ಉಕ್ರೇನ್: ಇಂದು ನಸುಕಿನ ಜಾವಾ ರಷ್ಯಾ ನಡೆಸಿದ ಶೆಲ್ ಮತ್ತು ವಾಯು ದಾಳಿಯಿಂದ ಯುಕ್ರೇನ್ ಆರಂದಲ್ಲೇ ತತ್ತರಿಸಿದೆ. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ದಾಳಿ ಅನೇಕ ಸಾವು ನೋವುಗಳು ಸಂಭವಿಸಿದರ ಬಗ್ಗೆ ವರದಿಯಾಗಿದೆ.
ರಷ್ಯಾ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, 10 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಹೇಳಿರುವುದಾಗಿ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಇದಕ್ಕೂ ಮುನ್ನ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಅನ್ನು ಲುಹಾನ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ಹೊಡೆದುರುಳಿಸಿರುವುದಾಗಿ ಉಕ್ರೇನ್ ತಿಳಿಸಿತ್ತು. ಆದರೆ ಈ ಹೇಳಿಕೆಯನ್ನು ನಿರಾಕರಿಸಿದ ರಷ್ಯಾ, ಉಕ್ರೇನ್ ವಾಯುನೆಲೆಗಳ ಮೇಲೆ ದಾಳಿ ಮಾಡಿರುವುದಾಗಿ ತಿಳಿಸಿದೆ.
ಈ ಮಧ್ಯೆ ಉಕ್ರೇನ್ ಸರ್ಕಾರ ಭಾರತದ ಸಹಾಯ ಯಾಚಿಸಿದ್ದು ಯುಕ್ರೇನ್ ಸರ್ಕಾರ ರಷ್ಯಾ ಜೊತೆ ಮಾತುಕತೆ ನಡೆಸುವಂತೆ ಪ್ರಧಾನಿ ಮೋದಿಯನ್ನು ಒತ್ತಾಯಿಸಿದೆ.