Wednesday, May 18, 2022

ಮಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ ಮಹಾರಾಷ್ಟ್ರ – ಕೇರಳದ 51 ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಗೆ ಒಪ್ಪಿಸಿದ ಪೊಲೀಸರು

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಅನುಸರಿಸಲು ಆರಂಭಿಸಿದೆ.

ನೆರೆ ರಾಜ್ಯಗಳಾದ ಮಹಾರಾಷ್ಟ್ರ , ಕೇರಳ ಮತ್ತು ತಮಿಳು ನಾಡಿನಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಟಸ್ಟ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಎಲ್ಲಾ ಪ್ರಮುಖ ರೈಲು ನಿಲ್ದಾಣಗಳು, ಗಡಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ತೀವ್ರ ತಪಾಸಣೆ ಆರಂಭಿಸಲಾಗಿದೆ.

ನಿನ್ನೆ ಮಂಗಳೂರು ಕೇರಳ ಹಾಗೂ ಮಹಾರಾಷ್ಟ್ರದಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆ ಮಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ 51 ಪ್ರಯಾಣಿಕರನ್ನು ಪೊಲೀಸರು ವಶಕ್ಕೆ ಪಡೆದು ನಗರದ ಪುರಭವನದಲ್ಲಿ ತಾತ್ಕಾಲಿಕ ಕ್ವಾರಂಟೈನ್ ಇರಿಸಲಾಗಿದೆ.

ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಈ ಮಾಹಿತಿಯನ್ನು ನೀಡಿದ್ದಾರೆ..

ಕೇವಲ ತಾತ್ಕಾಲಿಕ ಕ್ವಾರಂಟೈನ್‌ನಲ್ಲಿ ಈ ಪ್ರಯಾಣಿಕರನ್ನು ಇರಿಸಲಾಗಿದ್ದು ವಶಕ್ಕೆ ಪಡೆದಿಲ್ಲ. ಪ್ರಯಾಣಿಕರಿಗೆ ಗಂಟಲು ದ್ರವ ಪರೀಕ್ಷೆ‌ ನಡೆಸಲಾಗಿದ್ದು, ಸ್ಯಾಂಪಲ್ ಪಡೆಯಲಾಗಿದೆ. ಸ್ಯಾಂಪಲ್‌ಗಳ ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ.

ಪರೀಕ್ಷೆಯಲ್ಲಿ‌ ನೆಗೆಟಿವ್ ಬಂದಂತಹ ಪ್ರಯಾಣಿಕರನ್ನು ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು.‌ ಪಾಸಿಟಿವ್ ಬಂದ ಪ್ರಯಾಣಿಕರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಕಳುಹಿಸಲಾಗುವುದು ಎಂದಿದ್ದಾರೆ.‌ ಮುಂದಿನ ದಿನಗಳಲ್ಲೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಡಿಸಿಪಿ‌‌ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...