Connect with us

LATEST NEWS

ಮನೆಗೆ ಬೆಂ*ಕಿ ಹೊ*ತ್ತಿ ಒಂದೇ ಕುಟುಂಬದ 6 ಸಾ*ವು, 4 ಗಾ*ಯ

Published

on

ಮಂಗಳೂರು/ಜಮ್ಮು ಕಾಶ್ಮೀರ: ಮನೆಯೊಂದರಲ್ಲಿ ಇಂದು ಬೆಳಗ್ಗೆ ಬೆಂ*ಕಿ ಹೊ*ತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾ*ವನ್ನಪ್ಪಿದ್ದು, ನಾಲ್ವರು ಗಾ*ಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಕಥುವಾದದಲ್ಲಿ ನಡೆದಿದೆ. ಇಬ್ಬರು ಮಕ್ಕಳು ಮನೆಗೆ ಬೆಂಕಿ ಹೊತ್ತಿಕೊಂಡಾಗ ಉ*ಸಿರುಗಟ್ಟಿ ಸಾ*ವನ್ನಪ್ಪಿದ್ದಾರೆ. ಗಾ*ಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿದ್ದವರು ಮಲಗಿದ್ದ ಸಂದರ್ಭದಲ್ಲಿ ಬೆಂ*ಕಿ ಹೊ*ತ್ತಿಕೊಂಡು ದ*ಟ್ಟ ಹೊ*ಗೆ ಆವರಿಸಿದೆ. ಬೆಳಗಿನ ಜಾವ 2.30ರ ಸುಮಾರಿಗೆ ಬೆಂ*ಕಿ ಹೊ*ತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಮನೆಗೆ ಧಾವಿಸಿದ್ದರು. ಸಂತ್ರಸ್ತರನ್ನು ಕಥುವಾದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಇಬ್ಬರು ಅ*ಪ್ರಾಪ್ತರು ಸೇರಿದಂತೆ ಆರು ಮಂದಿ ಸಾ*ವನ್ನಪ್ಪಿರುವುದು ಖಚಿತವಾಗಿತ್ತು

ಪ್ರಾಥಮಿಕ ತನಿಖೆ ಪ್ರಕಾರ ಹೊ*ಗೆಯನ್ನು ಸೇವಿಸಿದ ನಂತರ ಉ*ಸಿರುಗಟ್ಟುವಿಕೆಯಿಂದ ಸಂತ್ರಸ್ತರು ಸಾ*ವನ್ನಪ್ಪಿದ್ದಾರೆ, ಯಾವುದೇ ಸು*ಟ್ಟ ಗಾ*ಯಗಳು ವರದಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಸಾ*ವಿಗೆ ಉ*ಸಿರುಗಟ್ಟುವಿಕೆ ಕಾರಣ ಎಂದು ತೋರುತ್ತದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಮ*ರಣೋತ್ತರ ಪರೀಕ್ಷೆಯ ನಂತರ ಮೃ*ತದೇಹಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

LATEST NEWS

ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?

Published

on

ಮಂಗಳೂರು/ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಗೃಹ ಖಾತೆಯ ಜೊತೆಗೆ ಇಂಧನ, ಕಾನೂನು ಮತ್ತು ನ್ಯಾಯಾಂಗ, ಸಿಬ್ಬಂದಿ ಆಡಳಿತ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಖಾತೆಗಳನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ನಗರಾಭಿವೃದ್ದಿ, ವಸತಿ ಮತ್ತು ಲೋಕೋಪಯೋಗಿ ಖಾತೆಗಳು ಹಂಚಿಕೆಯಾಗಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಅಬಕಾರಿ ಖಾತೆ ಹಂಚಿಕೆಯಾಗಿವೆ.

ಇದನ್ನೂ ಓದಿ: ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!

ಉಳಿದಂತೆ ಉದಯ್ ಸಾಮಂತ್ ಅವರಿಗೆ ಕೈಗಾರಿಕೆ, ಪಂಕಜಾ ಮುಂಡೆ ಅವರಿಗೆ ಪರಿಸರ, ಮಾಣಿಕ್ರಾವ್ ಕೊಕಾಟೆ ಅವರಿಗೆ ಕೃಷಿ ಖಾತೆಗಳನ್ನು ನೀಡಲಾಗಿದೆ. ಧನಂಜಯ್ ಮುಂಡೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಅಶೋಕ್ ಅವರಿಗೆ ಬುಡಕಟ್ಟು ಅಭಿವೃದ್ದಿ, ಆಶಿಶ್ ಶೆಲಾರ್ ಅವರಿಗೆ ಐಟಿ ಮತ್ತು ಸಂಸ್ಕೃತಿ ಇಲಾಖೆಯ ಉಸ್ತುವಾರಿ ವಹಿಸಲಾಗಿದೆ.

ಇನ್ನೂ ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರುಗಳಾದ ರಾಧಾಕೃಷ್ಣ ವಿಖೆ ಪಾಟೇಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ.

ಡಿಸೆಂಬರ್ 5ರಂದು ಫಡ್ನವೀಸ್, ಏಕನಾಥ ಶಿಂಧೆ, ಅಜಿತ್ ಪವರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸೆಂಬರ್ 15 ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

 

Continue Reading

LATEST NEWS

ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!

Published

on

ಮಂಗಳೂರು/ಕೋಲ್ಕತಾ: ದೇಗುಲಗಳ ಮೇಲೆ, ಹಿಂದೂಗಳ ಮೇಲೆ ಅಲ್ಲಿನ ಮ*ತಾಂಧರು ದಾಳಿ ನಡೆಸುತ್ತಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದು, ಇದೀಗ ನಿಷೇಧಿತ ಉ*ಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹ*ತ್ಯೆ ಮತ್ತು ರಸ್ತೆ ಕಾರಿಡಾರ್‌ ಸ್ಫೋ*ಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸುತ್ತಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಕಳೆದ ಕೆಲ ಹಿಂದೆ ಪಶ್ಚಿಮ ಬಂಗಾಳ, ಕೇರಳ ಮತ್ತು ಅಸ್ಸಾಂನಲ್ಲಿ ಬಾಂಗ್ಲಾದೇಶ ಮೂಲದ ಅನ್ಸರ್‌ ಅಲ್‌ ಇಸ್ಲಾಂ ಸಂಘಟನೆಗೆ ಸೇರಿದ 8 ಶಂಕಿತ ಉ*ಗ್ರರನ್ನು ಬಂಧಿಸಲಾಗಿತ್ತು. ಈಶಾನ್ಯ ರಾಜ್ಯಗಳಲ್ಲಿನ ಪ್ರಮುಖ ಹಿಂದೂ ನಾಯಕರ ಹ*ತ್ಯೆಯ ಉದ್ದೇಶವನ್ನು ಉ*ಗ್ರರು ಹೊಂದಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳದ ಸಿಲಿಗುರಿಗೆ ಈಶಾನ್ಯ ರಾಜ್ಯಗಳ ನಂಟು ಬೆಸೆಯುವ ‘ಚಿಕನ್‌ ನೆಕ್‌’ ಎಂದು ಕರೆಯಲಾಗುವ ಸಿಲಿಗುರಿ ಕಾರಿಡಾರ್‌ ರಸ್ತೆ ಸ್ಫೋ*ಟಗೊಳಿಸುವ ಮೂಲಕ ಇಡೀ ಪ್ರದೇಶದಲ್ಲಿ ಅ*ಸ್ಥಿರತೆ ಸೃಷ್ಟಿಸಲು ಯತ್ನಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದು ಈಶಾನ್ಯ ರಾಜ್ಯಗಳಿಗೆ ಭಾರತವನ್ನು ಬೆಸೆಯುವ ಏಕೈಕ ರಸ್ತೆ ಮಾರ್ಗವಾಗಿದೆ.

ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವಧಿಯಲ್ಲಿ ನಡೆದಿದ್ದ ಬಾಂಗ್ಲಾ ಪ್ರಜೆಗಳ ಬಲವಂತದ ನಾ*ಪತ್ತೆ ಹಿಂದೆ ಭಾರತದ ಕೈವಾಡವಿದೆ ಎಂದು ಬಾಂಗ್ಲಾದ ಮಧ್ಯಂತರ ಸರ್ಕಾರ ರಚಿಸಿರುವ ಸಮಿತಿಯ ವರದಿ ಹೇಳಿದೆ. ಬಾಂಗ್ಲಾದ ಸುದ್ದಿ ಸಂಸ್ಥೆ, ಸಂಗ್ಬಾದ್ ಸಂಸ್ಥೆಯು ಬಲವಂತದ ನಾ*ಪತ್ತೆಯ ಕುರಿತಾದ ತನಿಖಾ ವರದಿಯನ್ನು ಉಲ್ಲೇಖಿಸಿ ವರದಿ ನೀಡಿದ್ದು, ‘ಬಾಂಗ್ಲಾದೇಶದ ಬಲವಂತದ ನಾ*ಪತ್ತೆ ಪ್ರಕರಣಗಳಲ್ಲಿ ಭಾರತೀಯರ ಪಾಲ್ಗೊಳ್ಳುವಿಕೆ ಸಾರ್ವಜನಿಕ ದಾಖಲೆಯ ವಿಷಯವಾಗಿದೆ. ಭಾರತದಲ್ಲಿ ಇನ್ನೂ ಬಂಧಿಯಾಗಿರುವ ಯಾವುದೇ ಬಾಂಗ್ಲಾದೇಶದ ನಾಯಕರನ್ನು ಗುರುತಿಸಲು ತಮ್ಮ ಪ್ರಯತ್ನಗಳನ್ನು ವಿಸ್ತರಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳಿಗೆ ಶಿಫಾರಸ್ಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಈ ಜಾಡು ಅನುಸರಿಸುವುದು ನ್ಯಾಯದ ವ್ಯಾಪ್ತಿಯನ್ನು ಮೀರುತ್ತದೆ’ ಎಂದು ತನಿಖಾ ಆಯೋಗದ ವರದಿ ಉಲ್ಲೇಖಿಸಿದೆ.

Continue Reading

International news

ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ

Published

on

ಮಂಗಳೂರು/ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ನಿವೃತ್ತಿಯಾಗುವುದಕ್ಕೂ ಮುನ್ನ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಬೆಚ್ಚಿಬಿದ್ದ ಕಜಾನ್ ಜನತೆ !

4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.

Continue Reading

LATEST NEWS

Trending

Exit mobile version