LATEST NEWS
ಯಂಗ್ ಲೇಡಿಯನ್ನು ಮದುವೆ ಆಗಿ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ
Published
3 years agoon
By
Adminತುಮಕೂರು: ಇತ್ತೀಚೆಗೆ 25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯದೆಲ್ಲೆಡೆ ಸುದ್ದಿಯಾಗಿದ್ದ ಶಂಕರಣ್ಣ (45) ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ.
ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು.
ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಈ ಹೊಂದಾಣಿಕೆಯ ಸೀಕ್ರೆಟ್ ಏನು ಎಂಬ ಕುತೂಹಲಕ್ಕೆ ಅನೇಕ ಮಾಧ್ಯಮವೂ ಇವರನ್ನು ಇಂಟರ್‌ವ್ಯೂ ಮಾಡಿತ್ತು.
ಮೇಘನಾ ಸಂತೆ ಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿತ್ತು ಎಂದು ಹೇಳಲಾಗುತ್ತಿತ್ತು. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದೆ.
ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದರು. ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಎಂದು ಕೇಳಿಕೊಂಡಿದ್ದರು.
ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನು ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡಿದ್ದರು. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು.
ಶಂಕರಣ್ಣ ಜೊತೆ ಮೇಘನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5 ತಿಂಗಳ ಹಿಂದೆ ಮದುವೆ ನಡೆದಿತ್ತು.
ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ. ಸದ್ಯಕ್ಕೆ ಹುಲಿಯೂರು ದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
FILM
ಚಾಲೆಂಜಿಂಗ್ ಸ್ಟಾರ್ ನ್ಯೂ ಪೋಸ್ಟ್; ದರ್ಶನ್ ಅಭಿಮಾನಿಗಳಿಗೆ ದಿಲ್‌ಖುಷ್
Published
12 minutes agoon
15/01/2025ಮಂಗಳೂರು/ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರೋಬ್ಬರಿ 7 ತಿಂಗಳ ನಂತರ ತಮ್ಮ ಅಭಿಮಾನಿಗಳಿಗೆ, ಜನತೆಗೆ ಜಾಲತಾಣದ ಮೂಲಕ ಸಂದೇಶವೊಂದನ್ನು ಹಂಚಿಕೊಂಡಿದ್ದು, ಫೋಟೊ ಫುಲ್ ವೈರಲ್ ಆಗುತ್ತಿದೆ.
2024 ರ ಜೂನ್ ತಿಂಗಳಿನಿಂದ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ ದರ್ಶನ್ ಕೊನೆಗೂ ತಮ್ಮ ಅಭಿಮಾನಿಗಳಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು-ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿ ಯನ್ನು ಬರಮಾಡಿಕೊಳ್ಳೋಣ’ ಎಂದು ಬರೆದುಕೊಂಡಿದ್ದು, ಕುದುರೆಯೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಮಾಡಿದ ಕೆಲವೇ ಗಂಟೆಯಲ್ಲಿ 4.66 ಲಕ್ಷಕ್ಕೂ ಅಧಿಕ ಲೈಕ್, 27 ಸಾವಿರಕ್ಕೂ ಅಧಿಕ ಕಮೆಂಟ್ಸ್ ಪಡೆಯಿತು.
ನಟ ದರ್ಶನ್ ಪ್ರತಿ ವರ್ಷವೂ ಕೂಡ ಫಾರಂ ಹೌಸ್‌ನಲ್ಲಿ ತನ್ನ ಸಾಕು ಪ್ರಾಣಿಗಳೊಂದಿಗೆ ಸಂಕ್ರಾತಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದಾರೆ. ಈ ಬಾರಿಯೂ ನೆಚ್ಚಿನ ಸ್ಥಳದಲ್ಲೇ ಸಂಕ್ರಾಂತಿ ಆಚರಿಸಿಕೊಂಡಿದ್ದಾರೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನೆಚ್ಚಿನ ನಟನ ಪೋಸ್ಟ್ ಕಂಡು ಅಭಿಮಾನಿಗಳು ಖುಷಿಯಾಗಿದ್ದಾರೆ. ದರ್ಶನ್ ಪೋಸ್ಟ್ ಮಾಡುತ್ತಿದ್ದಂತೆ, ಅಭಿಮಾನಿಗಳು ‘ಜೈ ಡಿ ಬಾಸ್’ ಎಂದು ಕಮೆಂಟ್ ಮಾಡಿದ್ದಾರೆ.
ಮಂಗಳೂರು/ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ-2025 ಜನವರಿ 13 ಕ್ಕೆ ಆರಂಭವಾಗಿದ್ದು, ಫೆಬ್ರುವರಿ 26ರ ತನಕ ನಡೆಯಲಿದೆ. ಮಹಾ ಕುಂಭಮೇಳ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು, ಅಪಾರವಾದ ನಂಬಿಕೆ, ಶ್ರದ್ಧೆಯು ಸಂಕೇತವಾಗಿದೆ. ಉತ್ತರ ಪ್ರದೇಶ ಸರ್ಕಾರ ಮಹಾ ಕುಂಭಮೇಳಕ್ಕಾಗಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿರುವ ಮಹಾ ಕುಂಭಮೇಳ ಬಹಳ ವಿಶೇಷವಾಗಿದ್ದು, 114 ವರ್ಷಗಳ ಬಳಿಕ ಈ ಮಹಾ ಕುಂಭಮೇಳ ನಡೆಯುತ್ತಿದೆ. ಇಲ್ಲಿ ದೇಶದ ನಾಗಾಸಾಧುಗಳು ಆಗಮಿಸಿದ್ದು, ಇದೀಗ ಮಹಿಳಾ ನಾಗಾಸಾಧುಗಳು ಬಹಳ ವಿಶೇಷವಾಗಿ ಆಕರ್ಷಣೀಯರಾಗಿ ಗುರುತಿಸಿಕೊಳ್ಳುತ್ತಿದ್ದಾರೆ.
ಪುರುಷ ನಾಗಾ ಸಾಧುಗಳಂತೆ ಸ್ತ್ರೀ ನಾಗಾ ಸಾಧುಗಳೂ ಇದ್ದು, ಅವರು ಕುಟುಂಬ ಮತ್ತು ಭೌತಿಕ ಆಸ್ತಿಗಳ ಜೊತೆಗೆ ತಮ್ಮ ಎಲ್ಲಾ ಬಾಂಧವ್ಯಗಳನ್ನು ಕಡಿದು, ತಪಸ್ಸಿನ ಜೀವನವನ್ನು ಸ್ವೀಕರಿಸುತ್ತಾರೆ. ನಾಗಾ ಸಾಧ್ವಿಗಳಿಗೆ ನೀಡುವ ದೀಕ್ಷಾ ಪ್ರಕ್ರಿಯೆಯೂ ಪುರುಷರಿಗೆ ನೀಡುವುದರಷ್ಟೇ ಕಠಿಣವಾಗಿದೆ. ಅವರು ತಮ್ಮ ಗುರುಗಳಿಗೆ ಅಚಲವಾದ ಬದ್ಧತೆಯನ್ನು ಪ್ರದರ್ಶಿಸಬೇಕು. ಗುರು ಆಕೆಯನ್ನು ಒಪ್ಪಿಕೊಳ್ಳುವ ಮೊದಲು ತೀವ್ರವಾದ ಆಧ್ಯಾತ್ಮಿಕ ಪರೀಕ್ಷೆಗಳು ಮತ್ತು ತರಬೇತಿಗಳಿಗೆ ಒಳಗಾಗಬೇಕು. ಆಧ್ಯಾತ್ಮಿಕ ಅನ್ವೇಷಣೆಗಾಗಿ ತಮ್ಮ ಲೌಕಿಕ ಜೀವನವನ್ನು ಸಂಪೂರ್ಣವಾಗಿ ತ್ಯಜಿಸಿರುತ್ತಾರೆ. ಅವರು ತಮ್ಮ ಹಿಂದಿನ ಜೀವನದಿಂದ ಎಲ್ಲವನ್ನೂ ಬಿಟ್ಟು ಆಧ್ಯಾತ್ಮಿಕ ಮಾರ್ಗಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಸ್ತ್ರೀ ನಾಗಾಸಾಧುಗಳು ವಿರಕ್ತ ಹಿನ್ನೆಲೆಯಿಂದ ಬಂದವರಾಗಿರುತ್ತಾರೆ. ಸಂಸಾರ, ದಾಂಪತ್ಯದ ಕಡೆಗೆ ಇವರು ಹೊರಳುವಂತಿಲ್ಲ. ಹಾಗೆ ಹೋದರೆ ಅವರನ್ನು ನಾಗಾ ಪಂಥದಿಂದ ತೆಗೆಯುಲಾಗುತ್ತದೆ.
ನಾಗಾ ಸಾಧ್ವಿಗಳು ಆಂತರಿಕವಾಗಿ ಹೆಚ್ಚಿನ ಸಾಧನೆ ಮಾಡುತ್ತಾರೆ. ಯಾಕೆಂದರೆ ಪುರುಷರಿಗಿಂತ ಇವರ ಹಾರ್ಮೋನುಗಳು ದೇಹದಲ್ಲಿ ಈ ಕಠಿಣ ವ್ರತಗಳ ಸಂದರ್ಭದಲ್ಲಿ ಯದ್ವಾತದ್ವಾ ವರ್ತಿಸುತ್ತವೆ. ಜೊತೆಗೆ, ಇವರು ಆಕರ್ಷಕವಾಗಿದ್ದರೆ, ಇತರ ಪುರುಷರ ಅಥವಾ ನಾಗಾ ಸಾಧುಗಳ ವೇಷದಲ್ಲಿರುವ ದುರುಳರ ಕಣ್ಣು ಕೂಡ ಇವರ ಮೇಲೆ ಬಿದ್ದು ಅನಾಹುತ ಆಗುವ ಸಾಧ್ಯತೆಗಳಿರುತ್ತವೆ. ಆದರೆ ಪರಿಪಕ್ವ ನಾಗಾ ಸಾಧ್ವಿಗಳು ತಮ್ಮ ಕಠೋರವಾದ ದೃಷ್ಟಿ ಮಾತ್ರದಿಂದಲೇ ದುಷ್ಟರನ್ನು ಹಿಮ್ಮೆಟ್ಟಿಸಬಲ್ಲರು. ದೀಕ್ಷೆಗೆ ಮುನ್ನ ನಾಗಾ ಸಾಧ್ವಿಗಳು ಆರರಿಂದ ಹನ್ನೆರಡು ವರ್ಷಗಳ ಕಾಲ ಕಟ್ಟುನಿಟ್ಟಾದ ಬ್ರಹ್ಮಚರ್ಯವನ್ನು ಪಾಲಿಸಬೇಕಾಗುತ್ತದೆ. ಅವರು ತಮ್ಮ ಸಾಧನೆ ಅಥವಾ ತೀವ್ರವಾದ ತಪಸ್ಸಿನ ಸಮಯದಲ್ಲಿ ಸಾಮಾನ್ಯವಾಗಿ ಗುಹೆಗಳು, ಕಾಡುಗಳು ಅಥವಾ ಪರ್ವತಗಳಂತಹ ಪ್ರತ್ಯೇಕ ಸ್ಥಳಗಳಲ್ಲಿ ವಾಸವಿರಬೇಕಾಗುತ್ತದೆ. ಸಾಮಾನ್ಯವಾಗಿ ನಾಗಾ ಸಾಧ್ವಿಗಳು ಅಖಾಡಗಳು ಅಥವಾ ಸನ್ಯಾಸಿಗಳಿರುವ ಆಶ್ರಮಗಳಲ್ಲಿ ವಾಸಿಸುತ್ತಾರೆ. ಪುರುಷ ನಾಗಾ ಸಾಧುಗಳು ಮೈಮೇಲೆ ಒಂದೆಳೆ ಬಟ್ಟೆಯಿಲ್ಲದೆ ಓಡಾಡಬಲ್ಲರು. ಆದರೆ ಸಾಧ್ವಿಗಳು ಹಾಗೆ ಮಾಡಲಾರರು. ಯಾಕೆಂದರೆ ಸಮಾಜ ಅವರನ್ನು ಹಾಗೆ ಒಪ್ಪಿಕೊಳ್ಳಲಾರದು. ಬದಲಾಗಿ ಅವರು “ಗಂಟಿ” ಎಂದು ಕರೆಯಲ್ಪಡುವ ಕುಂಕುಮ ಬಣ್ಣದ ಬಟ್ಟೆಯನ್ನು ಧರಿಸಬೇಕು. ತಲೆಕೂದಲು ಕತ್ತರಿಸದೆ ಜಟೆ ಬಿಟ್ಟಿರಬೇಕು. ಹಣೆಯ ಮೇಲಿನ ವಿಶಿಷ್ಟ ತಿಲಕದಿಂದ ಸಾಧ್ವಿಗಳೆಂದು ಗುರುತಿಸಲ್ಪಡುತ್ತಾರೆ.
ಮಹಿಳೆಯರು ಸನ್ಯಾಸ ಸ್ವೀಕಾರ ಆಚರಣೆಯ ಭಾಗವಾಗಿ ತಮ್ಮದೇ ‘ಪಿಂಡದಾನ’ವನ್ನು ಮಾಡಬೇಕು. ಸಾಮಾನ್ಯವಾಗಿ ಇದು ಮರಣದ ನಂತರ ನಡೆಸಲಾಗುವ ಸಾಂಪ್ರದಾಯಿಕ ಆಚರಣೆ. ಇದು ಅವರ ಹಿಂದಿನ ಜೀವನದ ಅಂತ್ಯ ಮತ್ತು ಸನ್ಯಾಸಿಗಳಾಗಿ ಅವರ ಪುನರ್ಜನ್ಮವನ್ನು ಸಂಕೇತಿಸುತ್ತದೆ. ನಾಗಾ ಸಾಧ್ವಿಗಳು ನಾಗಾ ಸಮುದಾಯದಲ್ಲಿ ಗೌರವಾನ್ವಿತ ಸ್ಥಾನ ಹೊಂದಿರುತ್ತಾರೆ. ಅವರನ್ನು “ಮಾತಾ” (ತಾಯಿ) ಎಂದು ಸಂಬೋಧಿಸಲಾಗುತ್ತದೆ. ನಾಗಾ ಸಾಧ್ವಿಗಳು ತಮ್ಮ ಅಸಾಧಾರಣ ಆಧ್ಯಾತ್ಮಿಕ ಶಕ್ತಿ ಮತ್ತು ಕಠಿಣವಾದ ವ್ರತಗಳಿಗಾಗಿ ಖ್ಯಾತರಾಗಿದ್ದಾರೆ. ಮಹಾ ಕುಂಭಮೇಳದಲ್ಲಿ ಅವರ ಉಪಸ್ಥಿತಿಯನ್ನು ಆಶೀರ್ವಾದವೆಂದು ಪರಿಗಣಿಸಲಾಗುತ್ತದೆ. ಇವರು ಎಲ್ಲರ ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸ್ವಯಂ-ಸಾಕ್ಷಾತ್ಕಾರದ ಪ್ರಾಮುಖ್ಯತೆಯನ್ನು ನೆನಪಿಸುವವರಂತೆ ಕಾರ್ಯನಿರ್ವಹಿಸುತ್ತಾರೆ.
DAKSHINA KANNADA
ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?
Published
1 hour agoon
15/01/2025By
NEWS DESK3ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ
ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.
LATEST NEWS
ಭಾರತೀಯ ಸೇನಾ ದಿನ : ವಿಶೇಷತೆ ಹಾಗೂ ಮಹತ್ವವೇನು ?
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ
ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
ಮ*ರಣದ ನಂತರ ಏನು ಎಂದು ಹುಡುಕಿದಾತ ಸಾ*ವಿಗೆ ಶರಣಾದ!
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS2 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- FILM7 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ