Connect with us

UDUPI

ಯುದ್ದ ಭೀತಿಯ ಉಕ್ರೇನ್‌ನಲ್ಲಿ ಸಿಲುಕಿದ ಉಡುಪಿಯ ನಾಲ್ವರು ವಿದ್ಯಾರ್ಥಿಗಳು: ಜಿಲ್ಲಾಡಳಿತ ಮಾಹಿತಿ

Published

on

ಉಡುಪಿ: ಉಕ್ರೇನ್ ಹಾಗು ರಷ್ಯಾ ನಡುವಿನ ಸೇನಾ ಸಮರ ಮುಂದುವರೆದಿದ್ದು ಉಡುಪಿ ಮೂಲದ ನಾಲ್ವರು ವಿದ್ಯಾರ್ಥಿಗಳು ಉಕ್ರೇನ್ ನ ಯುದ್ಧ ಭೀತಿಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ಉಡುಪಿ ಜಿಲ್ಲಾಡಳಿತ ನೀಡಿದೆ.


ಎಂಬಿಬಿಎಸ್ ವ್ಯಾಸಾಂಗಕ್ಕಾಗಿ ತೆರಳಿರುವ ಕೆಮ್ಮಣ್ಣುವಿನ ಗ್ಲೆನ್ ವಿಲ್ ಫೆರ್ನಾಂಡಿಸ್, ಕಲ್ಯಾಣಪುರದ ಆ್ಯನಿಫ್ರೆಡ್ ಡಿಸೋಜಾ, ಬ್ರಹ್ಮಾವರದ ರೋಹನ್ ಧನಂಜಯ ಬಗ್ಲಿ, ಮತ್ತು ಮೃಣಾಲ್ ಉಕ್ರೇನ್ ನಲ್ಲಿ ಸಿಲುಕಿರುವ ನಾಲ್ವರು ವಿದ್ಯಾರ್ಥಿಗಳಾಗಿದ್ದಾರೆ.


ಉಕ್ರೇನ್ ನಲ್ಲಿರುವ ಟೌನ್ ನ್ಯಾಷನಲ್ ಮೆಡಿಕಲ್ ಯುನಿವರ್ಸಿಟಿ, ಖಾರ್ಖೆವ್ ನ್ಯಾಷನಲ್ ಮೆಡಿಕಲ್ ಯುನಿವರ್ಸಿಟಿ, ಮತ್ತು ಇವಾನೋ-ಫ್ರಾನ್ ಕಿವ್ಸ್ಕ್ ನ್ಯಾಷನಲ್ ಯುನಿವರ್ಸಿಟಿಯಲ್ಲಿ ಈ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

LATEST NEWS

UDUPI : ಕಾಂಗ್ರೆಸ್ ಪರ ದರ್ಶನ್ ಪ್ರಚಾರ; ಸುಮಲತಾ ಏನಂದ್ರು?

Published

on

ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ ಪರ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ನಟಿಯಾಗಿದ್ದಾಗ ಉಡುಪಿಗೆ ಶೂಟಿಂಗ್ ಅಂತ ಬರ್ತಾ ಇದ್ದದ್ದೇ, ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿಗೆ ಗೆಲುವಾಗಲಿದ್ದು, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.


ದರ್ಶನ್ ಬಗ್ಗೆ ಏನಂದ್ರು?

ಈ ವೇಳೆ ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸುಮಲತಾ, ಅದು ದರ್ಶನ್ ಅವರ ವೈಯಕ್ತಿಕ ವಿಚಾರ. ನಾವು ಪ್ರತಿದಿನ ರಾಜಕೀಯ ವಿಚಾರ ಚರ್ಚೆ ಮಾಡುವುದಿಲ್ಲ. ಮಾತ್ರವಲ್ಲ, ಇಂತಹ ವಿಚಾರಗಳನ್ನು ದರ್ಶನ್ ಜೊತೆ ಚರ್ಚೆ ಮಾಡುವುದಿಲ್ಲ. ನಾನು ಹೋಗು ಅಥವಾ ಹೊಗಬೇಡ ಅನ್ನಲು ನಾನು ಯಾರು ಎಂದು ಕೇಳಿದ್ದಾರೆ.

ಕೆಲವರು ನಾನೇ ದರ್ಶನ್ ನನ್ನು ಕಾಂಗ್ರೆಸ್ ಪರ ಪ್ರಚಾರಕ್ಕೆ ಕಳುಹಿಸಿದ್ದಾಗಿ ಹೇಳ್ತಾರೆ, ಆದ್ರೆ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾನು ನನ್ನ ಇಚ್ಚೆಯಿಂದ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ಇನ್ನು ಕುಮಾರಸ್ವಾಮಿ ಪರ ಪ್ರಚಾರ ಮಾಡಬೇಕಾ ಬೇಡ್ವಾ ಅಂತ ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

ಉಡುಪಿ : ಅಂಬಾಗಿಲಿನಲ್ಲಿ ಬೈಕ್ – ಟಿಪ್ಪರ್ ನಡುವೆ ಭೀಕರ ಅಪಘಾ*ತ; ಬೈಕ್ ಸವಾರ ಸಾ*ವು

Published

on

ಉಡುಪಿ : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಉಡುಪಿಯ ಅಂಬಾಗಿಲಿನಲ್ಲಿ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಈ ದುರಂ*ತ ಸಂಭವಿಸಿದೆ.


ಬ್ರಹ್ಮಾವರ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಮೃ*ತ ದುರ್ದೈವಿ. ಪ್ರಭಾಕರ ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದರು ಎನ್ನಲಾಗಿದೆ. ಅಪಘಾ*ತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಗುದ್ದಿದೆ.

ಇದನ್ನೂ ಓದಿ : ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

ಸಹಸವಾರ ಗಂಭೀ*ರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Continue Reading

LATEST NEWS

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Published

on

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Continue Reading

LATEST NEWS

Trending