LATEST NEWS
60,000 ದುಡಿದರೂ, 30 ಲಕ್ಷ ಜೀವನಾಂಶ ಕೋರಿಕೆ; ವೈರಲ್ ಆಯ್ತು ಪೋಸ್ಟ್…!!!!
ವ್ಯಕ್ತಿಯೊಬ್ಬರು ಪತ್ನಿಯ ಕ್ರೌರ್ಯದಿಂದ ಬೇಸತ್ತು, 2014 ರಲ್ಲಿ ಕಾನೂನು ಹೋರಾಟಕ್ಕೆ ಇಳಿದು ಕೊನೆಗೂ ಇದೀಗ ಪತ್ನಿಯ ಕ್ರೌರ್ಯತೆಯ ಆಧಾರದ ಮೇಲೆ ಡಿವೋರ್ಸ್ ಪಡೆದುಕೊಂಡಿದ್ದಾರೆ. ಆದರೆ ಮಕ್ಕಳಿಲ್ಲದಿದ್ದರೂ, ಆಕೆ ತಿಂಗಳಿಗೆ 60 ಸಾವಿರ ಸಂಪಾದನೆ ಮಾಡಿ, ಆರ್ಥಿಕವಾಗಿ ಸಬಲೆಯಾಗಿದ್ದರೂ 30 ಲಕ್ಷ ರೂಪಾಯಿ ಜೀವನಾಂಶ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ.
ಇಂದಿನ ಕಾಲದಲ್ಲಿ ವಿಚ್ಛೇದನದ ಸಂಖ್ಯೆ ಬಹಳ ಹೆಚ್ಚಾಗುತ್ತಿದೆ. ಆಸ್ತಿ, ಹಣ ಕಸಿದುಕೊಳ್ಳುವ ಸಲುವಾಗಿಯೂ ಡಿವೋರ್ಸ್ ಪಡೆದುಕೊಳ್ಳುವವರಿದ್ದಾರೆ. ಹೀಗೆ ಪತಿ ಪತ್ನಿಯರ ನಡುವೆ ಡಿವೋರ್ಸ್ ಆದರೆ ಪತಿಯಾದವನು ಮಾಜಿ ಪತ್ನಿಗೆ ಇಂತಿಷ್ಟು ಜೀವನಾಂಶ ನೀಡಬೇಕು ಎಂಬ ಕಾನೂನು ಇದೆ. ಈ ಕಾನೂನುಗಳು ಕೆಲ ಅಮಾಯಕ ಪುರುಷರನ್ನು ಕಷ್ಟಕ್ಕೆ ತಳ್ಳುತ್ತವೆ ಮತ್ತು ಅವರನ್ನು ಶೋಷಿಸುತ್ತಿವೆ ಎಂದು ಮಹಿಳೆಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಮದುವೆಯಾದ ಬಳಿಕ ಬೇಕಂತಲೇ ಮೋಸ ಮಾಡಿ ಹೋಗುವವರಿಗೆ, ಆರ್ಥಿಕವಾಗಿ ಸಬಲವಾಗಿರುವ ಹೆಣ್ಣಿಗೆ ದೊಡ್ಡ ಮೊತ್ತದ ಜೀವನಾಂಶ ಕೊಡಬೇಕಾಗಿಲ್ಲ ಎಂದು ಹಲವರು ಹೇಳುತ್ತಾರೆ. ಆದ್ರೆ ವಿಚ್ಛೇದನದ ಬಳಿಕ ಪತ್ನಿಗೆ ಇಂತಿಷ್ಟು ಜೀವನಾಂಶ ಕೊಡಲೇಬೇಕು ಎಂಬುದು ಕಾನೂನಿನಲ್ಲಿದೆ. .
ದೀಪಿಕಾ ನಾರಾಯಣ ಭಾರದ್ವಾಜ್ (DeepikaBhardwaj) ಎಂಬವರು ಈ ಕುರಿತ ವಾಟ್ಸಾಪ್ ಚಾಟ್ ಸ್ಕ್ರೀನ್ ಶಾಟ್ ಒಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು, ‘ಈ ವ್ಯಕ್ತಿ 10 ವರ್ಷಗಳ ಕಾನೂನು ಹೋರಾಟ ಮಾಡಿ ಕೊನೆಗೂ ಪತ್ನಿಯ ಕ್ರೌರ್ಯತೆಯ ಆಧಾರದ ಮೇಲೆ ಡಿವೋರ್ಸ್ ಪಡೆದುಕೊಂಡ. ಆದ್ರೆ ಆತನ ಮಾಜಿ ಪತ್ನಿ ತಿಂಗಳಿಗೆ 60 ಸಾವಿರ ದುಡಿದರೂ ಆಕೆಗೆ 30 ಲಕ್ಷ ರೂಪಾಯಿ ಜೀವನಾಂಶ ಕೊಡಬೇಕಂತೆ. ಮಹಿಳೆಯರ ಸಬಲೀಕರಣಕ್ಕಾಗಿ ರಚಿಸಲಾದ ಕಾನೂನುಗಳು ಪುರುಷರನ್ನು ದುರ್ಬಲಗೊಳಿಸುತ್ತಿವೆ ಮತ್ತು ಶೋಷಿಸುತ್ತಿವೆ’ ಎಂದು ಸುದೀರ್ಘ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ಮೂಲಕ ಪುರುಷರಿಗೂ ಸಮಾನ ನ್ಯಾಯವನ್ನು ನೀಡಬೇಕು ಎಂಬುದನ್ನು ಕೇಳಿಕೊಂಡಿದ್ದಾರೆ.
watch this :
FILM
ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕ್ರಿಕೆಟಿಗ ಕೆ.ಎಲ್.ರಾಹುಲ್
ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಎಲ್ ರಾಹುಲ್ ಅಭಿಮಾನಿಗಳೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ.
ದಂಪತಿ Instagram ನಲ್ಲಿ ಜಂಟಿಯಾಗಿ ಪೋಸ್ಟ್ ಮಾಡಿದ್ದಾರೆ. ‘ದೇವರ ಸುಂದರ ಆಶೀರ್ವಾದ 2025ರಲ್ಲಿ ಬರಲಿದೆ’ ಎಂದು ಅಥಿಯಾ ದಂಪತಿ ಪೋಷಕರಾಗುತ್ತಿರುವ ಖುಷಿಯ ಸುದ್ದಿಯನ್ನು ತಿಳಿಸಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು ದಂಪತಿಗೆ ಶುಭ ಹಾರೈಸುತ್ತಿದ್ದಾರೆ.
ಕಳೆದ ವರ್ಷ ಜನವರಿ 23ರಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಜೊತೆ ಅಥಿಯಾ ಹಲವು ವರ್ಷಗಳ ಪ್ರೀತಿಗೆ ವಿವಾಹದ ಬೆಸುಗೆ ಬೆಸೆದಿದ್ದರು.
ಇದನ್ನು ಓದಿ:ಇನ್ಮುಂದೆ ಮಹಿಳೆಯರ ಬಟ್ಟೆ ಅಳತೆ ಪುರುಷ ಟೈಲರ್ ತೆಗೆಯೋ ಹಾಗಿಲ್ಲ..!
DAKSHINA KANNADA
ನೆಲ್ಯಾಡಿ : ಜಾಗದ ವಿಷಯಕ್ಕೆ ಜಗಳ; ಕತ್ತಿಯಿಂದ ವ್ಯಕ್ತಿಯ ಕಡಿದು ಗಲಾಟೆ ಅಂತ್ಯ
ನೆಲ್ಯಾಡಿ : ಜಾಗದ ವಿಷಯಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ ಕೃಷಿಕರೋರ್ವನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ದ.ಕ.ಜಿಲ್ಲೆ ನೆಲ್ಯಾಡಿ ಸಮೀಪ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.
ಪ್ರಗತಿಪರ ಕೃಷಿಕ ರಮೇಶ ಗೌಡ (51) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ರಮೇಶ್ ನ ಹತ್ತಿರದದ ಸಂಬಂಧಿ ಹರೀಶ್ ಆರೋಪಿಯಾಗಿದ್ದು, ಇಂದು (ನ.8) ಮುಸ್ಸಂಜೆ ಸರಿಸುಮಾರು 7 ಗಂಟೆ ವೇಳೆ ಕೃತ್ಯ ಎಸಗಿದ್ದಾನೆ.
ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
LATEST NEWS
ಎತ್ತಿನಹೊಳೆ ಕಾಮಗಾರಿ ನಾಲೆಯ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾ*ವು
ಮಂಗಳೂರು/ತಿಪಟೂರು : ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂ*ಡಿಗೆ ಬಿ*ದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರಿನಲ್ಲಿ ನಡೆದಿದೆ. ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃ*ತ ಬಾಲಕರು.
ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿ*ದ್ದು ಸಾ*ವನ್ನಪ್ಪಿದ್ದಾರೆ ಎಂಬ ಹೇಳಲಾಗಿದೆ.
ಇದನ್ನೂ ಓದಿ : BBK11: ಬಿಗ್ಬಾಸ್ ಮನೆಯಲ್ಲಿ ಸಿಡಿದೆದ್ದ ಮಹಿಳಾ ಸ್ಪರ್ಧಿಗಳು.. ಗೋಲ್ಡ್ ಸುರೇಶ್ ಗೆ ಈ ವಾರದ ಕಳಪೆ
ಗುರುವಾರ(ನ.7) ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಕ್ಕಳು, ನಂತರ ಹೊರ ಹೋಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ(ನ.8) ಬೆಳಿಗ್ಗೆ ಬಾಲಕರ ಶ*ವ ಪತ್ತೆಯಾಗಿದೆ.
- DAKSHINA KANNADA7 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- LATEST NEWS4 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- FILM3 days ago
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
- LATEST NEWS5 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್