DAKSHINA KANNADA
ಮೊಬೈಲ್ ನೋಡುತ್ತಿದ್ದಾಗ 16 ವರ್ಷದ ಬಾಲಕ ದಿಢೀರ್ ಸಾ*ವು; ವೈದ್ಯರಿಂದ ಶಾಕಿಂಗ್ ರಿಪೋರ್ಟ್; ಆಗಿದ್ದೇನು?
Published
7 months agoon
By
NEWS DESK2ಸಾ*ವು ಹೇಗೆ, ಎಲ್ಲಿ ಬೇಕಾದರೂ ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. 16 ವರ್ಷದ ಬಾಲಕ ಮೊಬೈಲ್ ಫೋನ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಈ ದುರಂತ ನಡೆದಿದೆ.
16 ವರ್ಷದ ಅಮನ್ ಖುರೇಷಿ ಮೃ*ತ ದುರ್ದೈವಿ. ಖುರೇಷಿ ಮೊಬೈಲ್ ಫೋನ್ ನೋಡುತ್ತಿದ್ದಾಗ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಮನ್ ಖುರೇಷಿ ಆಸ್ಪತ್ರೆ ತಲುಪುವಷ್ಟರಲ್ಲೇ ಪ್ರಾ*ಣ ಕಳೆದುಕೊಂಡಿದ್ದಾರೆ.
ಅಮನ್ ಖುರೇಷಿ ಸಾ*ವನ್ನಪ್ಪಿದ್ದನ್ನು ವೈದ್ಯರು ಖಚಿತ ಪಡಿಸಿದ್ದು, ಹಾರ್ಟ್ ಅಟ್ಯಾಕ್‌ನಿಂದ ಪ್ರಾ*ಣ ಬಿಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃ*ತಪಟ್ಟ ಬಾಲಕ ಮೊಬೈಲ್ ಫೋನ್‌ನಲ್ಲಿ ವಿಡಿಯೋ ನೋಡುತ್ತಿದ್ದಾಗ ಈ ದುರಂತ ನಡೆದಿದೆ.
ಇತ್ತೀಚೆಗೆ ದೇಶಾದ್ಯಾಂತ ಹೃದಯಾಘಾತಕ್ಕೆ ಸಾ*ವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹದಿ ಹರಿಯದ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರೋದು ನಿಜಕ್ಕೂ ಶಾಕಿಂಗ್ ಘಟನೆಯಾಗಿದೆ.
ಹೃದಯಾಘಾತವು ವ್ಯಕ್ತಿಯ ಮಾನಸಿಕ ಒತ್ತಡ ಮತ್ತು ದೈಹಿಕ ಪರಿಶ್ರಮದಿಂದ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ದೈನಂದಿನ ಕೆಲಸಗಳಲ್ಲಿ ಒತ್ತಡ ಹೆಚ್ಚಾಗುವುದರಿಂದ ಹೃದಯದ ಮೇಲೆ ಒತ್ತಡವೂ ಹೆಚ್ಚಾಗುತ್ತದೆ.
ಪ್ರಮುಖವಾಗಿ ನಮ್ಮ ದಿನನಿತ್ಯದ ಜೀವನಶೈಲಿ ಹಾಗೂ ಆಹಾರ ಕ್ರಮಗಳು ಸಣ್ಣ ವಯಸ್ಸಿನವರಿಂದ ವಯಸ್ಸಾದವರಿಗೂ ಹೃದಯಾಘಾತ ಆಗಲು ಕಾರಣವಾಗಿದೆ. ನ್ಯುಮೋನಿಯದಂತಹ ತೀವ್ರ ಸೋಂಕು ಹೃದಯ ಸ್ನಾಯುವಿನ ಊತಕವೂ ಸಾ*ವನ್ನು ಉಂಟು ಮಾಡಬಹುದು. ರಕ್ತನಾಳದಲ್ಲಿ ಬೇಗ ರಕ್ತು ಹೆಪ್ಪುಗಟ್ಟುವುದನ್ನು ತಡೆದರೆ ಹೃದಯಾಘಾತದಿಂದ ಪಾರಾಗಬಹುದು.
BIG BOSS
ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Published
12 hours agoon
23/11/2024ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.
‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು
DAKSHINA KANNADA
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Published
14 hours agoon
23/11/2024By
NEWS DESK3ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.
ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.
BIG BOSS
ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ
Published
15 hours agoon
23/11/2024ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.
ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
LATEST NEWS
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು
ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ
ಜಾರ್ಖಂಡ್ನಲ್ಲಿ ಬಿಗ್ ಟ್ವಿಸ್ಟ್; ಜೆಎಂಎಂ ಮುನ್ನಡೆ – ಎನ್ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru2 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION3 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!