Connect with us

    LATEST NEWS

    ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣ: ಪತ್ನಿ-ಮಕ್ಕಳನ್ನು ಕತ್ತು ಹಿಸುಕಿ ಕೊಲೆ

    Published

    on

    ಮಂಗಳೂರು: ನಗರದ ಜೆಪ್ಪು ಮಾರ್ಕೆಟ್‌ ಬಳಿ ಒಂದೇ ಕುಟುಂಬದ 4 ಮೃತದೇಹ ಪತ್ತೆಯಾಗಿದ ಪ್ರಕರಣಕ್ಕೆ ಮತ್ತೆ ತಿರುವು ಸಿಕ್ಕಿದ್ದು,

    ಆಹಾರದಲ್ಲಿ ವಿಷ ನೀಡಿ ಕೊಲೆಗೈದಿಲ್ಲ ಬದಲಾಗಿ ಕತ್ತು ಹಿಸುಕಿ ಕೊಲೆಗೈದಿದ್ದಾನೆಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ತಿಳಿಸಿದ್ದಾರೆ.


    ನಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಮೃತ ನಾಗೇಶ್‌ ಶೇರಿಗುರಿ ದಂಪತಿ ಮೊದಲು ಇದೀಗ ಬಂಧಿತ ಮಹಿಳೆ ನೂರ್‌ ಜಹಾನ್‌ ವಾಸಿಸುತ್ತಿದ್ದ ಫ್ಲಾಟ್‌ನಲ್ಲಿ ನಾಗೇಶ್‌ ದಂಪತಿ 4-5 ವರ್ಷಗಳಿಂದ ವಾಸಿಸುತ್ತಿದ್ದರು. ಈ ವೇಳೆ ಮೃತ ವಿಜಯಲಕ್ಷ್ಮೀಗೆ ನೂರ್‌ ಜಹಾನ್‌ ಪರಿಚಯವಾಗಿರುತ್ತದೆ.

    ನೂರ್‌ ಜಹಾನ್‌ ಮದುವೆ ಬ್ರೋಕರ್‌ ಕೆಲಸ ಮಾಡುತ್ತಿದ್ದು, ಕಳೆದ 8 ವರ್ಷದಿಂದ ಗಂಡನಿಂದ ದೂರವಾಗಿ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದಳು. ಕಳೆದ 2-3 ತಿಂಗಳಿಂದ ಈ ದಂಪತಿ ಮಧ್ಯೆ ಜಗಳವಾಗುತಿತ್ತು.

    ಈ ಹಿಂದೆ ವಿಜಯಲಕ್ಷ್ಮೀ ನಾಪತ್ತೆಯಾದಾಗ ಇದೇ ನೂರ್‌ ಜಹಾನ್‌ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಇದಾದ ನಂತರ ಆಕೆ ಮತ್ತೆ ಹಿಂತಿರುಗಿದ್ದಳು. ನಂತರವೂ ವಿಜಯಲಕ್ಷ್ಮೀ ನೂರ್‌ ಜಹಾನ್‌ ಸಂಪರ್ಕದಲ್ಲಿರುತ್ತಾಳೆ.

    ನೀನು ನಾಗೇಶ್‌ಗೆ ಡೈವೋರ್ಸ್‌ ಕೊಡು ನಮ್ಮ ಸಮುದಾಯದ ಹುಡುಗನನ್ನು ಮದುವೆ ಮಾಡಿಸುತ್ತೇನೆಂಬ ಭರವಸೆಯನ್ನು ನೀಡಿದ್ದಳು. ಮದುವೆಯಾಗುವ ವೇಳೆ ನೀನು ಮಕ್ಕಳ ಜೊತೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗು ಎಂದು ನೂರ್‌ ಜಹಾನ್‌ ವಿಜಯಲಕ್ಷ್ಮೀಗೆ ಸಲಹೆ ನೀಡಿದ್ದಳು. ಈ ಮಧ್ಯೆ ವಿಜಯಲಕ್ಷ್ಮೀ ನಾಗೇಶ್‌ಗೆ ಡೈವೋರ್ಸ್‌ ನೀಡಲು ಮುಂದಾಗಿದ್ದಳು. ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

    ವಿಷಪ್ರಾಶನವಲ್ಲಿ ಕತ್ತು ಹಿಸುಕಿ ಕೊಲೆ
    ನಾಗೇಶ್‌ ಆ ದಿನ ರಾತ್ರಿ ಆಹಾರದಲ್ಲಿ ವಿಷ ಬೆರೆಸಿ ಕೊಲೆಗೈದಿಲ್ಲ ಬದಲಾಗಿ ಪತ್ನಿ ಮತ್ತು ಮಕ್ಕಳನ್ನು ತಲೆದಿಂಬು ಮತ್ತು ಕತ್ತು ಹಿಸುಕಿ ಕೊಲೆ ಗೈದಿದ್ದಾನೆ.

    ಇದಾದ ನಂತರ ಸ್ಥಳೀಯ ಪೊಲೀಸ್‌ ಅಧಿಕಾರಿಗೆ ನೂರ್‌ ಜಹಾನ್‌ ಎಂಬಾಕೆ ತನ್ನ ಪತ್ನಿ ವಿಜಯಲಕ್ಷ್ಮೀಯನ್ನು ಮತಾಂತಕ್ಕೆ ಯತ್ನಿಸಿದ್ದಾಳೆಂಬ ವಾಯ್ಸ್‌ ನೋಟ್‌ ಕಳುಹಿಸಿ, ನೇಣಿಗೆ ಶರಣಾಗಿದ್ದಾನೆ.

    ಈ ಘಟನೆಗೆ ಸಂಬಂಧಿಸಿ ಸುಮೋಟೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸ್‌ ಆಯುಕ್ತು ಮಾಹಿತಿ ನೀಡಿದ್ದಾರೆ.

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending