Monday, August 8, 2022

ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಪೊಲೀಸರಿಂದ ರಕ್ತದಾನ

ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಐವರು ಪೊಲೀಸರು ರಕ್ತದಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದು, ಸಂತ್ರಸ್ತೆಗೆ ಈವರೆಗೆ ಶಸ್ತ್ರಚಿಕಿತ್ಸೆ ನಡೆದಿದ್ದು ಈ ಸಂದರ್ಭ ರಕ್ತದಾನ ಮಾಡಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಪ್ರಶಾಂತ್, ಪ್ರೊಬೇಷನರಿ ಸಬ್ ಇನ್ಸ್ ಪೆಕ್ಟರ್ ವಿಶ್ವನಾಥ್ ರೆಡ್ಡಿ, ಚಂದ್ರಯ್ಯ, ಮೋಹನ್ ಕುಮಾರ್ ಮತ್ತು ನಟರಾಜ್ ಅವರು ನಿನ್ನೆ ರಕ್ತದಾನ ಮಾಡಿದ್ದಾರೆ.

ಪೊಲೀಸರ ಕಾರ್ಯಕ್ಕೆ ಸೇಂಟ್ ಜಾನ್ಸ್ ಆಸ್ಪತ್ರೆ ವೈದ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದು ಯುವತಿಗೆ ಇದುವರೆಗೂ ಮೂರು ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಶೀಘ್ರದಲ್ಲಿಯೇ ಮತ್ತೊಂದು ಶಸ್ತ್ರಚಿಕಿತ್ಸೆ ಕೂಡಾ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಇನ್ನೂ 3-4 ದಿನ ಭಾರೀ ಮಳೆ: ಹಲವು ಕಡೆಗಳಲ್ಲಿ ಪ್ರವಾಹ ಭೀತಿ-ಹವಾಮಾನ ಇಲಾಖೆ ಎಚ್ಚರಿಕೆ

ಹೊಸದಿಲ್ಲಿ: ಕೇಂದ್ರ ಭಾರತ ಮತ್ತು ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಮುಂದಿನ 3-4 ದಿನಗಳವರೆಗೆ 200 ಮಿಲಿಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.ಶನಿವಾರ...

10ರ ಬಾಲೆ-ತಾಯಿ ಬೇರೆ ಬೇರೆ ಕೋಣೆಯಲ್ಲಿ ಸೂಸೈಡ್‌: ಪ್ರೀತಿಸಿ ಮದ್ವೆಯಾಗಿದ್ದ ದಂಪತಿ

ಬೆಂಗಳೂರು: ತಾಯಿಯೊಬ್ಬಳು 10 ವರ್ಷದ ಮಗುವನ್ನು ಕೊಂದು ತಾಯಿ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತನ್ನ 10 ವರ್ಷದ ಮಗಳು ಆರಾಧನಾಗೆ ಮನೆಯಲ್ಲೇ ನೇಣು ಹಾಕಿ ಹತ್ಯೆ...

‘ವಾಹನಗಳಲ್ಲಿ ರಾಷ್ಟ್ರಧ್ವಜ ಹಾಕುವಂತಿಲ್ಲ-ಎಲ್ಲೆಂದರಲ್ಲಿ ಬಿಸಾಡಿದ್ರೆ ಜೈಲೇ ಗತಿ’

ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...