ನವದೆಹಲಿ: ಕೇಂದ್ರ ಸರ್ಕಾರವು ಐನ್ನೂರು ರೂಪಾಯಿ ಹಾಗೂ ಒಂದು ಸಾವಿರ ರೂಪಾಯಿಯ ನೋಟುಗಳನ್ನು ದೇಶದಲ್ಲಿ ಅಮಾನ್ಯೀಕರಣ ಮಾಡಿ ಇಂದಿಗೆ ಐದು ವರ್ಷಗಳು ಆಗಿದೆ.
2016 ರ ನವೆಂಬರ್ 8 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 500 ರೂಪಾಯಿ ಹಾಗೂ 1,000 ರೂಪಾಯಿಯ ನೋಟುಗಳನ್ನು ದೇಶದಲ್ಲಿ ಅಮಾನ್ಯೀಕರಣ ಮಾಡಿದ್ದು, ಬಳಿಕ ಐನ್ನೂರು ಹಾಗೂ ಎರಡು ಸಾವಿರ ರೂಪಾಯಿಯ ಹೊಸ ನೋಟನ್ನು ಚಲಾವಣೆಗೆ ತರಲಾಗಿದೆ.
ನೋಟು ಅಮಾನ್ಯೀಕರಣಗೊಂಡು ಐದು ವರ್ಷ ಆಗುತ್ತಿರುವಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ಮುಂದುವರಿಸಿದೆ. 2016 ರ ನವೆಂಬರ್ 8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯ ರಾತ್ರಿಯಿಂದ ಜಾರಿಗೆ ಬರುವಂತೆ 500 ರೂಪಾಯಿ ಹಾಗೂ 1,000 ರೂಪಾಯಿಯ ನೋಟುಗಳನ್ನು ದೇಶದಲ್ಲಿ ನಿಷೇಧ ಮಾಡುವ ನಿರ್ಧಾರ ಪ್ರಕಟ ಮಾಡಿದ್ದರು. ಇಂದು ಈ ಬಗ್ಗೆ ಹಲವು ಟ್ವೀಟ್, ಮೀಮ್ಸ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದವು.