Saturday, August 20, 2022

ಹಿಜಾಬ್-ಕೇಸರಿ ವಿವಾದ: ಮೂರು ದಿನ ಶಾಲಾ ಕಾಲೇಜು ಬಂದ್

ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರೌಢಶಾಲೆ , ಇಂಜಿನಿಯರಿಂಗ್ ಕಾಲೇಜು ಸೇರಿದಂತೆ

ಉಳಿದ ಎಲ್ಲಾ ಕಾಲೇಜುಗಳಿಗೆ ರಾಜ್ಯದಾದ್ಯಂತ ಮುಂದಿನ ಮೂರು ದಿನಗಳ ಕಾಲ ಬಂದ್ ಮಾಡಿ ಎಂದು ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಕಾಲೇಜಿನ ಆಡಳಿತ ಸಮಿತಿ ಸೇರಿದಂತೆ ಶಾಲಾ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಲಭೆ ಎತ್ತದೆ ರಾಜ್ಯದ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ ರಾಜ್ಯದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಪ್ರಾಥಮಿಕ ಶಾಲೆಗಳಿಗೆ ರಜೆ ಇಲ್ಲ.

LEAVE A REPLY

Please enter your comment!
Please enter your name here

Hot Topics