Thursday, September 29, 2022

ಪಂಚರಾಜ್ಯಗಳ ಚುನಾವಣೆ: ನಾಳೆ ಕಾಂಗ್ರೆಸ್‌ನ ಆತ್ಮಾವಲೋಕನ ಸಭೆ-ಸೋನಿಯಾ, ರಾಹುಲ್‌ ಭಾಗಿ

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತು ಸುಣ್ಣವಾದ ಬೆನ್ನಲ್ಲೇ ಕಾಂಗ್ರೆಸ್​ ಸೋಲನ್ನು ಆತ್ಮಾವಲೋಕನ ಮಾಡಿಕೊಳ್ಳುವ ಸಲುವಾಗಿ ನಾಳೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ ಕರೆದಿದೆ.

ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ (Congress Working Committee) ಸಭೆ ಕರೆದಿದೆ.

ಈ ಕಮಿಟಿ ಕಾಂಗ್ರೆಸ್​​ನ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಮಿತಿಯಾಗಿದ್ದು, ದೆಹಲಿಯ ಕಾಂಗ್ರೆಸ್​ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ.


ಈ ಮಧ್ಯೆ ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಕಾಂಗ್ರೆಸ್​​ನ ಜಿ 23 ನಾಯಕರು ಮತ್ತೆ ಅಲರ್ಟ್ ಆಗಿದ್ದಾರೆ. ಕೂಡಲೇ ಎಐಸಿಸಿ ಸಭೆ ನಡೆಸಬೇಕು. ಕಾಂಗ್ರೆಸ್​ಗೆ ಕೂಡಲೇ ಬೇರೆ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ನಿನ್ನೆ ಆಗ್ರಹಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಸೋತಾಗಲೇ ಈ ನಾಯಕರು ಹೊಸ ಅಧ್ಯಕ್ಷರ ನೇಮಕ, ಪಕ್ಷ ಸಂಘಟನೆ ಬೇಡಿಕೆಗಳನ್ನು ಇಟ್ಟಿದ್ದರು. ಆದರೆ ಅವರಿಗೆ ಸೋನಿಯಾ ಗಾಂಧಿ ಖಡಕ್​ ಎಚ್ಚರಿಕೆ ನೀಡಿದ್ದರು.

ಆಗ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ ಭೂಪೇಂದರ್​ ಸಿಂಗ್​ ಹೂಡಾ, ಮನೀಶ್ ತಿವಾರಿ, ಕಪಿಲ್ ಸಿಬಲ್​, ಗುಲಾಂ ನಬಿ ಆಜಾದ್​, ಆನಂದ್​ ಶರ್ಮಾ, ಅಖಿಲೇಶ್ ಪ್ರಸಾದ್ ಸಿಂಗ್​ ಇತರರನ್ನೊಳಗೊಂಡ ಜಿ 23 ನಾಯಕರು,

ಕಾಂಗ್ರೆಸ್ ಕಾರ್ಯಕಾರಿ ಸಭೆಯನ್ನು ತೆಗೆದುಹಾಕಬೇಕು. ಈ ಸಿಡಬ್ಲ್ಯೂಸಿಯಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಒಂದೂ ಗಂಭೀರ ವಿಚಾರಗಳ ಚರ್ಚೆ, ಸಮಸ್ಯೆಗೆ ಪರಿಹಾರಗಳು ಸಿಗುತ್ತಿಲ್ಲ ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here

Hot Topics

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...