Wednesday, December 1, 2021

ಬೆಂಗಳೂರಿನಲ್ಲಿ ಬ್ಲ್ಯಾಕ್ ಆಂಡ್ ವೈಟ್ ದಂಧೆ: ನಕಲಿ ನೋಟು ಜಾಲದ 7 ಮಂದಿ ಬಂಧನ

ಬೆಂಗಳೂರು: ಹಳೆ ನೋಟು ನಿಷೇಧಗೊಂಡು ಹಲವು ವರ್ಷ ಕಳೆದರೂ ಅಮಾನೀಕರಣಗೊಂಡ ನೋಟಿನ ಹೆಸರಿನಲ್ಲಿ ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು‌ಮಾಡಿ ದಂಧೆ ನಡೆಸುತ್ತಿದ್ದ ಏಳು ಮಂದಿ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.

ಬಟ್ಟೆ ವ್ಯಾಪಾರಿಗಳಾದ ಸುರೇಶ್ ಕುಮಾರ್, ರಾಮಕೃಷ್ಣ, ಬಿಬಿಎಂಪಿ ಉಪ ಗುತ್ತಿಗೆದಾರ ವೆಂಕಟೇಶ್, ರೈತರಾದ ಮಂಜುನಾಥ್ ದಯಾನಂದ್, ಶಿವ ಮತ್ತು ಪಳನಿಸ್ವಾಮಿ ಬಂಧಿತ ಆರೋಪಿಗಳು.

ಬಂಧಿತರಿಂದ ಅಮಾನ್ಯಗೊಂಡ ರೂ. 1000 ಹಾಗೂ ರೂ. 500 ರೂಪಾಯಿ ಮುಖಬೆಲೆಯ 80 ಲಕ್ಷ ಹಳೆಯ ನೋಟುಗಳು ಹಾಗೂ 5 ಕೋಟಿಯಷ್ಟು ಜೆರಾಕ್ಸ್ ಮಾಡಿರುವ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ.

 

ಗೋವಿಂದಪುರ ಠಾಣಾ ವ್ಯಾಪ್ತಿಯ ಎಚ್​.ಬಿ.ಆರ್ ಲೇಔಟ್​ನ ಪೆಟ್ರೋಲ್ ಬಂಕ್ ಬಳಿ ಮೂವರು ಅಪರಿಚಿತರು ಬ್ಯಾನ್ ಆದ ನೋಟುಗಳನ್ನು ಮಾರಾಟ ಮಾಡಲು ಪ್ರಯತ್ನಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.

ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು, ದಾಳಿ ಮಾಡಿದ್ದರು. ಈ ವೇಳೆ, ಮೂವರನ್ನು ಬಂಧಿಸಿ 1000 ಹಾಗೂ 500 ಮುಖಬೆಲೆಯ 45 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದರು.

ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ದಂಧೆಯಲ್ಲಿ ತೊಡಗಿದ್ದ ಐವರನ್ನು ಬಂಧಿಸಿ ಮತ್ತೆ 35 ಲಕ್ಷ ನಕಲಿ ನೋಟುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದರು.ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್ಸ್​ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕೇರಳದ ಕಾಸರಗೋಡಿನ ಗೋದಾಮಿನ ಮೇಲೆ ದಾಳಿ ಮಾಡಿದಾಗ 5 ಕೋಟಿ ಮೌಲ್ಯದ ಕಲರ್ ಜೆರಾಕ್ಸ್ ನೋಟುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ದಾಳಿ ವೇಳೆ ಪೊಲೀಸರು ಒಟ್ಟು 12 ಥರ್ಮಾಕೋಲ್ ಹಾಗೂ ಹಣ ತುಂಬಿಸಿದ್ದ 24 ಮೂಟೆಗಳಲ್ಲಿ ₹5 ಕೋಟಿ ಮೌಲ್ಯದ ನಕಲಿ ಹಣ ವಶಕ್ಕೆ ಪಡೆದಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...