Saturday, May 21, 2022

ಕ್ಯಾಮರೂನ್  ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಟ್ರಕ್ -ಬಸ್ : 53 ಮಂದಿ ಸಾವು..!

ಕ್ಯಾಮರೂನ್  ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಟ್ರಕ್- ಬಸ್ : 53 ಮಂದಿ ಸಾವು..!

ಕ್ಯಾಮರೂನ್ : ಪಶ್ಚಿಮ ಕ್ಯಾಮರೂನ್‌ನ ಸ್ಯಾಂಚೌ ಗ್ರಾಮದಲ್ಲಿ  ನಡೆದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬದುಕುಳಿದವರನ್ನು ಪಶ್ಚಿಮ ಪಟ್ಟಣಗಳಾದ ಷ್ಚಾಂಗ್ ಮತ್ತು ಬಫೌಸಮ್‌ನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಕ್ಯಾಮರೂನ್‌ನ ಪಶ್ಚಿಮ ಪ್ರದೇಶದ ಗವರ್ನರ್ ಆವಾ ಫೋಂಕಾ ಅಗಸ್ಟೀನ್ ಖಚಿತಪಡಿಸಿದ್ದಾರೆ.

ಅಕ್ರಮವಾಗಿ ಇಂಧನವನ್ನು ಸಾಗಿಸುತ್ತಿದ್ದ ಲಾರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 53 ಮಂದಿ ಸಾವನ್ನಪ್ಪಿದ್ದಾರೆ ಮತ್ತು 21 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಲಾರಿ ಮತ್ತು ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿಯಲ್ಲಿದ್ದ ಇಂಧನದಿಂದ ಬೆಂಕಿ ಕಾಣಿಸಿಕೊಂಡು ಬಸ್ ಸುಟ್ಟು ಹೋಗಿದೆ.

ಅಪಘಾತದ ನಂತರ ಟ್ರಕ್ ಚಾಲಕ ತಪ್ಪಿಸಿಕೊಂಡಿದ್ದಾನೆ. ಅಪಘಾತದಲ್ಲಿ ಮೃತಪಟ್ಟವರ ಮೈತ ದೇಹಗಳು ಸಂಪೂರ್ಣವಾಗಿ ಸುಟ್ಟ ಕರಕಲಾಗಿರುವುದರಿಂದ ಶವಗಳನ್ನು ಪತ್ತೆ ಹಚ್ಚುವುದು ಕಷ್ಟ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕ್ಯಾಮರೂನ್‌ನಲ್ಲಿ ರಸ್ತೆ ಅಪಘಾತಗಳು ಸರ್ವೇಸಾಮಾನ್ಯ. ಅಜಾಗರೂಕ ಚಾಲಕರು ಮತ್ತು ವಾಹನಗಳ ಕಳಪೆ ಸ್ಥಿತಿಯನ್ನು ಸರ್ಕಾರ ದೂಷಿಸಿದರೆ, ಚಾಲಕರು ರಸ್ತೆಗಳ ಕೆಟ್ಟ ಪರಿಸ್ಥಿತಿಗಳನ್ನು ದೂಷಿಸುತ್ತಾರೆ.

ಕಳೆದ ಡಿಸೆಂಬರ್‌ನಲ್ಲಿ, ಪಶ್ಚಿಮ ಗ್ರಾಮವಾದ ಮೆಕೆನೆನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ 37 ಜನರು ಸಾವನ್ನಪ್ಪಿದರು ಮತ್ತು 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗೆ ಪೆಟ್ರೋಲ್ ಹಾಕಿ ಸುಟ್ಟ ಕಿಡಿಗೇಡಿಗಳು

ಬಂಟ್ವಾಳ: ದಾರಿ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಿನ್ನೆ ಸಜೀಪಮುನ್ನೂರಿನ ಮಿತ್ತಕಟ್ಟದಲ್ಲಿ ನಡೆದಿದೆ.ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ ವಾಹನ ಇದಾಗಿದ್ದು ಅವರು ಬುಧವಾರ...

ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ: ಸುಳ್ಳು ವದಂತಿ ನಂಬಬೇಡಿ ಎಂದ ಸಚಿವ ಕೋಟ

ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು...

ಬಂಟ್ವಾಳ: ಅಪ್ರಾಪ್ತೆಯ ಮೇಲೆ ಅತ್ಯಾಚಾರ-ಫೊಕ್ಸೋ ಪ್ರಕರಣ ದಾಖಲು

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗಂಡು ಮಗುವಿನ ಜನ್ಮ ನೀಡಲು ಕಾರಣನಾದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಕಿನ್ನಿಗೋಳಿ...