Connect with us

    LATEST NEWS

    ದೇಶದಲ್ಲಿ ಶೀಘ್ರದಲ್ಲೇ ‘6G ಸೇವೆ’ ಆರಂಭ : ಪ್ರಧಾನಿ ಮೋದಿ

    Published

    on

    ನವದೆಹಲಿ: ಭಾರತದಲ್ಲಿ ಸಂವಹನ ಕ್ರಾಂತಿಯ ಕ್ಷೇತ್ರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಾಧಿಸಿರುವ ಪ್ರಗತಿ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯಾಗಿದೆ ಎಂದರು. 5G ರೂಪಾಂತರವನ್ನು ನೀಡಿದ್ದು, ನಾವು ಕೂಡ ಶೀಘ್ರದಲ್ಲೇ 6G ನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.

    ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರ ಉದ್ಘಾಟನೆಯ ಸಂದರ್ಭದಲ್ಲಿ, 21ನೇ ಶತಮಾನದಲ್ಲಿ, ಭಾರತದ ಮೊಬೈಲ್ ಮತ್ತು ಟೆಲಿಕಾಂ ಪ್ರಯಾಣವು ಇಡೀ ವಿಶ್ವಕ್ಕೆ ವಿಶೇಷ ಆಸಕ್ತಿಯ ವಿಷಯವಾಗಿದೆ ಎಂದು ಹೇಳಿದರು. ಇಂದಿನಂತೆ ಭಾರತದಲ್ಲಿ 120 ಕೋಟಿ ಮೊಬೈಲ್ ಬಳಕೆದಾರರಿದ್ದು, 95 ಕೋಟಿ ಇಂಟರ್ನೆಟ್ ಬಳಕೆದಾರರಿದ್ದಾರೆ ಎಂದು ಹೇಳಿದರು. ಈ ಅಂಕಿ ಅಂಶವು ಬಹಳ ಮುಖ್ಯವಾಗಿದೆ. ಭಾರತ ಇಡೀ ವಿಶ್ವದ ಗಮನ ಸೆಳೆದಿದೆ. ಇದು ದೇಶದ ಮಹತ್ವದ ಸಾಧನೆಯಾಗಿದೆ.

    ಭಾರತದಲ್ಲಿ ಇಂದು ಟೆಲಿಕಾಂ ಕ್ಷೇತ್ರದಲ್ಲಿ ಆಗಿರುವ ಪ್ರಗತಿ ಊಹೆಗೂ ನಿಲುಕದ್ದು ಎಂದು ಪ್ರಧಾನಿ ಮೋದಿ ಹೇಳಿದ್ದು, ಇಂದಿನ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ ಎಂದರು. ಇದು ಗುಣಮಟ್ಟ ಮತ್ತು ಸೇವೆಯ ಸಂಗಮವಾಗಿದೆ. ITU ಮತ್ತು ಇಂಡಿಯಾ ಮೊಬೈಲ್ ಕಾಂಗ್ರೆಸ್‌’ನ ಒಗ್ಗೂಡುವಿಕೆ ಸಮಯದ ಅಗತ್ಯವಾಗಿದೆ ಮತ್ತು ಕ್ರಾಂತಿಕಾರಿ ಉಪಕ್ರಮವಾಗಿದೆ. ಭಾರತವು ಸಾವಿರಾರು ವರ್ಷಗಳಿಂದ ವಸುಧೈವ ಕಟುಂಬಕಂ ಎಂಬ ಸಂದೇಶವನ್ನ ನೀಡಿದೆ ಎಂದರು. ಸಂವಹನದಲ್ಲಿ ಸಾಧನೆ ಮಾಡುವುದು ಇಂದಿನ ಭಾರತದ ಧ್ಯೇಯವಾಗಿದೆ. ಭಾರತ ವಿಶ್ವದಲ್ಲಿ ಪ್ರಗತಿಯ ಹಾದಿಯನ್ನು ಸುಗಮಗೊಳಿಸುತ್ತಿದೆ ಎಂದು ಹೇಳಿದರು.

    LATEST NEWS

    ಆಳ್ವಾಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ ಉದ್ಘಾಟನೆ

    Published

    on

    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ)ದ ವತಿಯಿಂದ ವಿದ್ಯಾಗಿರಿಯ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ನಿರ್ಮಾಣಗೊಂಡಿರುವ ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರವು ಸೋಮವಾರ ಉದ್ಘಾಟನೆಗೊಂಡಿತು.

    ಕೇಂದ್ರವನ್ನು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್ ಸತೀಶ್ ರೈ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜೀವನದಲ್ಲಿ ನಿರ್ದಿಷ್ಟ ಗುರಿ ಮತ್ತು ಸ್ಪಷ್ಟತೆ ಇರಲಿ. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ನುಡಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ವಿನಿಯೋಗಿಸಿಕೊಂಡರೆ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ನುಡಿದರು.

    ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಉಪಸ್ಥಿತರಿದ್ದು ಮಾತನಾಡಿದರು. ಲೋಕನಾಥ ಬೋಳಾರ್ ಅವರ ಪತ್ನಿ ಡಾ. ದೇವಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಎಸ್. ರಮಾನಂದ ಶೆಟ್ಟಿ, ಉದ್ಯಮಿ ಕಿಶೋರ್ ಶೆಟ್ಟಿ, ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಆಲ್ವಿನ್ ಪಿಂಟೊ, ಯುವಜನ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ ಸೋಜಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.

    Continue Reading

    LATEST NEWS

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ಯುವಕ ಮೃತ್ಯು

    Published

    on

    ಸುಳ್ಯ: ಶಂಕಿತ ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯಲ್ಲಿ ನಡೆದಿದೆ.

    ಸುಡಿಂಕಿರಿ ಮೂಲೆಯ ಚಂದ್ರಶೇಖರ (36)ರವರು ಶಂಕಿತ ಜ್ವರದ ಹಿನ್ನಲೆ ಕಳೆದ 1 ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ತಂದೆ, ತಾಯಿ, ತಂಗಿ ಇದ್ದಾರೆ.

    Continue Reading

    DAKSHINA KANNADA

    WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    Published

    on

    ಬೆಳ್ತಂಗಡಿ : ಗುರುವಾಯನ ಕೆರೆಯ ಬಳಿ ಇರುವ ಶೆಣೈ ಹೊಟೇಲ್ ಮುಂಭಾಗದಲ್ಲಿ ಎರಡು ಬೈಕ್ ನಡುವೆ ಅಪಘಾ*ತ ಸಂಭವಿಸಿದೆ.  ಓವರ್ ಟೇಕ್ ಮಾಡಲು ಹೋಗಿ ಈ ದುರಂ*ತ ನಡೆದಿದೆ.

    ಘಟನೆಯಲ್ಲಿ ಇಬ್ಬರಿಗೆ ಗಾ*ಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾ*ತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

     

    Continue Reading

    LATEST NEWS

    Trending