Home ಪುತ್ತೂರು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು: 6 ತಿಂಗಳ ಬಳಿಕ ಪೊಲೀಸರ ವಶಕ್ಕೆ

ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು: 6 ತಿಂಗಳ ಬಳಿಕ ಪೊಲೀಸರ ವಶಕ್ಕೆ

ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು: 6 ತಿಂಗಳ ಬಳಿಕ ಪೊಲೀಸರ ವಶಕ್ಕೆ 

ಕಡಬ: ಆರು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರೊಂದನ್ನ ಕಡಬ ಪೊಲೀಸರು ಪತ್ತೆಹಚ್ಚಿದ್ದಾರೆ.

 

ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಎಂಬವರಿಗೆ ಸೇರಿದ ಕಾರು ಇದಾಗಿದೆ ಎಂದು ಕಡಬ ಪೊಲೀಸರು ತಿಳಿಸಿದ್ದಾರೆ. ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಬಗ್ಗೆ ಸಿ.ಸಿ ಕ್ಯಾಮರಾ ದೃಶ್ಯಗಳನ್ನು ಆಧಾರಿಸಿ ಪತ್ತೆಹಚ್ಚಲಾಗಿದೆ. 2019 ರ ಸೆಪ್ಟೆಂಬರ್ 9 ರಂದು ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಮಹಿಳೆಗೆ ಡಿಕ್ಕಿ ಹೊಡೆದು ಕಾರು ಪರಾರಿಯಾಗಿತ್ತು.ತೀವ್ರವಾಗಿ ಗಾಯಗೊಂಡ ಮಹಿಳೆ, 48 ರ ಹರೆಯದ ಸುಮತಿ ಮೃತಪಟ್ಟಿದ್ದರು.ಇದೀಗ ಆರು ತಿಂಗಳುಗಳ ನಂತರ ವಾಹನವನ್ನು ಪೋಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡಬ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!