Saturday, October 1, 2022

ತೈವಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ-ಕಟ್ಟಡ, ಮನೆಗಳು ಧರಾಶಾಹಿ

ತೈವಾನ್: ತೈವಾನ್‌ನ ತೈಪೆ ಎಂಬಲ್ಲಿನ ಆಗ್ನೇಯ ಭಾಗದಲ್ಲಿ ಇಂದು 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ದ್ವೀಪ ದೇಶದಲ್ಲಿ ಸಂಭವಿಸಿದ ಭಾರೀ ಭೂಕಂಪ ಸುನಾಮಿ ಎಚ್ಚರಿಕೆಯನ್ನು ಹುಟ್ಟುಹಾಕಿದೆ ಎಂದು ವರದಿಗಳ ಮೂಲದಿಂದ ತಿಳಿದುಬಂದಿದೆ.


ಭೂಕಂಪದ ಕೇಂದ್ರಬಿಂದುವಿನಿಂದ ಸುಮಾರು 300 ಕಿ.ಮೀ ಆಳದಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಅಮೆರಿಕದ ಸುನಾಮಿ ಎಚ್ಚರಿಕಾ ಕೇಂದ್ರ ತಿಳಿಸಿದೆ.

ಅಮೆರಿಕದ ಭೂವೈಜ್ಞಾನಿಕ ಸಂಸ್ಥೆ ತೈವಾನ್‌ನಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪದಿಂದಾಗಿ ಕೆಲವೆಡೆ ಕಟ್ಟಡಗಳು ಕುಸಿತವಾಗಿರುವುದಾಗಿ ವರದಿಯಾಗಿದೆ.

ಪೂರ್ವ ಕರಾವಳಿ ಭಾಗದ ರೈಲ್ವೇ ನಿಲ್ದಾಣದಲ್ಲಿ ರೈಲೊಂದು ಹಳಿ ತಪ್ಪಿದ್ದಾಗಿ ತಿಳಿದುಬಂದಿದೆ. ಇಲ್ಲಿಯವರೆಗೆ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ತೈವಾನ್‌ನ ಭೂಕಂಪದ ಬಳಿಕ ಜಪಾನ್‌ನಲ್ಲಿ ಕೂಡಾ 1 ಮೀ. ಎತ್ತರದ ಸುನಾಮಿ ಅಲೆಗಳ ಬಗ್ಗೆ ಅಲ್ಲಿನ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ನೆಟ್ಟಾರು ಪತ್ನಿಗೆ ಒಲಿದು ಬಂತು ಸರ್ಕಾರಿ ಕೆಲಸ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ...

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 38 ಲಕ್ಷ ರೂ ಮೌಲ್ಯದ ಚಿನ್ನ ಪತ್ತೆ

ಮಂಗಳೂರು: ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮಸ್ಕತ್‌ನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರಿಂದ 752 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.ಭಟ್ಕಳ ಮೂಲದ...

ಎಲ್ಲಿಯಾದ್ರು SDPI ಕಚೇರಿ ಸೀಲ್ ಮಾಡಿದ್ರೆ ನನಗೆ ತಿಳಿಸಿ-ADGP ಅಲೋಕ್ ಕುಮಾರ್

ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್‌ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್‌ಡಿಪಿಐ...