Monday, January 24, 2022

‘ರಂಗಿನಾಟ’ ನಡೆದು 7 ತಿಂಗಳ ನಂತರ ಲೀಕಾಯ್ತು ಡಾಕ್ಟ್ರ ಪುರಾಣ: ಅಮಾನತು ಮುಚ್ಚಿಟ್ಟ ಜಿಲ್ಲಾಡಳಿತ

ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಜಿಲ್ಲಾಡಳಿತಕ್ಕೆ 7 ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನ ಕಾರ್ಯದರ್ಶಿ ನ.8ರಿಂದ ಅಮಾನತು ಮಾಡಲಾಗಿತ್ತು.


ಈ ವೀಡಿಯೋ ಏಪ್ರಿಲ್‌ನಲ್ಲೇ ವೈರಲ್‌ ಆಗಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಕೆಯಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ ತನಿಖೆ ನಡೆಸಲಾಗಿತ್ತು.

ಪ್ರಾಥಮಿಕ ಹಂತದ ತನಿಖೆಯ ವೇಳೆ ತಪ್ಪೆಸಗಿರುವುದು ಸಾಬೀತಾಗಿರುವುದರಿಂದ ಈ ಬಗ್ಗೆ ಸರಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಇದರನ್ವಯ ಜಿಲ್ಲಾಧಿಕಾರಿ ಅ.26ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಈ ವರದಿಯನ್ವಯ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಯಾಗಿರುವ ಡಾ.ರತ್ನಾಕರ್‌ ಅವರ ಮೇಲಿ ಆರೋಪ ಸಾಬೀತಾಗಿದ್ದು, ಅಮಾನತಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ಈ ಮಧ್ಯೆ ಅ.29ರಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಆಯುಕ್ತರು ಡಾ. ರತ್ನಾಕರ್‌ ಅವರನ್ನು ಅಮಾನತು ಮಾಡಲು ಸರ್ಕಾರಕ್ಕೆ ಮತ್ತೆ ಶಿಫಾರಸ್ಸು ಮಾಡಿದ್ದರು.

ಜಿಲ್ಲಾಧಿಕಾರಿ ಮತ್ತು ಆಯುಕ್ತರ ವರದಿಯನ್ವಯ ನ.8ರಂದು ಡಾ. ರತ್ನಾಕರ್‌ ಅವರನ್ನು ಲೈಂಗಿಕ ಕಿರುಕುಳ ಅಧಿನಿಯಮ 2013 ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮ 1957ರನ್ವಯ ಕೂಡಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಕುಟುಂಬ ಆರೋಗ್ಯ ಕುಟುಂಬ ಕಲ್ಯಾನ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದರು.

ಈ ಆದೇಶದ ಪ್ರತಿಯನ್ನು ದ.ಕ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೇರಿ 9 ಸರ್ಕಾರದ ಇಲಾಖಾ ವಿಭಾಗಗಳಿಗೆ ಡಾ.ರತ್ನಾಕರ್‌ ಅವರ ಅಮಾನತಿನ ಆದೇಶದ ಪ್ರತಿಯನ್ನು ರವಾನಿಸಲಾಗಿತ್ತು.

ಆದರೆ ಅಮಾನತ್ತಿನ ವಿಷಯವನ್ನು ಜಿಲ್ಲಾಡಳಿತ ಮಾಧ್ಯಮಗಳಿಗೆ ಬಹಿರಂಗಗೊಳಿಸದೇ ಮುಚ್ಚಿಟ್ಟ ಆರೋಪ ಕೇಳಿಬಂದಿದೆ.
ಇಂದು ಡಾ. ರತ್ನಾಕರ್‌ ಈ ರಂಗಿನಾಟದ ವೀಡಿಯೋ ಮತ್ತು ಫೋಟೊ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ಮಾಧ್ಯಮಗಳಿಗೆ ಅಮಾನತು ಆದೇಶ ಹೊರಡಿಸಿದ್ದರು.
ಸರ್ಕಾರದ ಕಾನೂನಿನ ಪ್ರಕಾರ ಸರ್ಕಾರಿಯ ಅಧಿಕಾರಿಯ ಅಮಾನತು ಆದೇಶಕ್ಕೆ ಕೇವಲ 6 ತಿಂಗಳ ಗಡುವುದು ಇದೆ.

ಇದೀಗ 6 ತಿಂಗಳು ಕಳೆದಿರುವುದರಿಂದ ಡಾ.ರತ್ನಾಕರ್‌ ಮತ್ತೆ ಅದೇ ಸೇವೆಗೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಅಲ್ಲಿನ ಸಂತ್ರಸ್ತ ಮಹಿಳೆಯರೇ ಈ ವಿಡಿಯೋ ಲೀಕ್‌ ಮಾಡಿದ್ದಾರೆಂಬ ಮಾತುಗಳು ಕೇಳಿಬಂದಿವೆ.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಕವಿ ಮುದ್ದಣ ಜನ್ಮದಿನಾಚರಣೆ ಪ್ರಯುಕ್ತ 150 ರೂ. ನಾಣ್ಯ ಬಿಡುಗಡೆಗೊಳಿಸಿದ ಸಂಸದ ನಳಿನ್‌

ಮಂಗಳೂರು: ಹೊಸಗನ್ನಡದ ಮುಂಗೋಳಿ ಎಂದು ಪ್ರಖ್ಯಾತರಾಗಿದ್ದ ಕವಿ ಮುದ್ದಣ ಅವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ 150 ರೂ. ಹೊಸ ನಾಣ್ಯವನ್ನು ಇಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅನಾವರಣ.ಬಳಿಕ...

‘ಪುಷ್ಪ’ ಸಿನಿಮಾ ನೋಡಿ ಅಪ್ರಾಪ್ತರಿಂದ ಯುವಕನ ಬರ್ಬರ ಹತ್ಯೆ- ಕೃತ್ಯದ ವೀಡಿಯೋ ಚಿತ್ರೀಕರಣ

ನವದೆಹಲಿ: ಟಾಲಿವುಡ್‌ನ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಹಿಟ್‌ 'ಪುಷ್ಪ' ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.ಕೊಲೆಗೀಡಾದ ಯುವಕ...