Wednesday, June 16, 2021

ಬಹರೀನ್ ನಿಂದ ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ ವಿಶೇಷ ಹಡಗು..!

ಮಂಗಳೂರು : ಕೊರೊನಾ 2 ನೇ ಅಲೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ತೀವ್ರವಾಗಿದ್ದು ಕರಾವಳಿಯಲ್ಲೂ ಭಾದಿಸಿದೆ.

ಈ ಕಾರಣದಿಂದ ಆಮ್ಲಜನಕ ಕೊರತೆ ದೇಶಾದ್ಯಂತ ಉಂಟಾಗಿದೆ. ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಪೂರೈಕೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಸಮುದ್ರ ಸೇತು-2 ಕಾರ್ಯಾಚರಣೆ ಆರಂಭಿಸಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರಿಗೆ ಆಮ್ಲಜನಕ ಕೊರತೆ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಕೊಲ್ಲಿ ರಾಷ್ಟ್ರ ಬಹರೀನ್ ನಿಂದ ಪ್ರಾಣವಾಯು ಆಕ್ಸಿಜನ್ ಹೊತ್ತ ಭಾರತೀಯ ನೌಕ ದಳದ ವಿಶೇಷ ಹಡಗು ನವಮಂಗಳೂರು ಬಂದರಿಗೆ ಆಗಮಿಸಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಾಡಿದ ಮನವಿಗೆ ಸ್ಪಂದಿಸಿ ಬಹರೀನ್ ಸರ್ಕಾರ ಈ ಆಕ್ಸಿಜನ್ ನೆರವನ್ನು ನೀಡಿದೆ. 40 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ನ ಕ್ರೆಯಾಜನಿಕ್ ಕಂಟೇನರ್ ಹೊತ್ತ  ಭಾರತೀಯ ನೌಕಾದಳದ ಐಎನ್ ಎಸ್ ತಲ್ವಾರ್ ವಿಶೇಷ ಹಡಗು ಇಂದು ನಮಮಂಗಳೂರು ಬಂದರಿಗೆ ಆಗಮಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,  ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಮಂಗಳೂರು ಮೇಯರ ಪ್ರೇಮಾನಂದ ಶೆಟ್ಟಿ,ನವ ಮಂಗಳೂರು ಬಂದರು ಮಂಡಳಿ ಅಧ್ಯಕ್ಷ ವೆಂಕಟರಮಣ ಅಕ್ಕರಾಜು, ಮತ್ತಿತರ ಗಣ್ಯರು,ಮತ್ತು  ಅಧಿಕಾರಿ ವರ್ಗ ಹಡಗನ್ನು ಬರಮಾಡಿಕೊಂಡರು.

ವಿದೇಶಗಳಿಂದ ಆಕ್ಸಿಜನ್​ ತರುವ ಉದ್ದೇಶದಿಂದ ಭಾರತೀಯ ನೌಕಾಪಡೆ ಆಪರೇಷನ್​ ಸಮುದ್ರ ಸೇತು 2 ಎಂಬ ಹೆಸರಿನಲ್ಲಿ ಈ ಕಾರ್ಯಾಚರಣೆ ಆರಂಭಿಸಿದೆ. ಏಳು ಭಾರತೀಯ ನೌಕಾ ಹಡಗುಗಳಾದ ಐಎನ್ ಎಸ್ ಕೋಲ್ಕತ್ತಾ,ಐಎನ್ ಎಸ್  ಕೊಚ್ಚಿ, ಐಎನ್ ಎಸ್ ತಲ್ವಾರ್​, ಐಎನ್ ಎಸ್ ತಬಾರ್​,ಐಎನ್ ಎಸ್ ತ್ರಿಕಾಂಡ್​,ಐಎನ್ ಎಸ್ ಜಲಶ್ವಾ ಮತ್ತು ಐಎನ್ ಎಸ್  ಐರಾವತ್​ ಈ ಕಾರ್ಯಾಚರಣೆಗೆ ನಿಯೋಜನೆಗೊಂಡಿವೆ.

ಮೊದಲ ಹಂತದಲ್ಲಿ ಬಹರೈನ್​, ಸಿಂಗಾಪುರ ಮತ್ತು ಥಾಯ್ಲೆಂಡ್​ಗಳಿಂದ ಆಮ್ಲಜನಕ ತರಲು ಯೋಜನೆ ರೂಪಿಸಲಾಗಿದೆ.

ದೇಶದಲ್ಲಿ ಉಂಟಾಗಿರುವ ಆಮ್ಲಜನಕ ಸಮಸ್ಯೆ ಸರಿದೂಗಿಸುವ ಉದ್ದೇಶದಿಂದ ಆಪರೇಷನ್​ ಸಮುದ್ರ ಸೇತು-2 ಯೋಜನೆ ಹಮ್ಮಿಕೊಳ್ಳಲಾಗಿದೆ.

20 ಮೆಟ್ರಿಕ್‌ ಟನ್ ಆಕ್ಸಿಜನ್ ಬೆಂಗಳೂರಿಗೆ ಕಳುಹಿಸಲಾಗಿದ್ದು ಇನ್ನುಳಿದ 20 ಟನ್ ಲಿಕ್ವಿಡ್ ಆಕ್ಸಿಜನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಳಸಿಕೊಳ್ಳಲಾಗುತ್ತದೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...