ಮೈಸೂರು: ಮೈಸೂರನ್ನು ಬೆಚ್ಚಿಬೀಳಿಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಮೈಸೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಇಂದು ಬೆಳಗ್ಗೆ ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಘಟನೆ ನಡೆದು ಸತತ 85 ಗಂಟೆ ಬಳಿಕ ವೈದ್ಯಕೀಯ ವಿದ್ಯಾರ್ಥಿ ಮೇಲೆ ಎರಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 24ರಂದು ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಳು.
ಈ ವೇಳೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಾಲ್ವರು ಯುವಕರ ತಂಡ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸ್ಥಳದಿಂದ ಕಾಲ್ಕಿತ್ತಿತ್ತು.
ಈ ಘಟನೆ ಮೈಸೂರು ಮಾತ್ರವಲ್ಲದೇ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಅಲ್ಲದೇ ಇದು ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿತ್ತು. ಇದೀಗ ಅತ್ಯಾಚಾರ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ತಾಂತ್ರಿಕ ಸಾಕ್ಷ್ಯಧಾರಗಳ ಆಧಾರದ ಮೇಲೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸರ ಮೂಲಗಳಿಂದ ತಿಳಿದುಬಂದಿದೆ.
ಸದ್ಯ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಆರೋಪಿಗಳು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದ್ದು, ಇವರೆಲ್ಲ ಕೂಲಿ ಕಾರ್ಮಿಕರಾಗಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ಸಂಜೆ ಈ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ