Monday, October 18, 2021

ಪೆಟ್ರೋಲ್‌-ಡೀಸೆಲ್​ GST ವ್ಯಾಪ್ತಿಗೆ ತರುವ ಬಗ್ಗೆ ಇಂದು ಚರ್ಚೆ: ಹಣಕಾಸು ಸಚಿವರು ಭಾಗಿ

ನವದೆಹಲಿ: ಪೆಟ್ರೋಲ್, ಡೀಸೆಲ್​ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಮಂಡಳಿಯಲ್ಲಿ ಚರ್ಚೆ ನಡೆಸಲಾಗುವುದು.

ಇಂದು ಬೆಳಗ್ಗೆ 11 ಗಂಟೆಗೆ ಉತ್ತರಪ್ರದೇಶದ ಲಖನೌನಲ್ಲಿ 45ನೇ GST ಮಂಡಳಿ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಹಣಕಾಸು ಸಚಿವರು ಭಾಗಿಯಾಗಲಿದ್ದಾರೆ.


ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರುವ ವಿಚಾರಕ್ಕೆ ಸಂಬಂಧಪಟ್ಟಂತೆ ತೀರ್ಮಾನ ಕೈಗೊಳ್ಳಲು ಕೇರಳ ಹೈಕೋರ್ಟ್ ಜೂನ್ ತಿಂಗಳಲ್ಲಿ ಸೂಚನೆ ನೀಡಿತ್ತು. ಹೀಗಾಗಿ ಇಂದಿನ ಸಭೆಯಲ್ಲಿ ಈ ಬಗ್ಗೆ ಮಹತ್ವದ ಮಾತುಕತೆ ನಡೆಯಲಿದೆ.

ಒಂದು ವೇಳೆ ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಲಭ್ಯವಾಗುವ ಆದಾಯದಲ್ಲಿ ನಷ್ಟವಾಗಲಿದೆ.
GST ವ್ಯಾಪ್ತಿಗೆ ತಂದರೆ 50:50 ಅನುಪಾತದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ಆದಾಯ ಹಂಚಿಕೆಯಾಗಲಿದೆ. ಜೊತೆಗೆ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಬೆಲೆ ಇಳಿಕೆಯಾಗುವ ಸಾಧ್ಯತೆಗಳಿದ್ದು, ಲೀಟರ್ ಪೆಟ್ರೋಲ್ ಬೆಲೆ 59 ರೂಪಾಯಿಗೆ ಇಳಿಕೆಯಾಗಲಿದೆ ಎನ್ನಲಾಗಿದೆ. ಡೀಸೆಲ್ GST ವ್ಯಾಪ್ತಿಗೆ ತಂದಲ್ಲಿ ಪ್ರತಿ ಲೀಟರ್​​ಗೆ 50 ರೂ ದರದಲ್ಲಿ ಸಿಗುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾದಲ್ಲಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಕೂಡ ಇಳಿಕೆಯಾಗುತ್ತದೆ.

ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವ ಪಡೆದಿದೆ.
1 ಲೀಟರ್‌ಗಿಂತ ಕಡಿಮೆ ತೆಂಗಿನ ಎಣ್ಣೆಗೆ ಶೇ.18ರಷ್ಟು GST, ಲೀಟರ್‌ಗಿಂತ ಅಧಿಕ ತೆಂಗಿನ ಎಣ್ಣೆಗೆ ಬಾಟಲ್‌ಗೆ ಶೇ.5ರಷ್ಟು GST ವಿಧಿಸಲು ಶಿಫಾರಸು ಮಾಡಲಾಗುವುದು.

ಸೋಲಾರ್ ಪ್ಯಾನಲ್ ಮೇಲಿನ ಜಿಎಸ್‌ಟಿಯನ್ನು ಶೇಕಡಾ 5ರಿಂದ ಶೇಕಡಾ 18ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...