Connect with us

LATEST NEWS

ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 6 ನಕ್ಸಲರು ಶರಣಾಗತಿ

Published

on

ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲು ನಿರ್ಧರಿಸಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ.

ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಇಂದು ಸಂಜೆ 6 ಗಂಟೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಕ್ಸಲರು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾಗತಿ ಆಗಲಿದ್ದಾರೆ ಎಂದು ತಿಳಿಸಿದೆ.

ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ರಾಜ್ಯ ಸರ್ಕಾರದಿಂದ ಶರಣಾಗುತ್ತಿರುವಂತ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಮೂರು ಕೆಟಗರಿಯಲ್ಲಿ ಪ್ಯಾಕೇಜ್ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

  • ಕೆಟಗರಿ ಎ ವರ್ಗದಡಿ ನಮ್ಮ ರಾಜ್ಯದವರೇ ಆಗಿದ್ದು, ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ, ಕೇಸ್ ಇದ್ದು ಶರಣಾಗುತ್ತಿರುವವರಿಗೆ 7.50 ಲಕ್ಷ ಹಣ ನೀಡುತ್ತಿದೆ.
  • ಕೆಟಗರಿ ಬಿ ವರ್ಗದಡಿ ಹೊರ ರಾಜ್ಯದ ನಕ್ಸಲರಿಗೆ ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೇ 4 ಲಕ್ಷ ಪ್ಯಾಕೇಜ್ ನೀಡುವುದಾಗಿ ತಿಳಿಸಿದೆ.
  • ಕೆಟಗರಿ ಸಿ ವರ್ಗದಡಿ ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದು, ಪ್ರಕರಣಗಳು ಇದ್ದರೂ 2 ಲಕ್ಷ ಹಣವನ್ನು ಪ್ಯಾಕೇಜ್ ನಡಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಯಾರೆಲ್ಲ ನಕ್ಸಲರು ಶರಣಾಗತಿ?

  1. ಬಾಳೆಹೊಳೆ ಕಳಸದ ವನಜಾಕ್ಷಿ
  2. ಮುಂಡಗಾರು ಶೃಂಗೇರಿಯ ಲತಾ
  3. ದಕ್ಷಿಣ ಕನ್ನಡದ ಕುಂತಲೂರಿನ ಸುಂದರಿ
  4. ರಾಯಚೂರಿನ ಮಾರಪ್ಪೆ ಅರೋಳಿ
  5. ತಮಿಳುನಾಡಿನ ವಸಂತ ಟಿ
  6. ಕೇರಳದ ಎನ್.ಜೀಶಾ

BANTWAL

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

Published

on

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

Continue Reading

LATEST NEWS

ತಿರುಪತಿ ಕಾಲ್ತುಳಿತದಲ್ಲಿ ಜೀವ ಬಿಟ್ಟ ಕರ್ನಾಟಕದ ಓರ್ವ ಮಹಿಳೆ

Published

on

ಹೈದರಾಬಾದ್: ತಿರುಪತಿಯ ವೈಕುಂಠ ದ್ವಾರದ ದರ್ಶನದ ಟೋಕನ್ ವಿತರಣೆ ವೇಳೆ ಕಾಲ್ತುಳಿತ ಸಂಭವಿಸಿದ್ದು 7 ಭಕ್ತರು ಕೊನೆಯುಸಿರುಳೆದಿದ್ದಾರೆ. ಇದರಲ್ಲಿ ಕರ್ನಾಟಕದ ಬಳ್ಳಾರಿಯ ಓರ್ವ ಮಹಿಳೆ ಕೂಡ ಪ್ರಾಣ ಕೆಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಿರುಪತಿಯಲ್ಲಿ ಟೋಕನ್ ವಿತರಣೆ ವೇಳೆ ಕಾಲ್ತುಳಿತ ಸಂಭವಿಸಿ 7 ಭಕ್ತರು ಜೀವ ಕಳೆದುಕೊಂಡಿದ್ದಾರೆ. ಸದ್ಯ ಇವರ ಊರು ಯಾವುದು ಎಂದು ಅಲ್ಲಿನ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕರ್ನಾಟಕದ ಬಳ್ಳಾರಿ ಜಿಲ್ಲೆಗೆ ಸೇರಿದ ನಿರ್ಮಲ (50) ಎನ್ನುವರು ಕಾಲ್ತುಳಿದಲ್ಲಿ ಕಣ್ಮುಚ್ಚಿದ್ದಾರೆ. ಉಳಿದಂತೆ ನರ್ಸಿಪಟ್ಟಣಂನ ಬುದ್ಧೇಟಿ ನಾಯುಡುಬಾಬು (51), ರಜನಿ (47) ಲಾವಣ್ಯ (40) ಹಾಗೂ ಶಾಂತಿ (34) ಈ ಮೂವರು ವಿಶಾಖಪಟ್ಟಣಂ ಜಿಲ್ಲೆಯವರು ಆಗಿದ್ದಾರೆ. ಮಲ್ಲಿಗಾ (49) ಇವರು ತಮಿಳುನಾಡಿನ ಸೇಲಂ ಜಿಲ್ಲೆಯವರು ಎಂದು ತಿಳಿಸಲಾಗಿದೆ.

ನಿರ್ಮಲ ಅವರು ಬಳ್ಳಾರಿಯವರು ಎಂದು ಆಕೆಯ ಜೊತೆ ಬಂದಿದ್ದ ಸಹ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಟಿಕೆಟ್ ವಿತರಣೆ ವೇಳೆ ಕಾಲ್ತುಳಿತದಲ್ಲಿ 6 ಭಕ್ತರು ಪ್ರಾಣ ಬಿಟ್ಟಿದ್ದು ಅಲ್ಲದೇ 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಡಾಕ್ಟರ್ಸ್ ಹೇಳಿದ್ದಾರೆ.

Continue Reading

DAKSHINA KANNADA

ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳ ದಾಳಿ

Published

on

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ 9 ದೋಣಿಗಳನ್ನು ವಶಪಡಿಸಿದ್ದಾರೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಬ್ಲಮೊಗರು ಸಮೀಪ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಸ್ಥಳದಲ್ಲಿದ್ದ ಸುಮಾರು 13.5 ಲಕ್ಷ ರೂಪಾಯಿ ಮೌಲ್ಯದ 9 ಬೋಟು, 2 ಯಂತ್ರ, 3 ಗ್ಯಾಸ್ ಸಿಲಿಂಡರ್, 13 ಪ್ಲಾಸ್ಟಿಕ್‌ ಬಕೆಟ್ ಗಳನ್ನು ವಶಪಡಿಸಲಾಯಿತು.

ಇದನ್ನೂ ಓದಿ: ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್, ಸಿಬ್ಬಂದಿಗಳು ಇದ್ದರು.

Continue Reading

LATEST NEWS

Trending

Exit mobile version