Tuesday, August 16, 2022

6 ವರ್ಷ ಕಾಂಗ್ರೆಸ್‌ನಿಂದ ಸಲೀಂ ಉಚ್ಛಾಟನೆ: ಉಗ್ರಪ್ಪಗೆ ಶೋಕಾಸ್‌ ನೋಟಿಸ್‌

ಬೆಂಗಳೂರು: ನಿನ್ನೆ ಸುದ್ದಿಗೋಷ್ಠಿಗೆ ಮುನ್ನ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೆಪಿಸಿಸಿ ಮಾಧ್ಯಮ‌ ಸಮನ್ವಯಕಾರ ಸಲೀಂ ಅವರನ್ನ ಉಚ್ಚಾಟಿಸಲಾಗಿದೆ.


ಈ ಸಂಬಂಧ ಪ್ರದೇಶ ಕಾಂಗ್ರೆಸ್ ಸಮಿತಿ ಅಧಿಕೃತ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಂಭಾಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷ ತ್ವರಿತವಾಗಿ ಈ ತೀರ್ಮಾನ ಕೈಗೊಂಡಿದೆ.

ತಕ್ಷಣಕ್ಕೆ ಜಾರಿಗೆ ಬರುವಂತೆ ಆರು ವರ್ಷ ಅವಧಿಗೆ ಉಚ್ಚಾಟಿಸಿ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಕೆ.ರಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.


ಸುದ್ದಿಗೋಷ್ಠಿ ಸಂದರ್ಭ ಸಲೀಂ ಹಾಗೂ ಉಗ್ರಪ್ಪ ನಡುವೆ ನಡೆದ ಸಂಭಾಷಣೆಯ ತನಿಖೆ ನಡೆಸಲು ಪಕ್ಷ ತೀರ್ಮಾನಿಸಿದೆ.

ಪ್ರಾಥಮಿಕ ಸದಸ್ಯತ್ವದಿಂದ ಪ್ರಸ್ತುತ ಉಚ್ಚಾಟಿಸಲಾಗಿದ್ದು, ಸಂಭಾಷಣೆ ವಿಚಾರವಾಗಿ ಸಮಗ್ರ ತನಿಖೆ ನಡೆದ ಬಳಿಕ ಪಕ್ಷ ಮುಂದಿನ ತೀರ್ಮಾನ ಕೈಗೊಳ್ಳಲಿದೆ.
ಕಾಂಗ್ರೆಸ್ ಶಿಸ್ತು ಸಮಿತಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪಗೆ ಶೋಕಾಸ್​ ನೋಟಿಸ್ ನೀಡಿದ್ದು ಮೂರು ದಿನಗಳ ಒಳಗೆ ಸ್ಪಷ್ಟೀಕರಣ ನೀಡುವಂತೆ ತಿಳಿಸಿದೆ.

ಡಿಕೆಶಿ ಬಗ್ಗೆ ಮಾತನಾಡಿದ ಸಲೀಂಗೆ ಗೇಟ್‌ ಪಾಸ್‌, ಉಗ್ರಪ್ಪಗೆ ನೋಟೀಸ್‌-ಯತ್ನಾಳ್‌, ವಿಶ್ವನಾಥ್‌ ಬಗ್ಗೆ ಬಿಜೆಪಿ ಕ್ರಮ ಯಾವಾಗ ಎಂದ ಕಾಂಗ್ರೆಸ್‌

 

LEAVE A REPLY

Please enter your comment!
Please enter your name here

Hot Topics

“ಇಂದು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಧ್ವಜವನ್ನು ಸುರಕ್ಷಿತವಾಗಿ ಮಡಚಿಡಿ”

ಮಂಗಳೂರು: ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ತ್ರಿವರ್ಣ ಧ್ವಜವನ್ನು ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.ಈ ಬಗ್ಗೆ...

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕ ಕುಸಿದು ಬಿದ್ದು ಸಾವು

ಕಡಬ: ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು...

ಮಂಗಳೂರು ಏರ್‌ಪೋರ್ಟ್‌ನ ವಿಮಾನದಲ್ಲಿ ಬಾಂಬೆ “ಬಾಂಬ್‌”….!

ಮಂಗಳೂರು: ಮಂಗಳೂರಿನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರು ಬಂದು ಕುಳಿತಿದ್ದರು. ಇನ್ನೇನು ಟೇಕ್‌ಆಫ್‌ ಆಗಲು ರನ್‌ವೇ ಕಡೆ ವಿಮಾನ ಹೊರಡುತ್ತಿದ್ದಂತೆ ವಿಮಾನದ ಸಿಬ್ಬಂದಿಯನ್ನು ಕರೆದು "ವಿಮಾನದಲ್ಲಿ ಬಾಂಬ್‌ ಇಡಲಾಗಿದೆ" ಎಂಬ ಮಾಹಿತಿಯನ್ನು...