Connect with us

LATEST NEWS

ನೈಜೀರಿಯಾದಲ್ಲಿ 40ರೈತರು- ಮೀನುಗಾರರ  ಹತ್ಯೆಗೈದ ಉಗ್ರಗಾಮಿಗಳು..!

Published

on

ನೈಜೀರಿಯಾದಲ್ಲಿ 40ರೈತರು- ಮೀನುಗಾರರ  ಹತ್ಯೆಗೈದ ಉಗ್ರಗಾಮಿಗಳು

ನೈಜೀರಿಯಾ:  ನೈಜೀರಿಯಾದ ಉತ್ತರ ಬೊರ್ನೊ ರಾಜ್ಯದ ಗದ್ದೆಗಳಲ್ಲಿ ಭತ್ತ ಕಟಾವು ಮಾಡುತ್ತಿದ್ದ 40 ರೈತರನ್ನು ಹಾಗೂ ಮೀನುಗಾರರನ್ನು ಶಂಕಿತ ಉಗ್ರಗಾಮಿಗಳು ಹತ್ಯೆಗೈದಿದ್ದಾರೆ. ಇಸ್ಲಾಮಿಕ್‌ ಉಗ್ರಗಾಮಿ ತಂಡದ ಬೊಕೊ ಹರಮ್‌ ಗುಂಪಿಗೆ ಸೇರಿದವರಿಂದ ಈ ಕೃತ್ಯ ನಡೆದಿರುವ ಶಂಕೆಯಿದೆ. ಉತ್ತರ ಬೊರ್ನೊ ರಾಜ್ಯದ ಗರಿನ್‌-ಕ್ವಾಶೆಬೆಯ ಗದ್ದೆಯಲ್ಲಿ ಶನಿವಾರ ರೈತರು ಭತ್ತ ಕಟಾವು ಮಾಡುತ್ತಿದ್ದ ವೇಳೆ ಅವರನ್ನು ಸುತ್ತುವರಿದ ಶಸ್ತ್ರಸಜ್ಜಿತ ಉಗ್ರಗಾಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ.

ಬೊರ್ನೊ ರಾಜ್ಯದ ಭತ್ತ ಬೆಳೆಗಾರರ ಸಂಘದ ಮುಖಂಡ ಮಲಮ್ ಝಬಾರ್‌ಮರಿ ಅವರು ಈ ಘಟನೆಯನ್ನು ಖಚಿತಪಡಿಸಿದ್ದಾರೆ.

‘ಗರಿನ್‌ -ಕ್ವಾಶೆಬೆ ಭತ್ತದ ಗದ್ದೆಗಳಲ್ಲಿ ಶನಿವಾರ ಮಧ್ಯಾಹ್ನ ಝಬಾರ್‌ಮರಿ ಸಮುದಾಯದ ರೈತರು ಬೆಳೆ ಕಟಾವು ಮಾಡುತ್ತಿದ್ದಾಗ, ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ರೈತರ ಮೇಲೆ ದಾಳಿ ನಡೆದಿದೆ. ಇಲ್ಲಿವರೆಗೆ 44 ಮೃತದೇಹಗಳು ಸಿಕ್ಕಿವೆ. ಮೃತರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದೇವೆ’ ಎಂದು ಮೆಂಬರ್‌ ಆಫ್‌ ದಿ ಹೌಸ್ ಆಫ್ ರೆಂಪ್ರೆಸೆಂಟೆಟಿವ್ಸ್‌ ಅಹಮದ್ ಸತೋಮಿ ಹೇಳಿದ್ದಾರೆ.

ನೈಜೀರಿಯಾ ಅಧ್ಯಕ್ಷ ಮೊಹಮದ್‌ ಬುಹಾರಿ ಘಟನೆಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ‘ಈ ಹತ್ಯೆಯನ್ನು ಖಂಡಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಇಂಥ ಸಂದರ್ಭದಲ್ಲಿ ಮೃತಪಟ್ಟ ರೈತರ ಕುಟುಂಬದವರ ದುಃಖದಲ್ಲಿ ನಾವು ಭಾಗಿಗಳಾಗಿದ್ದೇವೆ.

ಅವರ ಬೆಂಬಲಕ್ಕೆ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ. ‘ದೇಶದ ನಾಗರಿಕರನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸಶಸ್ತ್ರಪಡೆಗಳಿಗೆ ಎಲ್ಲ ಬೆಂಬಲ ನೀಡಿದೆ’ ಎಂದು ಬುಹಾರಿ ತಿಳಿಸಿದರು.

ಫೆಡರಲ್ ಶಾಸಕರೊಬ್ಬರ ಪ್ರಕಾರ ‘ಬೊಕೊ ಹರಾಮ್ ಗುಂಪಿನ ಒಬ್ಬ ಸದಸ್ಯನನ್ನು ಈ ರೈತರು ಬಂಧಿಸಿ, ಭದ್ರತಾ ಪಡೆಗೆ ಒಪ್ಪಿಸಿದ ಪರಿಣಾಮವಾಗಿ, ಸೇಡು ತೀರಿಸಿಕೊಳ್ಳಲು ಆ ಉಗ್ರಗಾಮಿಗಳ ತಂಡ ರೈತರನ್ನು ಕೊಂದು ಹಾಕಿದೆ’.

‘ಬೊಕೊ ಹರಾಮ್‌ ಗುಂಪಿನ ಬಂದೂಕುಧಾರಿ ಸದಸ್ಯನೊಬ್ಬ ಗದ್ದೆಯಲ್ಲಿದ್ದ ರೈತರಿಗೆ ಹಣ ಕೊಡುವಂತೆ ಹಾಗೂ ತನಗೆ ಅಡುಗೆ ಮಾಡಿಕೊಂಡುವಂತೆ ಕಿರುಕುಳ ನೀಡುತ್ತಿದ್ದ. ಈತನ ಕಾಟದಿಂದ ಬೇಸತ್ತ ರೈತರು, ಊಟಕ್ಕಾಗಿ ಕಾಯ್ದು ಕುಳಿತಿದ್ದ ಸಂದರ್ಭ ಬಂದೂಕುಧಾರಿ ಮೇಲೆ ಮುಗಿಬಿದ್ದು, ರೈಫಲ್ ಕಸಿದುಕೊಂಡು ಅವನನ್ನು ಕಟ್ಟಿ ಹಾಕಿದರು. ನಂತರ ಆತನನ್ನು ಭದ್ರತಾ ಸಿಂಬ್ಬಂದಿಗೆ ಒಪ್ಪಿಸಿದರು.

ಇದಕ್ಕೆ ಪ್ರತೀಕಾರವಾಗಿ ಬೊಕೊ ಹರಾಮ್‌ ಗುಂಪಿನ ಭಯೋತ್ಪಾದಕರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದಾಳಿ ಮಾಡಿದರು. ಹೊರಡುವ ಮುನ್ನ ಭತ್ತದ ಗದ್ದೆಗಳಿಗೆ ಬೆಂಕಿ ಹಂಚಿದ್ದಾರೆಂದು ತಿಳಿದುಬಂದಿದೆ..

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

ಬೋರ್ ವೆಲ್ ನಲ್ಲಿ ಸುರಿದ ಹಾಲು – ಪಾತ್ರೆ ಹಿಡಿದು ಓಡೋಡಿ ಬಂದ ಜನ..!

Published

on

ಉತ್ತರ ಪ್ರದೇಶ: ಸಾಮನ್ಯವಾಗಿ ಬೋರ್ ವೆಲ್ ನಲ್ಲಿ ನೀರು ಬರುವದನ್ನು ನೋಡಿದ್ದೇವೆ ಆದರೆ ಇಲ್ಲೊಂದು ಕಡೆ ಹಾಲಿನ ಬಣ್ಣದ ನೀರು ಸುರಿದ ವಿಸ್ಮಯ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.


ಇಲ್ಲಿನ ಸಾರ್ವಜನಿಕ ಸ್ಥಳವೊಂದರಲ್ಲಿರುವ ಬೋರ್ ವೆಲ್ ನಲ್ಲಿ ನೀರಿನ ಬದಲು ಬಿಳಿ ಬಣ್ಣ ಇರುವ ನೀರು ಸುರಿದಿದೆ. ಇದನ್ನು ಕಂಡ ಸ್ಥಳಿಯರಿಗೆ ಅಚ್ಚರಿಯ ಪ್ರಶ್ನೆ ಮೂಡಿದೆ. ಅಲ್ಲದೆ ಇದೀಗ ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಸ್ಥಳಕ್ಕೆ ಸಾಕಷ್ಟು ಜನ ಬಂದು ಸೇರಿದ್ದಾರೆ.


ಇದನ್ನು ಕಂಡ ಜನರು ಇದು ನೀರಲ್ಲ ಹಾಲು ಎಂದು ಪಾತ್ರ , ಬಾಟಲಿ ಹಾಗೂ ಕೈಗೆ ಸಿಕ್ಕಿದ ಪಾತ್ರವನ್ನು ಹಿಡಿದು ಓಡಾಡಿಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು ತಮ್ಮ ಪಾತ್ರೆಗಳಿಗೆ ತುಮಬಿಸಿ ಮನೆಗೆ ಕೊಂಡೊಯ್ಯುತ್ತಿದ್ದರು. ಈ ವಿಚಾರ ತಿಳಿದ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಹಾಲಲ್ಲ ಇದು ಕಲುಷಿತ ನೀರು ಎಂದು ಸ್ಪಷ್ಟನೆ ನೀಡಿದ್ದಾರೆ. ಬೋರ್ ವೆಲ್ ನಲ್ಲಿರುವ ಹ್ಯಾಂಡ್ ಪಂಪ್ ನ ಕೆಳಭಾಗ ಹಾನಿಗೊಳಗಾದ ಕಾರಣ ಇದರಲ್ಲಿ ಹಾಲಿನ ಬಣ್ಣದ ಕಲುಷಿತ ನೀರು ಸೊರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದು ವರದಿಯಾಗಿದೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

LATEST NEWS

Trending