Connect with us

    LATEST NEWS

    ಕರಾವಳಿಗೆ ಕಂಟೈನರ್ ಮೂಲಕ ಗಾಂಜಾ ಸಪ್ಲೈ – ಉಡುಪಿಯಲ್ಲಿ ಸಿಕ್ಕಿದ್ದು 49 ಕೆಜಿ ಗಾಂಜಾ

    Published

    on

    ಉಡುಪಿ : ಉತ್ತರಪ್ರದೇಶ ರೆಜಿಸ್ಟ್ರೇಷನ್ ಲಾರಿಯಲ್ಲಿ ಕರಾವಳಿಗೆ ಬರುತ್ತಿದ್ದ ಅಪಾರ ಪ್ರಮಾಣದ ಗಾಂಜಾವನ್ನು ಉಡುಪಿ ಪೊಲೀಸರು ವಶಪಡಿಸಿದ್ದಾರೆ.

    ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭ ಉತ್ತರಪ್ರದೇಶ ರಿಜಿಸ್ಟ್ರೇಷನ್ ಲಾರಿ ಬಂದಿದ್ದು, ಪೊಲೀಸರು ಕಂಟೇನರ್ ಲಾರಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಬಿದಿರಿನ ಕೋಲುಗಳು ಸಿಕ್ಕಿದೆ.

    ಕಂಟೇನರ್ ನಲ್ಲಿ ಬಿದಿರಾ ಅಂತ ಸಂಶಯಗೊಂಡ ಪೊಲೀಸರು ಚಾಲಕ ಮತ್ತು ನಿರ್ವಾಹಕರ ವಿಚಾರಣೆ ನಡೆಸಿದಾಗ ಇಬ್ಬರು ತಬ್ಬಿಬ್ಬಾಗಿದ್ದಾರೆ. ಬಳಿಕ ಕಂಟೇನರ್ ಅನ್ನು ಪರಿಶೀಲನೆ ನಡೆಸಿದ್ದಾರೆ. ಕೆಲ ಬಿದಿರು ಕೋಲುಗಳನ್ನು ಓಪನ್ ಮಾಡಿ ನೋಡಿದಾಗ ಗಾಂಜಾದ ಪ್ಯಾಕೆಟ್ ಗಳು ಸಿಕ್ಕಿದೆ. ಕಂಟೇನರ್ ನಲ್ಲಿ 49 ಕೆಜಿ ಎಷ್ಟು ಗಾಂಜಾ ಸಿಕ್ಕಿದೆ ಎನ್ನಲಾಗಿದೆ.


    ಲಾರಿ ಚಾಲಕ, ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಟೇನರ್ ಸೀಜ್ ಮಾಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಗಾಂಜಾ ವಹಿವಾಟು ನಡೆಯುತ್ತದೆ ಎಂಬುದು ಜಗಜ್ಜಾಹೀರು. ಗಾಂಜಾ ವ್ಯಾಪಾರಿಗಳು ಕೂಡ ಈ ಭಾಗದ ಯುವಕರನ್ನು ಗಾಂಜಾ ಗಿರಾಕಿಗಳನ್ನಾಗಿ ಪರಿವರ್ತಿಸಿದ್ದು ಸರ್ಕಾರದ ಮತ್ತು ಪೊಲೀಸರ ನಿದ್ದೆಗೆಡಿಸಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಬೆಂಗಳೂರು: ಮಂತ್ರಿಮಾಲ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

    Published

    on

    ಬೆಂಗಳೂರು: ವಿಪರೀತ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಗರದ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

    ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿ ಟಿ.ಸಿ. ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು. ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

    Continue Reading

    LATEST NEWS

    ಕಂದಕಕ್ಕೆ ಉರುಳಿದ ಕಾರು; ಮೂವರ ದು*ರ್ಮರಣ

    Published

    on

    ಮಂಗಳೂರು/ವಿಜಯಪುರ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಕದಂಕಕ್ಕೆ ಉರುಳಿದ ಪರಿಣಾಮ ಮೂವರು ಸಾ*ವನ್ನಪ್ಪಿರುವ ಘಟನೆ ವಿಜಾಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರ ಕನ್ನಾಳ ಕ್ರಾಸ್‌ ಬಳಿ ನಡೆದಿದೆ.

    ವಿಜಯಪುರ ನಗರದ  ಅಭಿಷೇಕ ಸಾವಂತ್(23), ವಿಜಯಕುಮಾರ್ ಔರಂಗಾಬಾದ್(24), ರಾಜು ಬಿರಾದಾರ(23) ಮೃ*ತಪಟ್ಟವರು.

    ಇದನ್ನೂ ಓದಿ : ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

    ಕಾರಿನಲ್ಲಿ ಐವರು ಸೋಲಾಪುರದಿಂದ ವಿಜಯಪುರಕ್ಕೆ ವಾಪಾಸ್ಸಾಗುತ್ತಿದ್ದಾಗ ಅಪಘಾ*ತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

    Published

    on

    ಮುಂಬೈ: ಮಹಾರಾಷ್ಟ್ರದಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಜಲಗಾಂವ್ ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ, ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

    ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌  ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.

    ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ. ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಅಪಘಾತ ಸಂಭವಿಸಿದೆ ಎನ್ನುವುದು ಸುಳ್ಳು, ಸದ್ಯ ಮೃತರ ಪೈಕಿ 10 ಜನರನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

    ರೈಲ್ವೆ ಇಲಾಖೆ ಮೃತರ ಕುಟಂಬಸ್ಥರಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂಭವಿಸಿದ ಅಪಘಾತದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ. 4.45ಕ್ಕೆ ಪುಷ್ಪಕ್ ಎಕ್ಸ್ಪ್ರೆಸ್ ನಿಂತ 20 ನಿಮಿಷಗಳ ಬಳಿಕ 5.05ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದೆ. ಆದರೆ ಜನರು ಹಳಿ ಬಿಟ್ಟು ಕದಡದ ಕಾರಣ ದುರಂತ ಆಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.

    Continue Reading

    LATEST NEWS

    Trending

    )?$/gm,"$1")],{type:"text/javascript"}))}catch(e){d="data:text/javascript;base64,"+btoa(t.replace(/^(?:)?$/gm,"$1"))}return d}-->