Home ಪ್ರಮುಖ ಸುದ್ದಿ ನಿಲ್ಲದ ಕೊರೊನಾ ಹಾವಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44 ಕೊರೊನಾ ಪ್ರಕರಣ ದಾಖಲು....!!

ನಿಲ್ಲದ ಕೊರೊನಾ ಹಾವಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44 ಕೊರೊನಾ ಪ್ರಕರಣ ದಾಖಲು….!!

ನಿಲ್ಲದ ಕೊರೊನಾ ಹಾವಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44 ಕೊರೊನಾ ಪ್ರಕರಣ ದಾಖಲು….!!

ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು (ಜೂನ್ 30) ಮತ್ತೆ 44 ಕೊರೊನಾ ಪ್ರಕರಣ ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 741ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 2 ಪ್ರಕರಣಗಳು ಸೌದಿಅರೇಬಿಯಾ, 1 ಅಂತರ್ ರಾಜ್ಯ, 3 ಅಂತರ್ ಜಿಲ್ಲೆಯಿಂದ ಆಗಮಿಸಿದವರಾಗಿದ್ದು,

9 ಪ್ರಕರಣಗಳು ಐ.ಎಲ್.ಐ ಆಗಿದ್ದು, 3 ‘ಸಾರಿ’ ಪ್ರಕರಣಗಳಾಗಿವೆ. ಇನ್ನು 5 ಕೊರೊನಾ ಸೋಂಕಿತ ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದ್ದು, 21 ಕೊರೊನಾ ಪ್ರಕರಣಗಳು ಕೊರೊನಾ ರೋಗಿಯ ಪ್ರಾಥಮಿಕ ಸಂಪರ್ಕದಿಂದ ಬಂದಿದೆ.

ಇನ್ನು ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 385 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಸದ್ಯ 342 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 14 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

RECENT NEWS

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...
error: Content is protected !!