Friday, August 12, 2022

ಜಮ್ಮು ಮತ್ತು ಕಾಶ್ಮೀರದಲ್ಲಿ 4 ಉಗ್ರರ ಹತ್ಯೆಗೈದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಾದ ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು,

ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಹಾಗೂ ಇಂದು ಬೆಳಿಗ್ಗೆ ನಡೆಸಲಾದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹತ್ಯೆಯಾಗಿರುವ ನಾಲ್ವರು ಉಗ್ರರ ಪೈಕಿ ಇಬ್ಬರು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್, ಮತ್ತಿಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕುಲ್ಗಾಂ ಜಿಲ್ಲೆಯ ಔಡೋರಾ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಸರಪಂಚ್​ನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಇದು ಕುಲ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರ ಮೂರನೇ ದಾಳಿಯಾಗಿದೆ

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...