ಕರ್ನಾಟಕದ ಪಾಲಿಗೆ ಜೂನ್ 5.. ಬ್ಲ್ಯಾಕ್ ಫ್ರೈಡೇ.. ಒಂದೇ ದಿನ 515 ಕೊರೊನಾ ಪಾಸಿಟಿವ್ ಪತ್ತೆ..!
ರಾಜ್ಯದಲ್ಲಿ ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಕೊರೊನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 4,835ಕ್ಕೆ ಏರಿಕೆ..
ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ (ಜೂನ್ 5) ರಾಜ್ಯದ ಪಾಲಿಗೆ ಬ್ಲ್ಯಾಕ್ ಫ್ರೈಡೇ ಆಗಿ ಪರಿಣಮಿಸಿದೆ.
ಒಂದೇ ದಿನದಲ್ಲಿ 515 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದು ರಾಜ್ಯದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಈ ಮೂಲಕ ಸೋಂಕಿತರ ಸಂಖ್ಯೆ 4,835ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ನಿನ್ನೆ ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆಯವರೆಗೆ 515 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಉಡುಪಿ 204, ಯಾದಗಿರಿ 74, ವಿಜಯಪುರ 53, ಕಲಬುರಗಿ 42, ಬೀದರ್ 39, ಬೆಳಗಾವಿ 36, ಮಂಡ್ಯ 13,
ಬೆಂಗಳೂರು ನಗರ 10, ಬೆಂಗಳೂರು ಗ್ರಾಮಾಂತರ 12, ದಕ್ಷಿಣ ಕನ್ನಡ 8, ಉತ್ತರ ಕನ್ನಡ 7, ಹಾಸನ, ಚಿಕ್ಕಬಳ್ಳಾಪುರ, ಧಾರವಾಡ ಜಿಲ್ಲೆಯಲ್ಲಿ ತಲಾ 3,
ರಾಮನಗರ ಮತ್ತು ಹಾವೇರಿಯಲ್ಲಿ ತಲಾ 2, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಮತ್ತು ಕೋಲಾರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 4,835 ಕೊರೊನಾ ಸೋಂಕಿತರ ಪೈಕಿ 1,688 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ.
ಇದರಲ್ಲಿ ನಿನ್ನೆ ಒಂದೇ ದಿನ 83 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಉಳಿದಂತೆ ಇದುವರೆಗೆ 57 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,088 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.
LATEST NEWS
ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು
ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.
ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.