂದಿದೆ.

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!