Home ಉಡುಪಿ ಕೇರಳ ರಾಜ್ಯದಲ್ಲಿ ಸಿಲುಕಿದ ಉಡುಪಿ ಜಿಲ್ಲೆಯ 41 ಬೋಟುಗಳು: ಸಚಿವ ಕೋಟ ಮೊರೆ ಹೋದ ಮೀನುಗಾರರು

ಕೇರಳ ರಾಜ್ಯದಲ್ಲಿ ಸಿಲುಕಿದ ಉಡುಪಿ ಜಿಲ್ಲೆಯ 41 ಬೋಟುಗಳು: ಸಚಿವ ಕೋಟ ಮೊರೆ ಹೋದ ಮೀನುಗಾರರು

ಕೇರಳ ರಾಜ್ಯದಲ್ಲಿ ಸಿಲುಕಿದ ಉಡುಪಿ ಜಿಲ್ಲೆಯ 41 ಬೋಟುಗಳು: ಸಚಿವ ಕೋಟ ಮೊರೆ ಹೋದ ಮೀನುಗಾರರು

ಉಡುಪಿ: ಉಡುಪಿ ಜಿಲ್ಲೆಯ 41 ಬೋಟುಗಳು ಲಾಕ್‌ ಡೌನ್ ಹಿನ್ನಲೆಯಲ್ಲಿ ಕೇರಳ ರಾಜ್ಯದ ಚರವತ್ತೂರು, ಚೊಂಬಲ್ ಮತ್ತು ಕಣ್ಣೂರಿನಲ್ಲಿ ಸಿಲುಕಿದ್ದು, ಮೀನುಗಾರರು, ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮೊರೆ ಹೋಗಿದ್ದಾರೆ.

ಈ ನಿಟ್ಟಿನಲ್ಲಿ ಸಚಿವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರೊಂದಿಗೆ ಚರ್ಚಿಸಿ ಕೇರಳ ಸರ್ಕಾರದ ಜೊತೆ ಸಂಪರ್ಕ ಬೆಳೆಸಿದ್ದಾರೆ.

ಇದರ ಪರಿಣಾಮ ಇದೀಗ ಎರಡು ರಾಜ್ಯಗಳ ಒಪ್ಪಂದದಂತೆ ಇಂದು ಅಪರಾಹ್ನ 1.00 ಗಂಟೆಗೆ ಬೋಟುಗಳ ಮಾಲೀಕ ಮೀನುಗಾರರು,

ಬೋಟ್‌ ಅನ್ನು ಮರಳಿ ತರಲು ಇನ್ನಿತರ ಮೀನುಗಾರರ ಜೊತೆಗೆ, ಮೂರು ವಿಶೇಷ ಯಾಂತ್ರೀಕೃತ ಬೋಟುಗಳ ಮೂಲಕ ತೆರಳಿದ್ದಾರೆ.

ಈ ಬಗ್ಗೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ಪ್ರಯಾಣ ವೆಚ್ಚ ಭರಿಸಲು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದರಿಂದ ಸಂಕಷ್ಟದಲ್ಲಿ ಸಿಲುಕಿರುವ 41 ಯಾಂತ್ರೀಕೃತ ಬೋಟುಗಳ ಮೀನುಗಾರರಿಗೆ ಸಹಕಾರಿಯಾಗಲಿದೆ ಎನ್ನಲಾಗಿದೆ.

- Advertisment -

RECENT NEWS

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ ಮಂಗಳೂರು :  ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ದೇವರ ಗುಡ್ಡೆ ಬಳಿ ನಡೆದ ಎಕ್ಕಾರು ನಿವಾಸಿ ಕೀರ್ತನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ :ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ...

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...