Saturday, November 26, 2022

ಇಸ್ತಾನ್‌ಬುಲ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಆರು ಸಾವು, 17 ಕ್ಕೂ ಹೆಚ್ಚು ಜನ ಗಂಭೀರ ಗಾಯ..!

ಇಸ್ತಾಂಬುಲ್ : ಟರ್ಕಿಯ ರಾಜಧಾನಿ ಇಸ್ತಾನ್‌ಬುಲ್‌(istanbul) ನಲ್ಲಿ ಭಾರಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಇಸ್ತಾನ್‌ಬುಲ್‌(istanbul) ನ ಮಧ್ಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಭಾರಿ ಭಾರಿ ಸ್ಫೋಟ ಸಂಭವಿಸಿದೆ, ವರದಿಗಳ ಪ್ರಕಾರ, ಈ ಸ್ಫೋಟದಲ್ಲಿ ಕನಿಷ್ಠ ಆರು ಜನಸಾವನ್ನಪ್ಪಿದ್ದಾರೆ.

ಹಾಗೆ, 11 ಮಂದಿ ಗಾಯಗೊಂಡಿದ್ದಾರೆ. ಸ್ಪೋಟವು ಇಂದು ಸಂಜೆ 4:00 ಗಂಟೆಗೆ ಸಂಭವಿಸಿದೆ.

ಸದ್ಯದ ಮಾಹಿತಿ ಪ್ರಕಾರ, ಮಹಿಳಾ ದಾಳಿಕೋರರು ಈ ಬಾಂಬ್ ದಾಳಿಯನ್ನು ನಡೆಸಿದ್ದಾರೆ.

ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ಮಹಿಳಾ ಭಯೋತ್ಪಾದಕರು ಶಾಪಿಂಗ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಿಸಿರುವ ಶಂಕೆ ಇದೆ ಎಂದು ಹೇಳಿದ್ದಾರೆ.

ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಗಳು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.

ಮಹಿಳೆಯೊಬ್ಬರು ಸುಮಾರು 40 ನಿಮಿಷಗಳ ಕಾಲ ಬೆಂಚ್ ಮೇಲೆ ಕುಳಿತಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಆಕೆ ಈ ಬಾಂಬ್ ಸ್ಫೋಟ ನಡೆಯುವುದಕ್ಕೂ ಕೆಲವೇ ನಿಮಿಷಗಳ ಮೊದಲು ಆ ಜಾಗದಿಂದ ಹೊರಟುಹೋಗಿದ್ದಾರೆ.

ಇಬ್ಬರು ಪುರುಷ ದಾಳಿಕೋರರು ಸಹ ಆ ಮಹಿಳೆಯೊಂದಿಗೆ ಸೇರಿ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

ಇಸ್ತಾನ್‌ಬುಲ್‌ (istanbul) ನಲ್ಲಿ ನಡೆದ ಸ್ಫೋಟದಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಸರ್ಕಾರಿ ಅಧಿಕಾರಿ ಮತ್ತು ಅವರ ಚಿಕ್ಕ ಮಗಳು ಕೂಡ ಸೇರಿದ್ದಾರೆ.

ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿಗಳು ಪ್ಯಾರಿಸ್ ಕೆಫೆಯಲ್ಲಿ 130 ಜನರ ಮೇಲೆ ಗುಂಡು ಹಾರಿಸಿ ಕೊಂದ 7 ವರ್ಷಗಳ ನಂತರ ಈ ಭಯೋತ್ಪಾದಕ ದಾಳಿ ನಡೆದಿದೆ.

LEAVE A REPLY

Please enter your comment!
Please enter your name here

Hot Topics

ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಉಡುಪಿ ಶಾಸಕ ರಘುಪತಿ ಭಟ್ ತೀವ್ರ ವಿರೋಧ..!

ಸುರತ್ಕಲ್‌ನಲ್ಲಿ ಕಾರ್ಯಾಚರಿಸುತಿದ್ದ ಟೋಲ್‌ಗೇಟ್‌ನ್ನು ಮುಚ್ಚಿ ಅದನ್ನು ಹೆಜಮಾಡಿ ಟೋಲ್‌ಗೆ ವಿಲೀನಗೊಳಿಸಿ ಟೋಲ್ ಶುಲ್ಕ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ತೀವ್ರವಾಗಿ ವಿರೋಧಿಸಿದ್ದಾರೆ.ಉಡುಪಿ : ಸುರತ್ಕಲ್‌ನಲ್ಲಿ...

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...