Tuesday, October 19, 2021

ಅಕ್ರಮವಾಗಿ 32 ಟನ್‌ ಗೋವಿನ ಚರ್ಮ ಸಾಗಾಟ: ಪ್ರಾಣಿದಯಾ ಸಂಘದಿಂದ ದಾಳಿ

ಕಲಬುರಗಿ: ಜಿಲ್ಲೆಯ ಚಿತ್ತಾಪುರ ಹೊರವಲಯದಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವುಗಳ ಚರ್ಮವನ್ನು ನಂದಿ ಪ್ರಾಣಿ ದಯಾ ಸಂಘದವರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ನಂತರ ಸ್ಥಳೀಯ ಪೊಲೀಸರಿಗೆ ನೀಡಿದ್ದಾರೆ.


ಚಿತ್ತಾಪುರದಿಂದ ಹೈದರಾಬಾದ್ ಮೂಲಕ ಗೋವುಗಳ ಚರ್ಮವನ್ನು ಕೋಲ್ಕತ್ತಾಕ್ಕೆ ಸಾಗಿಸಲಾತ್ತಿತ್ತು. ಇದರ ಖಚಿತ ಮಾಹಿತಿ ಪಡೆದ ನಂದಿ ಪ್ರಾಣಿ ದಯಾ ಸಂಘದವರು ಚಿತ್ತಾಪುರ ಹೊರವಲಯದಲ್ಲಿ ದಾಳಿ ನಡೆಸಿದ್ದಾರೆ.

14 ಚಕ್ರಗಳ ಬೃಹತ್ ಕಂಟೇನರ್‌ನಲ್ಲಿ ಅಕ್ರಮವಾಗಿ 32 ಟನ್‌ನಷ್ಟು ಗೋವುಗಳ ಚರ್ಮ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದುಬಂದಿದೆ.

ದಾಳಿ ವೇಳೆ ಲಾರಿ ಮಾಲೀಕ, ಚಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಈ ವೇಳೆ ಚಿತ್ತಾಪುರ, ಶಹಾಬಾದ್ ಸುತ್ತಮುತ್ತಲಿನ ಕಸಾಯಿ ಕಾರ್ಖಾನೆಗಳಿಂದ ಚರ್ಮ ಸಂಗ್ರಹಿಸಿಡಲಾಗಿತ್ತು ಎಂದು ಬಂಧಿತರು ಬಾಯ್ಬಿಟ್ಟಿದ್ದಾರೆ.

ಈ ಸಂಬಂಧ ಚಿತ್ತಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...