Thursday, April 22, 2021

ಚಾಕಲೇಟ್ ಆಸೆ ತೋರಿಸಿ 5 ರ ಕಂದಮ್ಮನ ಮೇಲೆ 60ರ ವೃದ್ಧನಿಂದ ಅತ್ಯಾಚಾರ..!

ಚಾಕಲೇಟ್ ಆಸೆ ತೋರಿಸಿ 5 ರ ಕಂದಮ್ಮನ ಮೇಲೆ 60ರ ವೃದ್ಧನಿಂದ ಅತ್ಯಾಚಾರ..!

ಕೋಲಾರ : ಚಾಕಲೇಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿ ಅತ್ಯಾಚಾರ ಯತ್ನ ನಡೆಸಿರುವ ಘಟನೆ ಕೋಲಾರದಲ್ಲಿ ಸಂಭವಿಸಿದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ವೃದ್ದ ಅತ್ಯಾಚಾರ ಯತ್ನ  ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ವಿಚಾರ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಹಿರಿಯರೆಲ್ಲಾ ಸೇರಿ ಒಂದು ಸುತ್ತಿನ ಪಂಚಾಯತಿ ಮಾಡಿದ್ದು, ಮಗುವಿನ ಪೋಷಕರಿಗೆ ಪೊಲೀಸರಿಗೆ ದೂರು ನೀಡದಂತೆ ಒತ್ತಡ ಹಾಕಿದ್ದಾರೆ.

ಆದ್ರೆ ಸಂಬಂದಿಕರ ಸಹಾಯ ಪಡೆದ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, 5 ವರ್ಷದ ಬಾಲಕಿಗೆ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅತ್ಯಾಚಾರ ಯತ್ನ ಮಾಡಿದ ಅರೋಪಿ ಇಷ್ಟೆಲ್ಲಾ ಅವಾಂತರವಾಗುತ್ತಿದ್ದಂತೆ ಇಲಿ ಪಾಷಣ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಪೊಲೀಸರು ವಿಷ ಕುಡಿದು ಆತ್ಮಹತ್ಯಗೆ ಯತ್ನಿಸಿದ ಆರೋಪಿ ವೃದ್ದ ವ್ಯಕ್ತಿಯನ್ನ ಅಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆ ಅಡಿ ದೂರು ದಾಖಲಾಗಿದೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...