Connect with us

    LATEST NEWS

    60ರ ಹರೆಯದ ಈ ಅಜ್ಜ ವಿದ್ಯುತ್ ಕಂಬವೇರಿದ್ದಾದರೂ ಏಕೆ ;ವಿಷಯ ತಿಳಿದ್ರೆ ನೀವೇ ಬೆಚ್ಚಿ ಬೀಳ್ತೀರಿ..!

    Published

    on

    60ರ ಹರೆಯದ ಈ ಅಜ್ಜ ವಿದ್ಯುತ್ ಕಂಬವೇರಿದ್ದಾದರೂ ಏಕೆ ;ವಿಷಯ ತಿಳಿದ್ರೆ ನೀವೇ ಬೆಚ್ಚಿ ಬೀಳ್ತೀರಿ..!

    ಜೈಪುರ:60ರ ಇಳಿವಯಸ್ಸಿನ ವ್ಯಕ್ತಿಯೋರ್ವ ವಿದ್ಯುತ್ ಕಂಬವೇರಿ ತನಗೆ ಮದುವೆ ಮಾಡಿಸಿ ಎಂದು ಹಠ ಮಾಡಿದ ಘಟನೆ ರಾಜಸ್ಥಾನದ ದೋಲ್ಪುರ ಜಿಲ್ಲೆಯಲ್ಲಿ ನಡೆದಿದೆ.

    ಸೊಬ್ರಾನ್ ಸಿಂಗ್ ಎಂಬಾತನೇ ಹಠ ಹಿಡಿದ ವ್ಯಕ್ತಿಯಾಗಿದ್ದಾನೆ. ಈತನ ಪತ್ನಿ ನಾಲ್ಕು ವರ್ಷಗಳ ಹಿಂದೆ ಅಸು ನೀಗಿದ್ದಾಳೆ. ಈತನಿಗೆ ಮೂವರು ಗಂಡುಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.  ಎಲ್ಲ ಮಕ್ಕಳಿಗೂ ಮದುವೆಯಾಗಿದ್ದು ಮೊಮ್ಮಕ್ಕಳೂ ಇದ್ದಾರೆ.  ಇವರೊಂದಿಗೆ ನೆಮ್ಮದಿಯಾಗಿದ್ದ ಸೊಬ್ರಾನ್ ಸಿಂಗ್ ಗೆ ಇದೀಗ ಎರಡನೇ ಮದುವೆಯ ತುಡಿತ ಹೆಚ್ಚಾಗಿದೆ. ಈ ಬಗ್ಗೆ ತನ್ನ ಮಕ್ಕಳಲ್ಲಿ ಹೇಳಿಕೊಂಡಿದ್ದಾರೆ.  ಆದರೆ ಮಕ್ಕಳು ಇದನ್ನು ವಿರೋಧಿಸಿ, ಈ ವಿಷಯದಲ್ಲಿ ಜಗಳವಾಗಿದೆ.  ಎರಡನೇ ಮದುವೆ ಆಗಲೇ ಬೇಕೆಂದು ಪಟ್ಟು ಹಿಡಿದರೂ ಮಕ್ಕಳು ಖಡಾಖಂಡಿತವಾಗಿ ಸಾಧ್ಯವಿಲ್ಲ ಎಂದಿದ್ದಾರೆ.ಸೊಬ್ರಾನ್ ಇದೇ ಸಿಟ್ಟಿನಿಂದ ಮನೆಯಿಂದ ಹೊರನಡೆದು ಹಳ್ಳಿಯಲ್ಲಿದ್ದ 11ಸಾವಿರ ವೋಲ್ಟೇಚ್ ಇಲೆಕ್ಟ್ರಿಕ್ ಕಂಬವನ್ನು ಹತ್ತಿ ಕುಳಿತಿದ್ದಾನ. ಅದೃಷ್ಟವಶಾತ್ ಈತ ವಿದ್ಯುತ್ ಕಂಬ ಹತ್ತಿದ್ದ ಸಂದರ್ಭ ವಿದ್ಯುತ್ ಇದ್ದಿಲ್ಲದ ಕಾರಣ ಯಾವುದೇ ಸಮಸ್ಯೆಯಾಗಿಲ್ಲ.

    ವಿಚಾರ ತಿಳಿದ ಗ್ರಾಮಸ್ಥರು ಹತ್ತಿರದ ವಿದ್ಯುತ್ ಕಛೇರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಳಿಸಿದ್ದಾರೆ.

    ಸ್ಥಳೀಯರು ಹಾಗೂ ಮನೆಯವರು ಸಾಕಷ್ಟು ತಿಳಿ ಹೇಳಿದ ಬಳಿಕ ಸೊಬ್ರಾನ್ ವಿದ್ಯುತ್ ಕಂಬದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ.

    BELTHANGADY

    ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ

    Published

    on

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 12ನೇ ವರ್ಷದ ಪಾದಯಾತ್ರೆ ನ.26ರಂದು ಜರುಗಿತು. ತಾಲೂಕಿನ 81 ಗ್ರಾಮಗಳಿಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು.

    ಉಜಿರೆ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ ಶ್ರೀ ಭಗವಾನ್ ಶಿರಡಿಸಾಯಿ ಸತ್ಯಸಾಯಿ ಸೇವಾ ಕ್ಷೇತ್ರ ಹಳಕೋಟೆ ಬೆಳ್ತಂಗಡಿ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಉಜಿರೆ ದೇವಸ್ಥಾನದ ಧ್ವಜಸ್ತಂಭದ ಬಳಿ ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಪುಜ್ವಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.

    ಶ್ರೀ ಮಂಜುನಾಥ ಸ್ವಾಮಿಯ ಭಾವಚಿತ್ರವುಳ್ಳ ಟ್ಯಾಬ್, ವಿವಿಧ ಯಕ್ಷಗಾನ ವೇಷ ಭೂಷಣಗಳು, ಭಜನಾ ತಂಡಗಳು, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು, ವಿಪತ್ತು ನಿರ್ವಹಣಾ ತಂಡ, ವಿವಿಧ ಸಂಘ ಸಂಸ್ಥೆಯವರು ಪಾದಯಾತ್ರೆಯಲ್ಲಿ ಶಿಸ್ತಿನಿಂದ ಭಾಗವಹಿಸಿದರು. ಚೆಂಡೆ, ವಾದ್ಯ, ಸಮವಸ್ತ್ರಧಾರಿ ಭಕ್ತರು, ಯಕ್ಷಗಾನ ವೇಷಧಾರಿಗಳು, ಭಜನಾ ತಂಡಗಳ ಕುಣಿತ ಭಜನೆ ಪಾದಯಾತ್ರೆಯಲ್ಲಿ ವಿಶೇಷ ಆಕರ್ಷಣೆಯಾಗಿತ್ತು.

    ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್‌, ಜನಜಾಗೃತಿ ವೇದಿಕೆ ಸ್ಮಾಪಕಾಧ್ಯಕ್ಷ ವಸಂತ ಸಾಲ್ಯಾನ್, ಯು.ಸಿ ಪೌಲೋಸ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ನಿಕಟಪೂರ್ವ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಉಜಿರ ಲಕ್ಷ್ಮೀ ಗ್ರೂಪ್ ಮಾಲಕ ಮೋಹನ್ ಕುಮಾರ್, ಲಯನ್ಸ್ ಕ್ಲಬ್ ಪೂರಣ್ ವರ್ಮ, ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಸಿರಿಗ್ರಾಮೋದ್ಯೋಗ ಸಂಸ್ಥೆಯ ನಿರ್ದೇಶಕ ಕೆ.ಎನ್.ಜನಾರ್ದನ್, ನ್ಯಾಯವಾದಿ ಧನಂಜಯ್ ರಾವ್, ಅಖಿಲ ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನ, ಮಾಜಿ ಅಧ್ಯಕ್ಷ, ತಿಮ್ಮಪ್ಪ ಗೌಡ ಬೆಳಾಲು, ಡಿ.ಎ ರಹಿಮಾನ್, ಉದ್ಯಮಿ ಮೋಹನ ಶೆಟ್ಟಿಗಾರ್, ರಾಘವೇಂದ್ರ ನಾಯಕ್, ಕೊರಗಪ್ಪ ಗೌಡ ಚಾರ್ಮಾಡಿ, ಸೀತಾರಾಮ ಬೆಳಾಲ್, ರವೀಂದ್ರ ಶೆಟ್ಟಿ, ಬಳಂಜ, ಡಾ. ಶ್ರೀಧರ ಭಟ್, ರವಿ ಚಕ್ಕಿತ್ತಾಯ, ವಡಿವೇಲು ಗುರುವಾಯನಕೆರೆ, ಮಮತಾ ಶೆಟ್ಟಿ, ಅಡೂರು ವೆಂಕಟ್ರಾವ್, ಜಯಂತಿ ಪಾಲೇದು, ಗಣೇಶ್ ಗೌಡ,, ಪುಭಾಕರ ಪೂಸಂದೋಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಬೂದಪ್ಪ ಗೌಡ, . ಉದ್ಯಮಿ ರಾಘವೇಂದ್ರ ಬೈಪಾಡಿತ್ತಾಯ, ವಿವೇಕ್ ವಿನ್ಸೆಂಟ್ ಪಾಯಿಸ್, ಮಮತಾ ಎಂ. ಶೆಟ್ಟಿ,, ಶ್ಯಾಮ್ ಸುಂದರ್ ನಡ, ಶಶಿಧರ ಕಲ್ಮಂಜ, ಅರುಣ್ ಕುಮಾರ್, ಡಾ. ಬಿ.ಎ ಕುಮಾರ ಹಗ್ಗ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್, ನ್ಯಾಯವಾದಿ ಧನಂಜಯ್‌ ರಾವ್, ಅಡೂರು ವೆಂಕಟ್ರಾವ್,, ತಿಮ್ಮಪ್ಪ ಗೌಡ ಬೆಳಾಲು, ಪುಷ್ಪರಾಜ ಹೆಗ್ಡೆ ಮಡಂತ್ಯಾರು, ಉಜಿರ ಗ್ರಾ.ಪಂ ಅಧ್ಯಕ್ಷ ಮಾಜಿ ಅಧ್ಯಕ್ಷ ಪುಷ್ಪಾವತಿ ಆರ್ ಶೆಟ್ಟಿ, ವಿಠಲ ಶೆಟ್ಟಿ, ಲಾಯಿಲ, ಶಂಕರ ಹೇಡ, ಯೋಗೀಶ್ ಕುಮಾರ್ ನಡಕ್ಕರ, ಗಿರೀಶ್ ವೇಣೂರು, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ, ಕಿಶೋರ್ ಹಗ್ಡೆ, ಪುಷ್ಪರಾಜ ಹಗ್ಡೆ ಮಡಂತ್ಯಾರು, ರತ್ನವರ್ಮ ಬುಣು, ಪ್ರಶಾಂತ ಪಾರಂಕಿ, ದುಗೇಗೌಡ, ತಾಲೂಕು ಯೋಜನಾಧಿಕಾರಿಗಳು, ತಾಲೂಕಿನ ಗಣ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೧೫ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರಿಕರು, ಹಗಡೆ ಅಭಿಮಾನಿಗಳು ಮರವಣಿಗೆಯ ಜೊತ ಸಾಗಿದರು.

    Continue Reading

    LATEST NEWS

    ಬ್ರಹ್ಮಾವರ ಲಾಕಪ್ ಡೆ*ತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

    Published

    on

    ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನವೆಂಬರ್ 9ರಂದು ನಡೆದಿದ್ದ ಲಾಕಪ್ ಡೆ*ತ್ ನಲ್ಲಿ ಮೃ*ತಪಟ್ಟ ಕೇರಳ ಮೂಲದ ಬಿಜು ಮೋನ್ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.

    ಬಿಜು ಮೋನ್ ಮೈಮೇಲೆ ಕೆಲ ಗಾಯಗಳ ಗುರುತು, ಮೊಣಕಾಲಿನ ಕೆಳಗೆ ಕೆಲ ಗಾಯದ ಗುರುತು ಕಂಡುಬಂದಿತ್ತು ಎಂದಿರುವ ಬಿಜು ಮೋನ್ ಕುಟುಂಬಸ್ಥರು ಹೇಳಿದ್ದಾರೆ. ಲಾಕಪ್ ಡೆತ್ ಪ್ರಕರಣದ ಬಗ್ಗೆ ಸಿಒಡಿ ತನಿಖೆ ನಡೆಯುತ್ತಿದ್ದು, ಆರೋಪಿ ಕುಸಿದು ಬಿದ್ದು ಸಾವನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಬಳಿಕ ಲಾಕಪ್ ಡೆತ್ ಎಂದು ಪ್ರಕರಣ ಬೆಳಕಿಗೆ ಬಂತು ಎಂದವರು ಹೇಳಿದ್ದಾರೆ.

    ಇದೊಂದು ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿರುವ ಕುಟುಂಬಸ್ಥರು, ಸಿಐಡಿ ಮೂಲಕ ಕೂಲಂಕಷ ತನಿಖೆಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಐಡಿಗೂ ಪತ್ರ ಮೂಲಕ ಮನವಿ ಮಾಡಿದ್ದಾರೆ. ನಮಗೆ ನ್ಯಾಯ ಬೇಕು, ತಪ್ಪಿತಸ್ಥ ಪೊಲೀಸರಿಗೆ ಕಠಿಣ ಶಿಕ್ಷೆಯಾಗ ಬೇಕು ಎಂದು ಆಗ್ರಹಿಸಿರುವ ಬಿಜು ಮೋನ್ ಸಹೋದರ ಬಿನು ಯೋಹನ್ನಾನ್ ಹೇಳಿದ್ದಾರೆ. ಸಿಐಡಿ ಅಧಿಕಾರಿಗಳು ಹೇಳಿಕೆ ದಾಖಲಿಸಲು ಕರೆದ ಹಿನ್ನೆಲೆಯಲ್ಲಿ ನಾವು ಉಡುಪಿಗೆ ಬಂದಿದ್ದೇವೆ ಎಂದವರು ತಿಳಿಸಿದರು.

    ನನ್ನ ಸಹೋದರನನ್ನು ಪೊಲೀಸರು ಕಾನೂನು ಪ್ರಕಾರವಾಗಿ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ ಎಂದ ಅವರು ಮಹಿಳೆಯೋರ್ವಳ ದೂರಿನ ಹಿನ್ನೆಲೆಯಲ್ಲಿ ನನ್ನ ಸಹೋದರನನ್ನ ಬಂಧಿಸಲಾಗಿದೆ ಎಂದಿದ್ದರು. ಆದರೆ ದೂರು ಕೊಟ್ಟ ಮಹಿಳೆ, ಅವರ ಕೊಟ್ಟ ದೂರಿನ ಪ್ರತಿಯ ಬಗ್ಗೆ ಮಾಹಿತಿ ನೀಡಿಲ್ಲ.

    ಇವೆಲ್ಲವನ್ನೂ ನಾವು ಕೇರಳ ಮುಖ್ಯಮಂತ್ರಿಯ ಗಮನಕ್ಕೆ ತಂದಿದ್ದೇವೆ. ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದೇವೆ ಎಂದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಮೇರೆಗೆ ಮೃತದೇಹ ಪರಿಶೀಲಿಸಲಾಗಿತ್ತು. ದೇಹದಲ್ಲಿ ಸಾಕಷ್ಟು ಗಾಯದ ಗುರುತುಗಳು ಕಂಡು ಬಂದಿದ್ದವು. ಹೀಗಾಗಿ ಬ್ರಹ್ಮಾವರ ಪೊಲೀಸರ ಮೇಲೆ ತುಂಬಾ ಅನುಮಾನವಿದೆ ಎಂದು ಯೋಹಾನ್ನನ್ ಹೇಳಿದರು.

    Continue Reading

    LATEST NEWS

    ಮೂರು ಪೂರಿಗಳನ್ನು ಒಟ್ಟಿಗೆ ತಿಂದು 6ನೇ ತರಗತಿ ವಿದ್ಯಾರ್ಥಿ ಸಾವು !

    Published

    on

    ಮಂಗಳೂರು/ಹೈದರಾಬಾದ್: 11 ವರ್ಷದ ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಅಘಾತಕಾರಿ ಘಟನೆ ಹೈದರಾಬಾದ್ ನ ಶಾಲೆಯೊಂದರಲ್ಲಿ ನಡೆದಿದೆ.


    6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮನೆಯಿಂದ ತಂದಿದ್ದ ಪೂರಿಯನ್ನು, ಮಧ್ಯಾಹ್ನದ ಊಟಕ್ಕೆ ಕೂತಿದ್ದ ಸಮಯದಲ್ಲಿ ಒಂದೇ ಬಾರಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಬಾಯಿಗೆ ಹಾಕಿಕೊಂಡಿದ್ದ. ಈ ವೇಳೆ ಉಸಿರಾಡಲು ಸಾಧ್ಯವಾಗದೆ ವಿದ್ಯಾರ್ಥಿ ಸಾವನ್ನಪಿದ್ದಾನೆ.

    ಇದನ್ನೂ ಓದಿ: ಶಾಲೆಯಲ್ಲಿ ಅ*ಪ್ರಾಪ್ತೆಯರ ಜೊತೆ ಮೃ*ಗೀಯ ವರ್ತನೆ ತೋರಿದ ಶಿಕ್ಷಕ ಅರೆಸ್ಟ್!!
    ಶಾಲೆಯ ಸಿಬ್ಬಂದಿಗಳು ತಕ್ಷಣವೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದಾಗ ಅದಗಾಲೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ಗೊತ್ತಾಗಿದೆ.

    Continue Reading

    LATEST NEWS

    Trending