bengaluru
ಹಣದಾಸೆ ತೋರಿಸಿ 14ರ ಬಾಲಕಿಗೆ ಬಾಳು ಕೊಟ್ಟ 45ರ ಅಂಕಲ್…!
Published
2 years agoon
By
Adminಬೆಂಗಳೂರು: ಹಣದ ಆಸೆ ತೋರಿಸಿ ಬಾಲಕಿಯನ್ನು ಪುಸಲಾಯಿಸಿ 14 ವಯಸ್ಸಿನ ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡಿರುವ ಆರೋಪದಡಿ 45 ವರ್ಷದ ವ್ಯಕ್ತಿಯೊಬ್ಬನನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗುರುಪ್ರಸಾದ್ (45) ಬಂಧಿತ ಆರೋಪಿ.
ಈತ ಯಲಹಂಕ ನ್ಯೂಟೌನ್ ಬಳಿಯ ಚಿಕ್ಕಬೆಟ್ಟಹಳ್ಳಿ ವಾಸವಾಗಿದ್ದು ಜೆಸಿಬಿ ಮಾಲೀಕನಾಗಿದ್ದ. ಆರ್ಥಿಕವಾಗಿ ಸದೃಢವಾಗಿದ್ದ. ಕೌಟುಂಬಿಕ ಕಾರಣಕ್ಕಾಗಿ 20 ವರ್ಷಗಳ ಹಿಂದೆಯೇ ಪತ್ನಿಯಿಂದ ದೂರವಾಗಿದ್ದ. ಈತನಿಗೆ 17 ವರ್ಷದ ಮಗನಿದ್ದಾನೆ.
ತಾನು ವಾಸಮಾಡುತ್ತಿದ್ದ ಏರಿಯಾದಲ್ಲಿ ಬಾಲಕಿ ಕುಟುಂಬ ವಾಸವಾಗಿತ್ತು. ಆರ್ಥಿಕವಾಗಿ ಹಿಂದುಳಿದಿದ್ದ ಬಾಲಕಿಯ ಪೋಷಕರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ.
ಇದನ್ನೇ ಬಂಡವಾಳ ಮಾಡಿಕೊಂಡ ಗುರುಪ್ರಸಾದ್ ಪೋಷಕರ ಬಳಿ ಮಗಳನ್ನು ವಿವಾಹವಾಗುವುದಾಗಿ ಹೇಳಿದ್ದಾನೆ.
ಆರ್ಥಿಕವಾಗಿ ಹಣದ ಸಹಾಯ ಮಾಡುವುದಾಗಿ ನಂಬಿಸಿದ್ದಾನೆ. ಆರಂಭದಲ್ಲಿ ವಿವಾಹಕ್ಕೆ ಒಪ್ಪದ ಪೋಷಕರು ಕಾಲಕ್ರಮೇಣ ಆರೋಪಿಯ ಮನವಿ ಒಪ್ಪಿಕೊಂಡಿದ್ದಾರೆ.
ಇದೀಗ ಈ ಹಿನ್ನೆಲೆ ಬಾಲಕಿ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
bengaluru
ಸರಿಗಮ ವಿಜಿ ಹೆಸರಿಗೆ ‘ಸರಿಗಮ’ ಸೇರಿಕೊಳ್ಳಲು ಆ ಒಂದು ನಾಟಕ ಕಾರಣ !
Published
1 day agoon
15/01/2025By
NEWS DESK3ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ. ಅವರು ಕನ್ನಡ ಸಿನಿಮಾ, ಧಾರವಾಹಿ ಹಾಗೂ ರಂಗಭೂಮಿಯಲ್ಲಿ ನಟಿಸಿದ್ದರು.
ಸರಿಗಮ ವಿಜಿ ಅವರ ಮೂಲ ಹೆಸರು ವಿಜಯ್ ಕುಮಾರ್. ಆದರೆ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡಿದ್ದು ಹೇಗೆ ಎನ್ನುವ ಕುತೂಹಲ ಹಲವರಲ್ಲಿ ಇದೆ.
‘ಸರಿಗಮ ವಿಜಿ’ ಎಂದೇ ಕರೆಯಲ್ಪಡುವ ನಟ ವಿಜಯ್ ಕುಮಾರ್ (76) ಅವರು ಬುಧವಾರ (ಜ.15) ನಿಧ*ನರಾದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಶ್ವಾಸಕೋಶದ ಸೋಂಕು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ವಾರದ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 9:45ರ ಸುಮಾರಿಗೆ ಅವರು ನಿಧ*ನ ಹೊಂದಿದ್ದಾರೆ.
ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇ*ನ್ನಿಲ್ಲ
ಬೆಂಗಳೂರಿನ ವಿಮಾನಪುರದಲ್ಲಿ (ಎಚ್ಎಎಲ್ ಪ್ರದೇಶ) ಜನಿಸಿದ ವಿಜಯ್ ಕುಮಾರ್, ನಾಟಕದ ನಂಟು ಇಟ್ಟುಕೊಂಡು ಸಿನಿಮಾಲೋಕ ಪ್ರವೇಶಿಸಿದವರು. ‘ಬೆಳುವಲದ ಮಡಿಲಲ್ಲಿ’ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ, ನಟನಾಗಿ ಮೊದಲ ಹೆಜ್ಜೆ ಇಟ್ಟ ಅವರು ಎನ್ ಜಿಇಎಫ್ ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ದುಡಿದವರು. ಈ ಅವಧಿಯಲ್ಲೇ ಅವರು ‘ಸಂಸಾರದಲ್ಲಿ ಸರಿಗಮ’ ಎಂಬ ನಾಟಕ ಬರೆದರು.
ಇದು ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ, ಹೈದರಾಬಾದ್, ಚೆನ್ನೈ, ದೆಹಲಿಗಳಲ್ಲಿಯೂ ಆ ನಾಟಕ ಪ್ರದರ್ಶನವಾಗಿತ್ತು. ಸುಮಾರು 1390 ಪ್ರದರ್ಶನಗಳಲ್ಲಿ ‘ಸಂಸಾರದಲ್ಲಿ ಸರಿಗಮ’ ನಾಟಕ ಕಂಡಿತ್ತು. ಇದೇ ಕಾರಣಕ್ಕೆ ವಿಜಿ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡು ಸರಿಗಮ ವಿಜಿ ಎಂದೇ ಜನಪ್ರಿಯರಾದರು.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದ ವಿಜಿ ಅವರು, ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಮಂಗಳೂರು/ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾ*ವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.
ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃ*ತ ಬಾಣಂತಿ ಎಂದು ಗುರುತಿಸಲಾಗಿದೆ.
ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅ*ನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃ*ತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎ*ಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.
ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾ*ಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫ*ಲಿಸದೆ ಮೃ*ತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂ*ರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bangalore
ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !
Published
4 weeks agoon
21/12/2024By
NEWS DESK3ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
LATEST NEWS
ಕಿಂಡರ್ ಜಾಯ್ ಪ್ರಿಯರೇ ಎಚ್ಚರ! ಇಷ್ಟದ ಚಾಕಲೇಟ್ನಲ್ಲಿ ಬ್ಯಾಕ್ಟೀರಿಯಾ ಪತ್ತೆ
ಬಾಹ್ಯಾಕಾಶ ಇತಿಹಾಸದಲ್ಲಿ ಸಾಧನೆ ಮೆರೆದ ಭಾರತ; ಸ್ಪೇಡೆಕ್ಸ್ ಕಾರ್ಯಾಚರಣೆ ಯಶಸ್ವಿ
ಹಸುವಿನ ಬಾಲಕ್ಕೆ ಮ*ಚ್ಚಿನಿಂದ ಹ*ಲ್ಲೆ; ದುರುಳರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯ
ತಿರುಪತಿಯಲ್ಲಿ ಮತ್ತೊಂದು ದುರಂ*ತ; ಜಾರಿ ಬಿದ್ದು ಬಾಲಕ ಸಾ*ವು
ಮಂಗಳೂರು : ಬ್ಯಾಡ್ಮಿಂಟನ್ ಕೋರ್ಟ್ನಲ್ಲೇ ಕು*ಸಿದುಬಿದ್ದು ವಿದ್ಯಾರ್ಥಿ ಸಾ*ವು
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಮಾ*ರಣಾಂತಿಕ ಹ*ಲ್ಲೆ
Trending
- BIG BOSS5 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS6 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS2 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?