Thursday, October 21, 2021

ಬೆಂಗಳೂರಿನಿಂದ ನಾಪತ್ತೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಮಂಗಳೂರು: ಬೆಂಗಳೂರಿನ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ 7 ಮಕ್ಕಳಲ್ಲಿ 3 ಜನ ಮೈಸೂರಿನಲ್ಲಿ ಪತ್ತೆಯಾಗಿದ್ದರು. ಉಳಿದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
2 ದಿನದ ಹಿಂದೆ ನಾಪತ್ತೆಯಾಗಿದ್ದ ಪರೀಕ್ಷಿತ್, ಕಿರಣ್ ಮತ್ತು ನಂದನ್, ಅಮೃತವರ್ಷಿಣಿ, ಭೂಮಿ, ಚಿಂತನ್, ರಾಯನ್ ಪತ್ತೆಯಾಗಿದ್ದಾರೆ.


ಬೆಂಗಳೂರಿನ ಸೋಲದೇವನಹಳ್ಳಿಯ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟ್‌ನ ನಾಲ್ವರು ಮಕ್ಕಳು ಪತ್ತೆಯಾಗಿದ್ದು ಸದ್ಯ ಈಗ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಎಜಿಬಿ ಲೇಔಟ್‌ನ ನಾಲ್ವರು ಮಕ್ಕಳು ಹಾಗೂ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪರೀಕ್ಷಿತ್, ಕಿರಣ್ ಮತ್ತು ನಂದನ್ ಎಂಬ ಮಕ್ಕಳು ನಾಪತ್ತೆಯಾಗಿದ್ದರು. ಒಟ್ಟು 7 ಜನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು.

ಆ ಪೈಕಿ 3 ಮಕ್ಕಳು ಮೈಸೂರಿಗೆ ತೆರಳಿದ್ದರು. ಉಳಿದ ನಾಲ್ವರು ಮಂಗಳೂರಿಗೆ ಬಂದಿದ್ದರು. ಮೈಸೂರಿಗೆ ತೆರಳಿದ್ದ ಪರೀಕ್ಷಿತ್, ಕಿರಣ್ ಮತ್ತು ನಂದನ್ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ. ಉಳಿದ ನಾಲ್ವರಿಗಾಗಿ ಶೋಧ ನಡೆಸುತ್ತಿದ್ದ ವೇಳೆ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇದರಲ್ಲಿ ಮಂಗಳೂಈರಿಗೆ ಬಂದಿದ್ದ ಅಮೃತವರ್ಷಿಣಿ ಮನೆಯಿಂದ ಹೋಗಬೇಕಾದ್ರೆ 70 ಗ್ರಾಂ ಚಿನ್ನದ ನೆಕ್ಲೆಸ್, 3000 ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಕ್ಕಳ ದಾಖಲೆಯನ್ನ ಎಲ್ಲಾ ಠಾಣೆಗಳಿಗೆ ರವಾನಿಸಿ ಮಕ್ಕಳನ್ನು ಹುಡುಕಲಾಗುತ್ತಿತ್ತು. ಸದ್ಯ ಈಗ ಮಕ್ಕಳು ಸಿಕ್ಕಿದ್ದಾರೆ.

ಬೆಂಗಳೂರು ಉತ್ತರ ವಲಯದಿಂದ 4 ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಲಾಗಿದ್ದು ಸೋಲದೇವನಹಳ್ಳಿ ಠಾಣೆ ಪೊಲೀಸರ ಮೇಲೆ ಒತ್ತಡ ಹೆಚ್ಚಾಗಿತ್ತು. ಈಗ ಈ ಪ್ರಕರಣ ಸುಖಾಂತ್ಯ ಕಂಡಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...