ಮಂಗಳೂರಿನಲ್ಲಿ ಸಂಭ್ರಮದ 65ನೇ ಕನ್ನಡ ರಾಜ್ಯೋತ್ಸವ..
ಮಂಗಳೂರು : 65ನೇ ಕನ್ನಡ ರಾಜ್ಯೋತ್ಸವವನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತದ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸಂಘ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಶಾಸಕರುಗಳಾದ ಡಾಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ್ ,ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಪೊಲೀಸ್ ಆಯುಕ್ತರಾದ ವಿಕಾಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮತ್ತಿತರ ಹಿರಿಯ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.