Connect with us

DAKSHINA KANNADA

10 ದಿನಗಳಲ್ಲಿ 7 NDPS ಪ್ರಕರಣ-1.90 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಶ : ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್..!

Published

on

ಮಂಗಳೂರು: ಹೊಸ ವರ್ಷ ಆರಂಭವಾಗುತ್ತಿದ್ದಂತೆ ಮಂಗಳೂರಿನಲ್ಲಿ ಮತ್ತೆ ಸಕ್ರೀಯವಾಗಿರುವ ಮಾದಕ ಜಾಲದ ವಿರುದ್ದ ಪೊಲೀಸರು ಸಮರ ಸಾರಿದ್ದಾರೆ.

ವೈದ್ಯರು, ವೈದ್ಯಕೀಯ ಕಲಿಕೆಯ ವಿದ್ಯಾರ್ಥಿಗಳು, ಕಾಲೇಜು, ನರ್ಸಿಂಗ್ ವಿದ್ಯಾರ್ಥಿಗಳು ಈ ಜಾಲದಲ್ಲಿ ತೊಡಗಿಸಿಕೊಂಡಿರುವುದು ಆತಂಕ ಸೃಷ್ಟಿಸಿದೆ.

2023 ರ ಹೊಸ ವರ್ಷದ ಮೊದಲ ಹತ್ತು ದಿನಗಳ ಅವಧಿಯಲ್ಲಿ 7 NDPS  (ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್‌ಟೆನ್ಸಸ್) ಪ್ರಕರಣಗಳು ಪತ್ತೆಯಾಗಿದೆ ಮತ್ತು 1.90 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

60 ಸಾವಿರ ರೂ. ಮೌಲ್ಯದ ಎಂಡಿಎಂಎ (ಮೀಥೈಲೆನೆಡಿಯಾಕ್ಸಿ ಮೆಥಾಂಫೆಟಮೈನ್),

90 ಸಾವಿರ ರೂ. ಮೌಲ್ಯದ 4 ಕೆ.ಜಿ.ಗಾಂಜಾ, 40 ಸಾವಿರ ರೂ. ಮೌಲ್ಯದ 8 ಗ್ರಾಮ್ ಮೆಥಾಂಫೆಟಮೈನ್ ವಶಪಡಿಸಿಕೊಳ್ಳಲಾಗಿದೆ.

2022 ರಲ್ಲಿ  59,59,280 ರೂ. ಮೌಲ್ಯದ ಮಾದಕ ವಸ್ತುಗಳ ವಶ:

2022ರಲ್ಲಿ ಒಟ್ಟು 398 ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, 511 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಅವರಿಂದ 59,59,280 ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

19,50,160 ರೂ . ಮೌಲ್ಯದ 596 ಗ್ರಾಮ್ 010 ಎಂಎಲ್ ಎಂಡಿಎಂಎ (ಮೀಥೈಲೆನೆಡಿಯಾಕ್ಸಿ ಮೆಥಾಂಫೆಟಮೈನ್), 7 ಸಾವಿರ ರೂ. ಮೌಲ್ಯದ 67 ಗ್ರಾಮ್ ಅಫೀಮ್, 37,68,120 ರೂ.ಮೌಲ್ಯದ 192 ಕೆ.ಜಿ. ಮತ್ತು 48 ಗ್ರಾಮ್ ಗಾಂಜಾ, 2,34,000 ರೂ. ಮೌಲ್ಯದ 57 ಗ್ರಾಮ್ ಮೆಥಾಂಫೆಟಮೈನ್ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending