LATEST NEWS
18ರ ಯುವಕನ ಜೊತೆ 51ರ ಮಹಿಳೆಯ ಲವ್; 4 ಮಕ್ಕಳನ್ನು ತೊರೆದು ಆಂಟಿ ಪರಾರಿ
Published
4 hours agoon
ಮಂಗಳೂರು/ಉತ್ತರಪ್ರದೇಶ: ಪ್ರೀತಿಗೆ ಕಣ್ಣಿಲ್ಲ, ಜಾತಿ ಧರ್ಮ ಯಾವುದರ ಬೇಧ ಭಾವವಿಲ್ಲ ಎನ್ನುತ್ತಾರೆ. ಆದರೆ ಅದೆಲ್ಲವನ್ನೂ ಮೀರಿದ ವಿಚಿತ್ರವೇ ಪ್ರೇಮ ಎನ್ನಬಹುದು. 18ರ ಯುವಕನ ಜೊತೆಗೆ ತನಗಿಂತ ಮೂರು ಪಟ್ಟು ದೊಡ್ಡವಳಾಗಿರುವ, ನಾಲ್ಕು ಮಕ್ಕಳಿರುವ 51 ವರ್ಷದ ಆಂಟಿ ಜೊತೆಗೆ ಪ್ರೀತಿ (Love) ಚಿಗುರಿದ ವಿಶೇಷ ಘಟನೆಯೊಂದು ನಡೆದಿದ್ದು, ಅದರ ವಿವರ ಇಲ್ಲಿದೆ
ವಿವಾಹಿತ ಆಂಟಿಯ ಹಿರಿಯ ಮಗಳಿಗೆ ಮದುವೆಯು ಕೂಡ ಆಗಿದೆ. ತನ್ನ ಗ್ರಾಮದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಇನ್ನೊಂದು ಗ್ರಾಮದ 18 ವರ್ಷದ ಹುಡುಗನೊಂದಿಗಿನ ಪರಿಚಯ ಕ್ರಮೇಣ ಇವರಿಬ್ಬರ ಪರಿಚಯ ಪ್ರೀತಿಗೆ ತಿರುಗಿತು. ಈ ಯುವಕ ಹಾಗೂ ಮಧ್ಯ ವಯಸ್ಕ ಜೋಡಿ ಹರೆಯದ ಯುವಕರಂತೆ ಆಗಾಗ ರಹಸ್ಯವಾಗಿ ಬೇಟಿಯಾಗಲು ಆರಂಭಿಸಿದ್ದಾರೆ. ಆದ್ರೆ ತಮ್ಮ ತಾಯಿ ಹುಡಗನನ್ನು ಪ್ರೀತಿ ಮಾಡುತ್ತಿರುವ ವಿಚಾರ ಗೊತ್ತಾಗಿ ಎಲ್ಲ ನಾಲ್ಕು ಮಕ್ಕಳು ತಾಯಿಯ ವಿರುದ್ದ ತಿರುಗಿ ಬಿದ್ದಿದ್ದಾರೆ. ಬುದ್ದಿ ಹೇಳಿದ್ದಾರೆ. ಆದ್ರೆ ಆಕೆ ಮಾತ್ರ ಮಕ್ಕಳ ವಿರೋಧವನ್ನು ಲೆಕ್ಕಿಸಿಲ್ಲ. ತನ್ನ ಸಂಬಂಧವನ್ನು ಮುಂದುವರಿಸಿದ್ದಾಳೆ.
ಈ ಜೋಡಿ ಊರ ಹೊರಗಿನ ಸ್ಥಳದಲ್ಲಿ ಭೇಟಿ ಮಾಡುತ್ತಿದ್ದರು. ಕೊನೆಗೆ ಊರಿನವರನ್ನು ಎದುರಿಸಲಾಗದೆ ಒಂದು ದಿನ, ಮಹಿಳೆ ತನ್ನ ಯುವ ಪ್ರೇಮಿಯೊಂದಿಗೆ ಓಡಿಹೋದಳು. ಆದ್ರೆ ತಾಯಿ ಓಡಿ ಹೋಗಿದ್ದಾಳೆ ಎಂಬ ಸುದ್ದಿ ಗೊತ್ತಾಗಿ ಆಕೆಯ ಹಿರಿಯ ಮಗಳು ಪೊಲೀಸರ ನೆರವಿನಿಂದ ಹುಡುಕಾಟ ಆರಂಭಿಸಿದಳು. ಈ ಘಟನೆ ಉತ್ತರ ಪ್ರದೇಶದ ಸಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಗಳ ದೂರಿನ ಆಧಾರದ ಮೇಲೆ ಪೊಲೀಸರು ಮಹಿಳೆ ಮತ್ತು ಆಕೆಯ ಯುವ ಪ್ರಿಯಕರನ ಹುಡುಕಾಡಿ, ಕೊನೆಗೂ ಪತ್ತೆಹಚ್ಚಿದರು. ಇಬ್ಬರನ್ನು ಠಾಣೆಯ ಕರೆತಂದರು. ಕೊನೆಗೆ ಅವರವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
BIG BOSS
ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್‌ನಿಂದ ಹೊರಬಂದ ತ್ರಿವಿಕ್ರಮ್!
Published
27 minutes agoon
23/12/2024By
NEWS DESK2ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11 ಇವತ್ತು ಮತ್ತೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ವಾರದ ಎಲಿಮಿನೇಷನ್ ಟ್ವಿಸ್ಟ್‌ಗೆ ಇವತ್ತು ಮೆಗಾ ಕ್ಲೈಮ್ಯಾಕ್ಸ್ ಕಾದಿದೆ. ಬಿಗ್ ಬಾಸ್ ವೀಕ್ಷಕರ ಕುತೂಹಲ ಹಾಗೂ ಕಾಡುತ್ತಿರುವ ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗುತ್ತಿದೆ.
ಬಿಗ್ ಬಾಸ್ ಸೀಸನ್ 11 ಸ್ಪರ್ಧಿಗಳ ಜಿದ್ದಾಜಿದ್ದಿ ಜೋರಾಗಿದೆ. 12ನೇ ವಾರದಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋ ಕುತೂಹಲ ಹಾಗೇ ಉಳಿದಿದೆ. ಸೂಪರ್ ಸಂಡೇ ವಿತ್ ಬಾದ್ ಷಾ ಎಪಿಸೋಡ್‌ನಲ್ಲಿ ಐಶ್ವರ್ಯ ಹಾಗೂ ತ್ರಿವಿಕ್ರಮ್ ಡೇಂಜರ್ ಝೋನ್ ತಲುಪಿದ್ದರು. ಕೊನೆಗೆ ತ್ರಿವಿಕ್ರಮ್ ಅವರೇ ಎಲಿಮಿನೇಟ್ ಎಂದು ಘೋಷಣೆ ಮಾಡಲಾಗಿದ್ದು, ಬಿಗ್ ಬಾಸ್ ಆದೇಶದಂತೆ ತ್ರಿವಿಕ್ರಮ್ ಬಿಗ್ ಬಾಸ್ ಗೇಟ್ ಓಪನ್ ಮಾಡಲಾಗಿದೆ.
ತ್ರಿವಿಕ್ರಮ್ ಅವರು ಈ ವಾರ ಎಲಿಮಿನೇಟ್ ಆಗಿದ್ದಾರಾ ಅನ್ನೋದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ. ಬಿಗ್ ಬಾಸ್ ವೀಕ್ಷಕರಿಗೆ ಇವತ್ತು ಮೆಗಾ ಟ್ವಿಸ್ಟ್ ಕಾದಿದೆ. ಬಿಗ್ ಬಾಸ್ ಮನೆಯ ಸದಸ್ಯರು ಕೂಡ ತ್ರಿವಿಕ್ರಮ್ ಈ ವಾರ ಎಲಿಮಿನೇಟ್ ಆಗಿದ್ದಾರೆ ಅನ್ನೋದನ್ನ ಈಗಲೂ ನಂಬುತ್ತಿಲ್ಲ. ಮತ್ತೊಂದು ಸರ್‌ಪ್ರೈಸ್ ಕಾದಿದೆ ಅಂದುಕೊಂಡೇ ಕಾಲ ಕಳೆಯುತ್ತಿದ್ದಾರೆ.
ಮೂಲಗಳ ಪ್ರಕಾರ ತ್ರಿವಿಕ್ರಮ್ ಅವರು ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋ ಸಾಧ್ಯತೆ ಕಡಿಮೆ ಇದೆ. ಪ್ರತಿ ಸೀಸನ್ ಅಂತೆ ತ್ರಿವಿಕ್ರಮ್ ಅವರನ್ನ ಬಿಗ್ ಬಾಸ್ ಸೀಕ್ರೆಟ್ ರೂಮ್‌ಗೆ ಕಳುಹಿಸಿರುವ ಸಾಧ್ಯತೆ ಇದೆ. ಮನೆಯವರ ಮಾತುಗಳನ್ನ ಕೇಳಿಸಿಕೊಂಡು ತ್ರಿವಿಕ್ರಮ್ ಅವರು ಬಿಗ್ ಬಾಸ್ ಮನೆಯಲ್ಲಿ ಸರ್‌ಪ್ರೈಸ್ ಆಗಿ ಎಂಟ್ರಿ ಕೊಡಬಹುದು ಎನ್ನಲಾಗಿದೆ.
ಬಿಗ್ ಬಾಸ್ ಕೊಟ್ಟ ಎಲ್ಲಾ ಟಾಸ್ಕ್‌ಗಳಲ್ಲೂ ತ್ರಿವಿಕ್ರಮ್ ಅವರು ಚೆನ್ನಾಗಿಯೇ ಆಟ ಆಡಿಕೊಂಡು ಬಂದಿದ್ದಾರೆ. ಇದರ ಜೊತೆಗೆ ಈ ವಾರ ಬಿಗ್ ಬಾಸ್ ಎಲಿಮಿನೇಷನ್‌ನಿಂದ ವೀಕ್ಷಕರ ವೋಟಿಂಗ್ ಕೂಡ ಓಪನ್ ಆಗಿಲ್ಲ. ಹೀಗಾಗಿ ತ್ರಿವಿಕ್ರಮ್ ಅವರು ಎಲ್ಲರ ನಿರೀಕ್ಷೆಯಂತೆ ಎಲಿಮಿನೇಟ್ ಆಗದೆ ಇಂದು ಮತ್ತೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಇದೆ.
LATEST NEWS
ಕುಂದಾಪುರ: ಗಾಳಿ ತುಂಬಿಸುತ್ತಿದ್ದ ವೇಳೆ ಟೈರ್ ಸ್ಫೋಟ: ಯುವಕನಿಗೆ ಗಂಭೀರ ಗಾಯ
Published
55 minutes agoon
23/12/2024By
NEWS DESK2ಕುಂದಾಪುರ: ಟೈರ್ ಪಂಕ್ಚರ್ ಶಾಪ್ ಒಂದರಲ್ಲಿ ಬಸ್ಸೊಂದರ ಟೈರ್ ಗೆ ಗಾಳಿ ತುಂಬಿಸುತ್ತಿದ್ದ ಸಂದರ್ಭ ಟೈರ್ ಸಿಡಿದು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.
ಅಬ್ದುಲ್ ರಶೀದ್ (19) ಗಂಭೀರ ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ.
ಕೋಟೇಶ್ವರದಲ್ಲಿರುವ ಟೈರ್ ಪಂಕ್ಚರ್ ಶಾಪ್ ಗೆ ಖಾಸಗಿ ಶಾಲಾ ಬಸ್ಸೊಂದರ ಟೈರ್ ಪ್ಯಾಚ್ ಗೆ ಬಂದಿತ್ತು. ಈ ವೇಳೆ ಅಬ್ದುಲ್ ರಶೀದ್ ಟೈರನ್ನು ಬಸ್ಸಿನಿಂದ ಕೆಳಗಿಳಿಸಿ ಗಾಳಿ ತುಂಬಿಸಿದ್ದಾರೆ. ಗಾಳಿ ತುಂಬಿಸಿ ರಶೀದ್ ಅಲ್ಲಿಂದ ಎದ್ದೇಳುತ್ತಿದ್ದಂತೆ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಟೈರ್ ಸಿಡಿದ ರಭಸಕ್ಕೆ ರಶೀದ್ ಗಾಳಿಯಲ್ಲಿ ಹಾರಿ ಗಿರಕಿ ಹೊಡೆದು ಬಿದ್ದಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸ್ಫೋಟದ ತೀವ್ರತೆಗೆ ಟೈರ್ ಡ್ರಮ್ ಹಾರಿ ಬಸ್ಸಿನ ಮೇಲ್ಛಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
LATEST NEWS
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು
Published
1 hour agoon
23/12/2024By
NEWS DESK3ಮಂಗಳೂರು/ಜೈಪುರ್: ಒಲಿಂಪಿಕ್ ಪದಕ ವಿಜೇತೆ, ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ. ವಿ ಸಿಂಧು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಪೊಸಿಡೆಕ್ಸ್ ಟೆಕ್ನಾಲಜೀಸ್ ಕಾರ್ಯನಿರ್ವಾಕ ನಿರ್ದೇಶಕರಾದ ವೆಂಕಟ ದತ್ತಶೈಲ ಅವರೊಂದಿಗೆ ಸಾಂಪ್ರದಾಯಿಕ ರೀತಿಯಲ್ಲಿ ಅದ್ದೂರಿ ಸಮಾರಂಭವನ್ನು ನಡೆಸಿದರು.
ಡಿಸೆಂಬರ್ 22ರ ಭಾನುವಾರ ರಾತ್ರಿ 11 ಗಂಟೆ 20 ನಿಮಿಷಕ್ಕೆ ಸಿಂಧು ಮತ್ತು ಸಾಯಿ ಮದುವೆ ನಡೆದಿದೆ. ಕುಟುಂಬ ಸದಸ್ಯರು ಮತ್ತು ಹತ್ತಿರದ ಸ್ನೇಹಿತರು ಉಪಸ್ಥಿತರಿದ್ದರು. ಉದಯ ಸಾಗರದ ದ್ವೀಪವೊಂದರಲ್ಲಿ ಅದ್ದೂರಿ ತೆಲುಗು ಸಂಪ್ರದಾಯದಲ್ಲಿ ವಿವಾಹವಾದರು. ಈ ವಿವಾಹ ಸಮಾರಂಭದಲ್ಲಿ ಸುಮಾರು 140 ಅತಿಥಿಗಳು ಭಾಗವಹಿಸಿದ್ದರು.
ಇದನ್ನೂ ಓದಿ: ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ಮನೆ ಬಿಟ್ಟು ತೆರಳಿದ ಕುಟುಂಬ
ಮದುವೆಯ ಅತಿಥಿಗಳಿಗಾಗಿ ಸಿಂಧು ಸುಮಾರು 100 ಕೊಠಡಿಗಳನ್ನು ಬುಕ್ ಮಾಡಿದ್ದಾರೆ. ಇದಲ್ಲದೆ, ಮದುವೆಯಲ್ಲಿ ಭಾಗವಹಿಸಿದ ಅತಿಥಿಗಳಿಗೆ ವಿಶೇಷ ವಿಮಾನ ಟಿಕೆಟ್ ಗಳನ್ನು ಸಹ ಒದಗಿಸಲಾಗಿದೆ ಎಂದು ವರದಿಯಾಗಿದೆ. ಈ ವಿವಾಹ ಸಮಾರಂಭದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಐಪಿಎಲ್ ಆಡಳಿತ ಮಂಡಳಿ ಸದಸ್ಯ ಚಾಮುಂಡೇಶ್ವರನಾಥ್, ಉದ್ಯಮಿ ನಿಮ್ಮಗಡ್ಡ ಪ್ರಸಾದ್, ಖ್ಯಾತ ವೈದ್ಯ ಗುರುವಾರೆಡ್ಡಿ ಉಪಸ್ಥಿತರಿದ್ದರು.
ಇನ್ನು, ಸಿಂಧು ಮತ್ತು ಸಾಯಿ ವಿವಾಹದ ಆರತಕ್ಷತೆ ಹೈದರಾಬಾದ್ ನಲ್ಲಿ ಡಿಸೆಂಬರ್ 24 (ಮಂಗಳವಾರ) ರಾತ್ರಿ ನಡೆಯಲಿದೆ. ಈ ಆರತಕ್ಷತೆಗೆ ರಾಜಕೀಯ, ಚಿತ್ರರಂಗ ಹಾಗೂ ಕ್ರೀಡಾ ಗಣ್ಯರು ಆಗಮಿಸಲಿದ್ದಾರೆ.
LATEST NEWS
ಎನ್ಕೌಂಟರ್ನಲ್ಲಿ ಮೂವರು ಖಲಿಸ್ತಾನಿ ಭ*ಯೋತ್ಪಾದಕರ ಹ*ತ್ಯೆ
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು
ಖಾಸಗಿ ವಿಮಾನ ಪತನ; 10 ಜನ ಸಾವು, ಹಲವರಿಗೆ ಗಾಯ !
ಕಿಚ್ಚನಿಂದ ಚಪ್ಪಾಳೆ ಗಿಟ್ಟಿಸಿಕೊಂಡ ಬೆನ್ನಲ್ಲೇ ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ
ಏಕಾಏಕಿ ಗ್ಯಾ*ಸ್ ಸಿ*ಲಿಂಡರ್ ಸ್ಫೋ*ಟ; 9 ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂ*ಭೀರ
ಫ್ಲೋರಿಡಾ ಕ್ರಿಸ್ಮಸ್ ಶೋನಲ್ಲಿ ಜನಸಂದಣಿಗೆ ಡ್ರೋನ್ ಡಿಕ್ಕಿ: ಹಲವರಿಗೆ ಗಾಯ
Trending
- LATEST NEWS5 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್
- BIG BOSS3 days ago
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
- DAKSHINA KANNADA6 days ago
ಸಾವಿರ ಕಂಬದ ಬಸದಿಗೆ ಜಪಾನ್ನಿಂದ ಬಂದ ಅತಿಥಿಗಳು
- BIG BOSS3 days ago
ಬಿಗ್ಬಾಸ್ನಲ್ಲಿ ಶಾಕಿಂಗ್ ಟ್ವಿಸ್ಟ್; ಮನೆಯಿಂದ ಆಚೆ ಹೋಗಲು ಸ್ಟ್ರಾಂಗ್ ಸ್ಪರ್ಧಿಗಳು ನಾಮಿನೇಟ್